HomeKarnatakaಬಾಗಲಕೋಟೆ ಉಪ ಚುನಾವಣೆ: ಸಿಎಂ, ಡಿಕೆಶಿಗೆ ಬಿವೈ ವಿಜಯೇಂದ್ರ ಸವಾಲು

ಬಾಗಲಕೋಟೆ ಉಪ ಚುನಾವಣೆ: ಸಿಎಂ, ಡಿಕೆಶಿಗೆ ಬಿವೈ ವಿಜಯೇಂದ್ರ ಸವಾಲು

ಬಾಗಲಕೋಟೆ ಶಾಸಕ ಹೆಚ್.ವೈ. ಮೇಟಿ (79) ನವೆಂಬರ್ 4, 2025ರಂದು ನಿಧನ ಹೊಂದಿದರು.  ಈಗ ಕ್ಷೇತ್ರಕ್ಕೆ ಉಪ ಚುನಾವಣೆ ಎದುರಾಗಿದೆ. ಹೆಚ್.ವೈ. ಮೇಟಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪರಮಾಪ್ತರು. ಉಪ ಚುನಾವಣೆಯಲ್ಲಿ ಕ್ಷೇತ್ರವನ್ನು ಉಳಿಸಿಕೊಳ್ಳಬೇಕು ಎಂಬುದು ಕಾಂಗ್ರೆಸ್‌ ಪಾಲಿಗೆ ಪ್ರತಿಷ್ಠೆಯಾಗಿದೆ.

ಬಿಜೆಪಿ ಕರ್ನಾಟಕ ಉಸ್ತುವಾರಿ ರಾಧಾಮೋಹನ್ ದಾಸ್ ಅಗರವಾಲ್, “ಬಿ.ವೈ.ವಿಜಯೇಂದ್ರ ನೇತೃತ್ವದ ತಂಡ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಪಕ್ಷ ಬಹುಮತ ಸಾಧಿಸಲಿದೆ” ಎಂದು ಘೋಷಣೆ ಮಾಡಿದ್ದಾರೆ.

ಈಗ ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆ ನಡೆಯಬೇಕಿದ್ದು, ಬಿಜೆಪಿ ಎರಡೂ ಸೀಟು ಗೆಲ್ಲುವ ಮೂಲಕ ಕಾಂಗ್ರೆಸ್ ಪಕ್ಷಕ್ಕೆ ಮುಖಭಂಗ ಉಂಟು ಮಾಡುವ ತಂತ್ರ ರೂಪಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕರ್ನಾಟಕ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಬಾಗಲಕೋಟೆ ಉಪ ಚುನಾವಣೆ ವಿಚಾರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ಸವಾಲು ಹಾಕಿದ್ದಾರೆ.

ಮಾಧ್ಯಮಗಳ ಜೊತೆ ಮಾತನಾಡಿದ ವಿಜಯೇಂದ್ರ, “ಬಾಗಲಕೋಟೆ, ದಾವಣಗೆರೆ ದಕ್ಷಿಣದಲ್ಲಿ ಯಾವ ರೀತಿ ಗೆಲುವು ಸಾಧಿಸಬೇಕು ಎಂದು ನಾವು ತಯಾರಿ ಆರಂಭಿಸಿದ್ದೇವೆ” ಎಂದು ಹೇಳಿದರು.

“ಒಂದು ಸಂಘಟಿತ ಹೋರಾಟದ ಮೂಲಕ ಭಾರತೀಯ ಜನತಾ ಪಾರ್ಟಿ ಎರಡೂ ಕ್ಷೇತ್ರದಲ್ಲಿ ಗೆಲುವು ಸಾಧಿಸಲಿದೆ. ಬರೀ ಬಾಗಲಕೋಟೆ ಗೆದ್ದರೆ ಆಗುವುದಿಲ್ಲ. ನಾನು ನಿಮ್ಮ ಮೂಲಕ ಸವಾಲು ಹಾಕುತ್ತೇನೆ” ಎಂದು ತಿಳಿಸಿದರು.

“ರಾಜ್ಯದ ಮುಖ್ಯಮಂತ್ರಿಗಳು, ಉಪಮುಖ್ಯಮಂತ್ರಿಗಳು ಇಬ್ಬರೂ ಸಹ ಬಾಗಲಕೋಟೆಯಲ್ಲಿ ಬಂದು ಕುಳಿತರೂ ಸಹ ಎಷ್ಟೇ ಅಧಿಕಾರ ದುರುಪಯೋಗ ಮಾಡಿಕೊಂಡರೂ, ಎಷ್ಟೇ ಹಣದ ಬಳಕೆ ಮಾಡಿಕೊಂಡರೂ ಸಹ ಭಾರತೀಯ ಜನತಾ ಪಾರ್ಟಿಯ ಗೆಲುವನ್ನು ತಪ್ಪಿಸಲು ಸಾಧ್ಯವಿಲ್ಲ” ಎಂದು ಬಿ.ವೈ.ವಿಜಯೇಂದ್ರ ಹೇಳಿದರು.

2023ರ ಚುನಾವಣೆಯಲ್ಲಿ ಬಾಗಲಕೋಟೆಯಲ್ಲಿ ಬಿಜೆಪಿಗೆ ಸೋಲಾಗಿತ್ತು. ಬಿಜೆಪಿ ವೀರಣ್ಣ ಚರಂತಿಮಠ ಅವರಿಗೆ ಟಿಕೆಟ್ ನೀಡಿತ್ತು. ಆದರೆ ಟಿಕೆಟ್ ಆಕಾಂಕ್ಷಿಯಾಗಿದ್ದ ಅವರ ಸಹೋದರ ಮಲ್ಲಿಕಾರ್ಜುನ ಚರಂತಿಮಠ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿದರು.

ಚುನಾವಣೆಯಲ್ಲಿ ಕಾಂಗ್ರೆಸ್‌ನ ಹೆಚ್.ವೈ.ಮೇಟಿ 79,336 ಮತಗಳನ್ನು ಪಡೆದು ಗೆಲುವು ಸಾಧಿಸಿದರು. ಬಿಜೆಪಿಯ ವೀರಣ್ಣ ಚರಂತಿಮಠ 73,458 ಮತಗಳನ್ನು ಪಡೆದು ಸೋಲು ಕಂಡರು. ಪಕ್ಷೇತರ ಅಭ್ಯರ್ಥಿ ಮಲ್ಲಿಕಾರ್ಜುನ ಚರಂತಿಮಠ 10,116 ಮತಗಳನ್ನು ಪಡೆದು ಮೂರನೇ ಸ್ಥಾನವನ್ನು ಪಡೆದರು. ಹೆಚ್.ವೈ.ಮೇಟಿ ನಿಧನದ ಕಾರಣ ಈಗ ಉಪ ಚುನಾವಣೆ ಎದುರಾಗಿದೆ. ಉಪ ಚುನಾವಣೆಯಲ್ಲಿ ಗೆಲ್ಲಲು ಬಿಜೆಪಿ ತಂತ್ರವನ್ನು ರೂಪಿಸಿದೆ.

For Latest News Updates, Join Our Whatsapp Community🚩
Abinandan
Abinandan
ನಿವೇದಿತಾ ಬಿ.ಎ.. ಬಿ.ಎಡ್ ಪದವೀಧರರು. ಡಿಜಿಟಲ್ ಪತ್ರಿಕೋದ್ಯಮದಲ್ಲಿ ಕಳೆದ 4 ವರ್ಷಗಳಿಂದ ಸಕ್ರಿಯರಾಗಿದ್ದಾರೆ. Revenufacts ವೆಬ್‌ಸೈಟ್‌ನಲ್ಲಿ 3 ವರ್ಷ ಹಾಗೂ ಕರುನಾಡು ಸುದ್ದಿ ಮಾಧ್ಯಮದಲ್ಲಿ 1 ವರ್ಷ ಕಾರ್ಯನಿರ್ವಹಿಸಿದ ಅನುಭವ ಹೊಂದಿದ್ದಾರೆ. ಆರೋಗ್ಯ, ವಾಣಿಜ್ಯ, ಲೈಫ್‌ಸ್ಟೈಲ್ ವಿಭಾಗದಲ್ಲಿ ವಿಶೇಷ ಪರಿಣತಿ ಹೊಂದಿದ್ದಾರೆ. Nivedita is a skilled digital content creator with a strong academic background in B.A. and B.Ed. 4 years of experience in digital journalism.
RELATED ARTICLES

LEAVE A REPLY

Please enter your comment!
Please enter your name here

Most Popular