HomeKarnatakaಬಾಗಲಕೋಟೆ ಚುನಾವಣೆ ಕಣ: ಕಾಂಗ್ರೆಸ್, ಸಿದ್ದರಾಮಯ್ಯ ಪ್ರತಿಷ್ಠೆ!

ಬಾಗಲಕೋಟೆ ಚುನಾವಣೆ ಕಣ: ಕಾಂಗ್ರೆಸ್, ಸಿದ್ದರಾಮಯ್ಯ ಪ್ರತಿಷ್ಠೆ!

ಹೆಚ್.ವೈ.ಮೇಟಿ ನಿಧನದ ಕಾರಣ ಬಾಗಲಕೋಟೆ ಕ್ಷೇತ್ರದ ಉಪ ಚುನಾವಣೆ ಎದುರಾಗಿದೆ. ಏಪ್ರಿಲ್ 9ರಂದು ಮತದಾನ ನಡೆಯಲಿದ್ದು, ಮೇ 4ರಂದು ಚುನಾವಣಾ ಫಲಿತಾಂಶ ಪ್ರಕಟವಾಗಲಿದೆ. ಈ ಚುನಾವಣೆ ಕಾಂಗ್ರೆಸ್ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಪ್ರತಿಷ್ಠೆಯ ಪ್ರಶ್ನೆಯಾಗಿದೆ.

ಉಪ ಚುನಾವಣೆ ಟಿಕೆಟ್‌ ಹೆಚ್.ವೈ.ಮೇಟಿ ಕುಟುಂಬದವರಿಗೆ ನೀಡಬೇಕು ಎಂಬ ಮಾತು ಕಾಂಗ್ರೆಸ್‌ನಲ್ಲಿ ಕೇಳಿ ಬರುತ್ತಿದೆ. ಟಿಕೆಟ್‌ಗಾಗಿ ಕುಟುಂಬದಲ್ಲಿಯೇ ಪೈಪೋಟಿ ಇದ್ದು, ನಾಮಪತ್ರ ಸಲ್ಲಿಕೆಗೆ ಮಾರ್ಚ್ 23 ಕೊನೆಯ ದಿನವಾಗಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಆಪ್ತರಾಗಿದ್ದ ಹೆಚ್.ವೈ.ಮೇಟಿ ಗೆದ್ದಿದ್ದ ಕ್ಷೇತ್ರದಲ್ಲಿ ಮತ್ತೆ ಪಕ್ಷದ ಅಭ್ಯರ್ಥಿ ಗೆಲ್ಲಿಸಿಕೊಂಡು ಬರುವ ಹೊಣೆ ಸಿದ್ದರಾಮಯ್ಯ ಮೇಲಿದೆ. ಕಾಂಗ್ರೆಸ್ ಇನ್ನೂ ಸಹ ಉಪ ಚುನಾವಣೆ ಅಭ್ಯರ್ಥಿಯನ್ನು ಘೋಷಣೆ ಮಾಡಿಲ್ಲ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

2023ರ ಚುನಾವಣೆಯಲ್ಲಿ ಹೆಚ್.ವೈ.ಮೇಟಿ 79,336 ಮತಗಳನ್ನು ಪಡೆದು ಜಯಗಳಿಸಿದ್ದರು. ಆದರೆ ಉಪ ಚುನಾವಣೆಯಲ್ಲಿ ಹೆಚ್.ವೈ.ಮೇಟಿ ಪುತ್ರರಾದ ಮಲ್ಲಿಕಾರ್ಜುನ ಮೇಟಿ, ಉಮೇಶ್ ಮೇಟಿ ಟಿಕೆಟ್ ಆಕಾಂಕ್ಷಿಗಳು. ಹೆಚ್.ವೈ.ಮೇಟಿ ಪುತ್ರಿ ಮಹಾದೇವಿ ಮೇಟಿ ಶುಕ್ರವಾರ ನಾಮಪತ್ರ ಸಲ್ಲಿಕೆ ಮಾಡುವುದಾಗಿ ಘೋಷಣೆ ಮಾಡಿದ್ದು, ಕಾಂಗ್ರೆಸ್ ನಾಯಕರ ತಲೆನೋವಿಗೆ ಕಾರಣವಾಗಿದೆ.

ಬಾಗಲಕೋಟೆ ಚುನಾವಣೆ ಎಂದರೆ ಅದು ಬಿಜೆಪಿಯ ವೀರಣ್ಣ ಚರಂತಿಮಠ ಮತ್ತು ಕಾಂಗ್ರೆಸ್‌ನ ಹೆಚ್.ವೈ.ಮೇಟಿ ನಡುವಿನ ಹೋರಾಟ. 2028ರಲ್ಲಿ ಮೊದಲ ಬಾರಿಗೆ ಇಬ್ಬರು ಮುಖಾಮುಖಿಯಾಗಿದ್ದರು. ವೀರಣ್ಣ ಚರಂತಿಮಠ ಗೆದ್ದಿದ್ದರು.

2013ರಲ್ಲಿ ವೀರಣ್ಣ ಚರಂತಿಮಠ ಸೋಲಿಸಿ ಹೆಚ್.ವೈ.ಮೇಟಿ ಗೆದ್ದರು. ಸಿದ್ದರಾಮಯ್ಯ ಸಂಪುಟದಲ್ಲಿ ಸಚಿವರು ಆದರು. ವಿವಾದ ಮಾಡಿಕೊಂಡು ಸಚಿವ ಸ್ಥಾನಕ್ಕೆ ರಾಜೀನಾಮೆಯನ್ನು ನೀಡಿದರು.

2018ರಲ್ಲಿ ಹೆಚ್.ವೈ.ಮೇಟಿ ಸೋಲಿಸಿ ವೀರಣ್ಣ ಚರಂತಿಮಠ ಗೆದ್ದರು. 2023ರಲ್ಲಿ ವೀರಣ್ಣ ಚರಂತಿಮಠ ಅವರನ್ನು ಹೆಚ್.ವೈ.ಮೇಟಿ ಸೋಲಿಸಿದರು. ಈಗ ಹೆಚ್.ವೈ.ಮೇಟಿ ನಿಧನದ ಕಾರಣ ಉಪ ಚುನಾವಣೆ ಎದುರಾಗಿದ್ದು, ವೀರಣ್ಣ ಚರಂತಿಮಠ ಬಿಜೆಪಿ ಅಭ್ಯರ್ಥಿ ಎಂಬುದು ಬಹುತೇಕ ಖಚಿತವಾಗಿದೆ.

For Latest News Updates, Join Our Whatsapp Community🚩
Abinandan
Abinandan
ನಿವೇದಿತಾ ಬಿ.ಎ.. ಬಿ.ಎಡ್ ಪದವೀಧರರು. ಡಿಜಿಟಲ್ ಪತ್ರಿಕೋದ್ಯಮದಲ್ಲಿ ಕಳೆದ 4 ವರ್ಷಗಳಿಂದ ಸಕ್ರಿಯರಾಗಿದ್ದಾರೆ. Revenufacts ವೆಬ್‌ಸೈಟ್‌ನಲ್ಲಿ 3 ವರ್ಷ ಹಾಗೂ ಕರುನಾಡು ಸುದ್ದಿ ಮಾಧ್ಯಮದಲ್ಲಿ 1 ವರ್ಷ ಕಾರ್ಯನಿರ್ವಹಿಸಿದ ಅನುಭವ ಹೊಂದಿದ್ದಾರೆ. ಆರೋಗ್ಯ, ವಾಣಿಜ್ಯ, ಲೈಫ್‌ಸ್ಟೈಲ್ ವಿಭಾಗದಲ್ಲಿ ವಿಶೇಷ ಪರಿಣತಿ ಹೊಂದಿದ್ದಾರೆ. Nivedita is a skilled digital content creator with a strong academic background in B.A. and B.Ed. 4 years of experience in digital journalism.
RELATED ARTICLES

LEAVE A REPLY

Please enter your comment!
Please enter your name here

Most Popular