HomeKarnatakaಪುಂಡರ ಅಟ್ಟಹಾಸ: ಚಿನ್ನಾಭರಣ ಅಂಗಡಿಯಿಂದ ಹೊರಗೆಳೆದು ಸೋದರರ ಮೇಲೆ ತೀವ್ರ ಹಲ್ಲೆ

ಪುಂಡರ ಅಟ್ಟಹಾಸ: ಚಿನ್ನಾಭರಣ ಅಂಗಡಿಯಿಂದ ಹೊರಗೆಳೆದು ಸೋದರರ ಮೇಲೆ ತೀವ್ರ ಹಲ್ಲೆ

ಬಾಗಲಕೋಟೆ: ಕಾರ್ ಅನ್ನು ರಸ್ತೆ ಪಕ್ಕ ನಿಲ್ಲಿಸುವಂತೆ ಹೇಳಿದ್ದಕ್ಕೆ ಸಹೋದರರ ಮೇಲೆ ಹಲ್ಲೆ ನಡೆಸಿದ ಘಟನೆ ಬಾಗಲಕೋಟೆ ಜಿಲ್ಲೆ ಬಾದಾಮಿ ಪಟ್ಟಣದಲ್ಲಿ ನಡೆದಿದೆ.

ಚಿನ್ನಾಭರಣ ಅಂಗಡಿ ನಡೆಸುತ್ತಿರುವ ಸಹೋದರರಾದ ಆನಂದ ರೇವಣಕಲ್, ಪ್ರಶಾಂತ ರೇವಣಕಲ್ ಅವರ ಮೇಲೆ ಹಲ್ಲೆ ಮಾಡಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕಾರ್ ಅನ್ನು ರಸ್ತೆ ಪಕ್ಕಕ್ಕೆ ನಿಲ್ಲಿಸಿ ಎಂದಿದ್ದಕ್ಕೆ ಚಿನ್ನಾಭರಣ ಮಳಿಗೆಗೆ ನುಗ್ಗಿ ಹೊರಗೆ ಕರೆದುಕೊಂಡು ಹೋಗಿ ಹಲ್ಲೆ ಮಾಡಲಾಗಿದೆ. ಸಹೋದರರ ತಲೆ, ತುಟಿಯಿಂದ ರಕ್ತ ಬರುವಂತೆ ಹಲ್ಲೆ ನಡೆಸಲಾಗಿದೆ. ನಿಜಾಮ್, ಅಶ್ಫಾಕ್ ಹಲ್ಲೆ ಮಾಡುತ್ತಿರುವ ದೃಶ್ಯ ಸಿಸಿ ಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದ ಸಹೋದರರು ಮನೆಗೆ ಮರಳಿದ್ದಾರೆ. ಬಾದಾಮಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular