ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಮತ ಎಣಿಕೆ ಕಾರ್ಯ ಇಂದು (ಮೇ 4) ಬೆಳಗ್ಗೆಯಿಂದ ಬಿಗಿ ಭದ್ರತೆಯ ನಡುವೆ ನಡೆಯುತ್ತಿದ್ದು, ಆರಂಭಿಕ ಸುತ್ತುಗಳಿಂದಲೂ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಉಮೇಶ್ ಮೇಟಿ ಅವರು ತಮ್ಮ ಮುನ್ನಡೆಯನ್ನು ಬಲಪಡಿಸಿಕೊಳ್ಳುತ್ತಿದ್ದಾರೆ.
ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಮತ ಎಣಿಕೆಯ ಇತ್ತೀಚಿನ ವರದಿಗಳ ಪ್ರಕಾರ, ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ಅವರು 11,809 ಮತಗಳ ಭರ್ಜರಿ ಮುನ್ನಡೆ ಸಾಧಿಸಿದ್ದಾರೆ.
ಮೊದಲ ಸುತ್ತಿನಲ್ಲಿ 3,207 ಮತಗಳ ಮುನ್ನಡೆ ಪಡೆದಿದ್ದ ಉಮೇಶ್ ಮೇಟಿ, ನಂತರ ಎರಡನೇ ಮತ್ತು ನಾಲ್ಕನೇ ಸುತ್ತುಗಳ ಮತ ಎಣಿಕೆಯಲ್ಲೂ ತಮ್ಮ ಮುನ್ನಡೆಯನ್ನು ಸ್ಥಿರವಾಗಿ ಕಾಯ್ದುಕೊಂಡು ಬಂದಿದ್ದಾರೆ.
ಹಿರಿಯ ಕಾಂಗ್ರೆಸ್ ನಾಯಕ ಎಚ್. ವೈ. ಮೇಟಿ ಅವರ ನಿಧನದಿಂದ ತೆರವಾಗಿದ್ದ ಬಾಗಲಕೋಟೆ ವಿಧಾನಸಭಾ ಕ್ಷೇತ್ರಕ್ಕೆ ಉಪಚುನಾವಣೆ ನಡೆದಿತ್ತು. ಇದೀಗ ಅವರ ಪುತ್ರ ಉಮೇಶ್ ಮೇಟಿ ಅವರು ಭರ್ಜರಿ ಮುನ್ನಡೆಯೊಂದಿಗೆ ಗೆಲುವಿನತ್ತ ಮುನ್ನಡಿಯಿಟ್ಟಿದ್ದಾರೆ. ಮತ ಎಣಿಕೆ ಕಾರ್ಯ ಮುಂದುವರಿದಿದ್ದು, ಮಧ್ಯಾಹ್ನದ ವೇಳೆಗೆ ಅಧಿಕೃತ ಅಂತಿಮ ಫಲಿತಾಂಶ ಹೊರಬೀಳಲಿದೆ.

