HomeLatest NewsBREAKING: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ ಪ್ರಕರಣ: 8 ಆರೋಪಿಗಳು ಅರೆಸ್ಟ್

BREAKING: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ ಪ್ರಕರಣ: 8 ಆರೋಪಿಗಳು ಅರೆಸ್ಟ್

ಬಾಗಲಕೋಟೆ: ಬಾಗಲಕೋಟೆಯಲ್ಲಿ ಶಿವಾಜಿ ಮಹಾರಾಜರ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಚಪ್ಪಲಿ ತೂರಾಟ ನಡೆದಿರುವ ಘಟನೆಯನ್ನು ಪೊಲೀಸರು ಗಂಭೀರವಾಗಿ ಪರಿಗಣಿಸಿದ್ದು, 8 ಆರೋಪಿಗಳನ್ನು ಬಂಧಿಸಲಾಗಿದೆ.

ಕಲ್ಲು ತೂರಾಟದಲ್ಲಿ ಪೊಲೀಸ್​​ ಸಿಬ್ಬಂದಿ ಹಾಗೂ ಓರ್ವ ಸಾರ್ವಜನಿಕ ಗಾಯಗೊಂಡಿದ್ದಾರೆ, ಕಲ್ಲು, ಚಪ್ಪಲಿ ತೂರಾಟದಿಂದಾಗಿ ಸ್ಥಳದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದೆ. ಕಲ್ಲು ತೂರಾಟದ ವೇಳೆ ತರಕಾರಿ ಮಾರುಕಟ್ಟೆಯ ಮೂರು ತಳ್ಳುಗಾಡಿಗಳಿಗೆ ದುಷ್ಕರ್ಮಿಗಳು ಬೆಂಕಿ ಹಚ್ಚಿರುವ ಘಟನೆಯೂ ನಡೆದಿದೆ. ಎಚ್ಚೆತ್ತ ಸ್ಥಳದಲ್ಲಿದ್ದ ಪೊಲೀಸ್ ಸಿಬ್ಬಂದಿ, ಕೂಡಲೇ ಬೆಂಕಿ ನಂದಿಸುವ ಕೆಲಸ ಮಾಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಘಟನೆ ನಡೆದ ಮರು ಕ್ಷಣವೇ ಜನರನ್ನು ಚದುರಿಸಿ ಪೊಲೀಸರು ಪರಿಸ್ಥಿತಿ ತಿಳಿಗೊಳಿಸುವ ಯತ್ನ ಮಾಡಿದ್ದು, ಮುಂಜಾಗೃತಾ ಕ್ರಮವಾಗಿ ಪಂಕಾ ಮಸೀದಿ ಮತ್ತು ಕೊತ್ತಲೇಶ್ವರ ದೇಗುಲ ಬಳಿ ಹೆಚ್ಚಿನ ಭದ್ರತೆ ಒದಗಿಸಲಾಗಿದೆ.

ಪರಿಸ್ಥಿತಿ ತಿಳಿಗೊಳಿಸಲು ನಿಷೇಧಾಜ್ಞೆ ಜಾರಿಗೊಳಿಸಲಾಗಿದ್ದು, ಹೆಚ್ಚುವರಿ ಭದ್ರತೆ ನಿಯೋಜಿಸಲಾಗಿದೆ. ಪ್ರಕರಣ ಸಂಬಂಧ 8 ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಬಾಗಲಕೋಟೆ ಜಿಲ್ಲಾ ಎಸ್ ಪಿ ಮಾಹಿತಿ ನೀಡಿದ್ದಾರೆ.

ಮೆರವಣಿಗೆ ಬರುತ್ತಿದಂತೆ ತನ್ವೀರ್ ಹವಲ್ದಾರ್ ಎಂಬಾತ ಮೊದಲಿಗೆ ಎರಡು ಕಲ್ಲುಗಳನ್ನು ತೂರಿದ್ದಾನೆ ಬಳಿಕ ಚಪ್ಪಲಿ ತೂರಾಟ ನಡೆದಿದೆ. ಹೀಗೆ ಸಾಲು ಸಾಲಾಗಿ ಕಲ್ಲು ತೂರಿದ್ದಾರೆ. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಪೊಲೀಸರು ತನ್ವೀರ್ ಹವಾಲ್ದಾರ್, ಸರ್ಫರಾಜ್ ಚಾವುಸ್, ಫಯಾಜ್, ಸದ್ದಾಮ್ ಲಾಕ್ ಸೇರಿದಂತೆ 8 ಆರೋಪಿಗಳನ್ನು ಬಂಧಿಸಿದ್ದಾರೆ.

ಕಲ್ಲು ತೂರಾಟದ ವೇಳೆ ಹಿಂದೂ ಕಾರ್ಯಕರ್ತ ಪ್ರಕಾಶ್ ಅರಕೇರಿ ಎಂಬುವರ ತಲೆಗೆ ಗಾಯವಾಗಿದ್ದು, ಅವರನ್ನು ಬಾಗಲಕೋಟೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಬಾಗಲಕೋಟೆ ಎಸ್ಪಿ ಸಿದ್ಧಾರ್ಥ್ ಪ್ರತಿಕ್ರಿಯಿಸಿದ್ದು, ​​ ಶಿವಾಜಿ ಜಯಂತಿ ಮೆರವಣಿಗೆ ಮಸೀದಿ ಬಳಿ ಬಂದಾಗ ಎರಡು ಕಲ್ಲು ಬಂದು ಬಿದ್ದಿವೆ. ಸದ್ಯ ಪರಿಸ್ಥಿತಿ ತಿಳಿಯಾಗಿದ್ದು, ನಾವು ವಿಡಿಯೋಗಳನ್ನು ಪರಿಶೀಲನೆ ಮಾಡುತ್ತಿದ್ದೇವೆ. ಬಾಗಲಕೋಟೆಯಲ್ಲಿ ಹೆಚ್ಚಿನ ಭದ್ರತೆ ‌ಕಲ್ಪಿಸಲಾಗಿದ್ದು,ಆರೋಪಿಗಳನ್ನ ಬಂಧಿಸಲಾಗಿದೆ ಎಂದಿದ್ದಾರೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular