HomeKarnatakaBREAKING NEWS: ಟ್ರ್ಯಾಕ್ಟರ್-ಬಸ್ ಡಿಕ್ಕಿ: ಭೀಕರ ಅಪಘಾತದಲ್ಲಿ ನಾಲ್ವರು ವಿದ್ಯಾರ್ಥಿಗಳು ಸಾವು

BREAKING NEWS: ಟ್ರ್ಯಾಕ್ಟರ್-ಬಸ್ ಡಿಕ್ಕಿ: ಭೀಕರ ಅಪಘಾತದಲ್ಲಿ ನಾಲ್ವರು ವಿದ್ಯಾರ್ಥಿಗಳು ಸಾವು

ಬಾಗಲಕೋಟೆ: ಟ್ರ್ಯಾಕ್ಟರ್, ಶಾಲಾ ಬಸ್ ಡಿಕ್ಕಿಯಾಗಿ ನಾಲ್ವರು ವಿದ್ಯಾರ್ಥಿಗಳು ಸಾವು ಕಂಡ ಘಟನೆ ಬಾಗಲಕೋಟೆ ಜಿಲ್ಲೆ ಜಮಖಂಡಿ ತಾಲೂಕಿನ ಅಲಗೂರು ಗ್ರಾಮದ ಬಳಿ ತಡರಾತ್ರಿ 12:30ಕ್ಕೆ ಸಂಭವಿಸಿದೆ.

ಅಪಘಾತದಲ್ಲಿ ಶಾಲಾ ವಾಹನದಲ್ಲಿದ್ದ 8 ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ. 9ನೇ ತರಗತಿ ವಿದ್ಯಾರ್ಥಿಗಳಾದ ಶ್ವೇತಾ(13), ಗೋವಿಂದ(13), ಪಿಯುಸಿ ವಿದ್ಯಾರ್ಥಿಗಳಾದ ಸಾಗರ್ ಕಡಕೋಳ(17), ಬಸವರಾಜ್(17) ಮೃತಪಟ್ಟವರು ಎಂದು ಹೇಳಲಾಗಿದೆ.

ಮೃತರು ಕವಟಗಿ ಗ್ರಾಮದ ವರ್ಧಮಾನ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳಾಗಿದ್ದಾರೆ. ಶಾಲಾ ಕಾರ್ಯಕ್ರಮದಲ್ಲಿ ಭಾಗಿಯಾಗಿ ಗ್ರಾಮಕ್ಕೆ ತೆರಳುತ್ತಿದ್ದಾಗ ದುರಂತ ಸಂಭವಿಸಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular