HomeKarnatakaಬಾಗಲಕೋಟೆ ಉಪ ಚುನಾವಣೆ: ಬಂಡಾಯ ಶಮನ, ಕಾಂಗ್ರೆಸ್ ನಾಯಕರ ನಿಟ್ಟುಸಿರು!

ಬಾಗಲಕೋಟೆ ಉಪ ಚುನಾವಣೆ: ಬಂಡಾಯ ಶಮನ, ಕಾಂಗ್ರೆಸ್ ನಾಯಕರ ನಿಟ್ಟುಸಿರು!

ಎಚ್.ವೈ.ಮೇಟಿ ನಿಧನದ ಕಾರಣ ಬಾಗಲಕೋಟೆ ಕ್ಷೇತ್ರದ ಉಪ ಚುನಾವಣೆ ಎದುರಾಗಿದೆ. ಏಪ್ರಿಲ್ 9ರಂದು ಮತದಾನ ನಡೆಯಲಿದ್ದು, ಚುನಾವಣಾ ಕಣ ಅಂತಿಮವಾಗಿದೆ. ಕ್ಷೇತ್ರದಲ್ಲಿ ಕಾಂಗ್ರೆಸ್‌ ಪಕ್ಷಕ್ಕೆ ಎದುರಾಗಿದ್ದ ಬಂಡಾಯದ ಬಿಸಿ ತಣ್ಣಗಾಗಿದೆ.

ಬಾಗಲಕೋಟೆ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಬಂಡಾಯ ಅಭ್ಯರ್ಥಿಗಳ ಜೊತೆಗೆ ಸಚಿವ ಆರ್.ಬಿ. ತಿಮ್ಮಾಪೂರ ನಡೆಸಿದ ಮಾತುಕತೆ ಸಫಲವಾಗಿದ್ದು, ಮೂವರು ಅಭ್ಯರ್ಥಿಗಳು ನಾಮಪತ್ರ ವಾಪಸ್ ಪಡೆದಿದ್ದಾರೆ.

ಪ್ರಮುಖವಾಗಿ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದ ಗೋವಿಂದರಾಜ ತಿಮ್ಮಯ್ಯ ಬಳ್ಳಾರಿ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಕೆ ಮಾಡಿದ್ದರು. ನಾಮಪತ್ರ ವಾಪಸ್ ಪಡೆಯಲು ಕೊನೆಯ ದಿನವಾದ ಗುರುವಾರ ಅವರ ನಾಮಪತ್ರ ವಾಪಸ್ ಪಡೆದಿದ್ದು, ಕಾಂಗ್ರೆಸ್ ಅಭ್ಯರ್ಥಿ ಉಮೇಶ್‌ ಮೇಟಿ ಹಾದಿ ಸುಗಮವಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ನಾಮಪತ್ರ ವಾಪಸ್ ಪಡೆದ ಅಭ್ಯರ್ಥಿಗಳು ಮಾತನಾಡಿ, ಹಿರಿಯ ನಾಯಕರು ಕರೆದು ಗೌರವವನ್ನು ನೀಡಿದ ಪರಿಣಾಮ ನಾವು ನಾಮಪತ್ರ ವಾಪಸ್ ಪಡೆದಿದ್ದೇವೆ. ಕಾಂಗ್ರೆಸ್ ಪಕ್ಷದ ಸಕ್ರಿಯ ಕಾರ್ಯಕರ್ತರಾಗಿ ಕೆಲಸ ಮಾಡಿ, ಪಕ್ಷದ ಅಭ್ಯರ್ಥಿ ಉಮೇಶ್ ಮೇಟಿ ಅವರನ್ನು ಗೆಲ್ಲಿಸಲು ಶ್ರಮಿಸುತ್ತೇವೆ ಎಂದು ಹೇಳಿದ್ದಾರೆ.

ಸಚಿವ ಆರ್.ಬಿ. ತಿಮ್ಮಾಪೂರ ಮಾತನಾಡಿ, ನಾಮಪತ್ರ ವಾಪಸ್ ಪಡೆದ ಮೂವರು ಮುಖಂಡರು ಶಕ್ತಿವಂತರು. ಅವರದ್ದೇ ಆದ ಶಕ್ತಿ ಇದೆ. ಯಾವುದೇ ಷರತ್ತು ಹಾಕದೇ ನಾಮಪತ್ರ ವಾಪಸ್ ಪಡೆದು, ಕಾಂಗ್ರೆಸ್ ಅಭ್ಯರ್ಥಿಗೆ ಬೆಂಬಲ ಸೂಚಿಸಿದ್ದಾರೆ. ಎಲ್ಲರೂ ಒಗ್ಗಟ್ಟಿನಿಂದ ಕೂಡಿ ಚುನಾವಣೆ ಎದುರಿಸುತ್ತೇವೆ ಎಂದರು.

ಮುಖ್ಯಮಂತ್ರಿಗಳ ಪ್ರಚಾರ: ಬಾಗಲಕೋಟೆ ಕ್ಷೇತ್ರದ ಉಪ ಚುನಾವಣೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಷ್ಠೆಗೆ ಕಾರಣವಾಗಿದೆ. ಎಚ್.ವೈ.ಮೇಟಿ ಅವರ ಆಪ್ತರಾಗಿದ್ದರು. ಮೇಟಿ ಕುಟುಂಬಕ್ಕೆ ಟಿಕೆಟ್ ಕೊಡಿಸಿದ್ದೇ ಸಿದ್ದರಾಮಯ್ಯ.

ಮಾರ್ಚ್‌ 30, 31ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಒಂದು ಹಂತದಲ್ಲಿ ಪ್ರಚಾರ ಮಾಡಲಿದ್ದಾರೆ. ಏಪ್ರಿಲ್‌ 4, 5 ಅಥವಾ 6, 7ರಂದು 2ನೇ ಹಂತದಲ್ಲಿ ಬಾಗಲಕೋಟೆಯಲ್ಲಿ ಅವರು ಪ್ರಚಾರ ಮಾಡಲಿದ್ದಾರೆ ಎಂದು ಅಂದಾಜಿಸಲಾಗಿದೆ.

ಮಾರ್ಚ್ 28ರಿಂದ ಸಚಿವರು, ಶಾಸಕರು ಬಾಗಲಕೋಟೆಗೆ ಬರಲಿದ್ದು, ಉಪ ಚುನಾವಣೆ ಪ್ರಚಾರ ಮಾಡಲಿದ್ದು, ಉಮೇಶ್ ಮೇಟಿ ಬೆಂಬಲಿಸುವಂತೆ ಜನರಿಗೆ ಮನವಿ ಮಾಡಲಿದ್ದಾರೆ. ಏಪ್ರಿಲ್ 9ರಂದು ಮತದಾನ ನಡೆಯಲಿದ್ದು, ಮೇ 4ರಂದು ಚುನಾವಣಾ ಫಲಿತಾಂಶ ಪ್ರಕಟವಾಗಲಿದೆ.

For Latest News Updates, Join Our Whatsapp Community🚩
Abinandan
Abinandan
ನಿವೇದಿತಾ ಬಿ.ಎ.. ಬಿ.ಎಡ್ ಪದವೀಧರರು. ಡಿಜಿಟಲ್ ಪತ್ರಿಕೋದ್ಯಮದಲ್ಲಿ ಕಳೆದ 4 ವರ್ಷಗಳಿಂದ ಸಕ್ರಿಯರಾಗಿದ್ದಾರೆ. Revenufacts ವೆಬ್‌ಸೈಟ್‌ನಲ್ಲಿ 3 ವರ್ಷ ಹಾಗೂ ಕರುನಾಡು ಸುದ್ದಿ ಮಾಧ್ಯಮದಲ್ಲಿ 1 ವರ್ಷ ಕಾರ್ಯನಿರ್ವಹಿಸಿದ ಅನುಭವ ಹೊಂದಿದ್ದಾರೆ. ಆರೋಗ್ಯ, ವಾಣಿಜ್ಯ, ಲೈಫ್‌ಸ್ಟೈಲ್ ವಿಭಾಗದಲ್ಲಿ ವಿಶೇಷ ಪರಿಣತಿ ಹೊಂದಿದ್ದಾರೆ. Nivedita is a skilled digital content creator with a strong academic background in B.A. and B.Ed. 4 years of experience in digital journalism.
RELATED ARTICLES

LEAVE A REPLY

Please enter your comment!
Please enter your name here

Most Popular