HomeKarnatakaಕಾಲೇಜು ವಿದ್ಯಾರ್ಥಿನಿಗೆ ನಡುರಸ್ತೆಯಲ್ಲಿ ಖಾಸಗಿ ಅಂಗ ತೋರಿಸಿ ಯುವಕನ ಅಸಭ್ಯ ವರ್ತನೆ: ಕಾಮುಕನನ್ನು ಬಿಟ್ಟು ಯುವತಿಯ...

ಕಾಲೇಜು ವಿದ್ಯಾರ್ಥಿನಿಗೆ ನಡುರಸ್ತೆಯಲ್ಲಿ ಖಾಸಗಿ ಅಂಗ ತೋರಿಸಿ ಯುವಕನ ಅಸಭ್ಯ ವರ್ತನೆ: ಕಾಮುಕನನ್ನು ಬಿಟ್ಟು ಯುವತಿಯ ರಕ್ಷಣೆಗೆ ಬಂದಿದ್ದ ಇಬ್ಬರನ್ನು ಬಂಧಿಸಿದ ಪೊಲೀಸರು

ಬಾಗಲಕೋಟೆ: ಕಾಲೇಜು ವಿದ್ಯಾರ್ಥಿನಿಗೆ ನಡುರಸ್ತೆಯಲ್ಲಿ ಕಾಮುಕನೊಬ್ಬ ತನ್ನ ಖಾಸಗಿ ಅಂಗ ತೋರಿಸಿ ಅಸಭ್ಯವಾಗಿ ವರ್ತಿಸಿರುವ ಘಟನೆ ಬಾಗಲಕೋಟೆಯ ನವನಗರದಲ್ಲಿ ನಡೆದಿದೆ. ಈ ಘಟನೆಯಲ್ಲಿ ಪೊಲೀಸರು ಕಾಮುಕನನ್ನು ಬಂಧಿಸುವುದನ್ನು ಬಿಟ್ಟು ಯುವತಿಯ ರಕ್ಷಣೆಗೆ ಬಂದಿದ್ದ ಇಬ್ಬರು ಯುವಕರನ್ನು ಬಂಧಿಸಿದ್ದಾರೆ.

ಪೊಲೀಸರ ನಡೆಗೆ ಬಂಧಿತ ಯುವಕರ ಪೋಷಕರು ಹಾಗೂ ನೊಂದ ವಿದ್ಯಾರ್ಥಿನಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಆರೋಪಿಯನ್ನು ಬಿಟ್ಟು ರಕ್ಷಣೆಗೆ ಬಂದವರನ್ನೇ ಬಂಧಿಸಿರುವುದು ಯಾವ ನ್ಯಾಯ? ಎಂದು ಪ್ರಶ್ನಿಸಿದ್ದಾರೆ.

ಬಾಗಲಕೋಟೆಯ ನವನಗರದ ಬಳಿ ಸೆ.17ರಂದು ರಸ್ತೆಯಲ್ಲಿ ಹೋಗುತ್ತಿದ್ದ ಕಾಲೇಜು ವಿದ್ಯಾರ್ಥಿನಿಯನ್ನು ಕಂಡು ಕಾಮುಕನೊಬ್ಬ ಖಾಸಗಿ ಅಂಗ ಪ್ರದರ್ಶಿಸಿ ಅಸಭ್ಯವಾಗಿ ವರ್ತಿಸಿದ್ದಾನೆ. ಈ ವೇಳೆ ಸ್ಥಳಕ್ಕೆ ಬಂದ ಇಬ್ಬರು ಯುವಕರು ವಿದ್ಯಾರ್ಥಿನಿಯನ್ನು ರಕ್ಷಿಸಿದ್ದಾರೆ. ನವನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಸುದೀಪ್ ನಾಡಗೌಡ ಎಂಬಾತ ವಿದ್ಯಾರ್ಥಿನಿಯೊಂದಿಗೆ ಅಸಭ್ಯವಾಗಿ ವರ್ತಿಸಿದ್ದ ಆರೋಪಿ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ನವನಗರ ಪೊಲೀಸರು ಕಾಮುಕ ಸುದೀಪ್ ನಾಡಗೌಡನನ್ನು ಬಂಧಿಸುವುದನ್ನು ಬಿಟ್ಟು, ಯುವತಿಯ ರಕ್ಷಣೆಗೆ ಬಂದಿದ್ದ ಚೇತನ್ ಕೋಡಬಾಗಿ ಹಾಗೂ ರೋಹನ್ ಹಾದಿಮನಿ ಎಂಬುವವರನ್ನು ಬಂಧಿಸಿದ್ದಾರೆ. ಪೊಲೀಸರ ನಡೆಗೆ ಬಂಧಿತ ಯುವಕರ ಕುಟುಂಬದವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಚಿಕಿತ್ಸೆಯ ನೆಪಹೇಳಿ ಆರೋಪಿ ಸುದೀಪ್ ನಾಡಗೌಡನನ್ನು ಬಂಧಿಸುತ್ತಿಲ್ಲ. ಯುವತಿಯನ್ನು ರಕ್ಷಿಸಿದವರನ್ನು ಬಿಡುಗಡೆ ಮಾಡುವಂತೆ ಒತ್ತಾಯಿಸಿದ್ದಾರೆ. ಚೇತನ್ ಹಾಗೂ ರೋಹನ್ ನನ್ನ ಸಹಾಯಕ್ಕೆ ಬಂದವರು. ಅವರನ್ನು ಬಿಡುಗಡೆ ಮಾಡುವಂತೆ ನೊಂದ ಯುವತಿ ಪೊಲೀಸರಿಗೆ ಮನವಿ ಮಾಡಿದ್ದಾಳೆ. ಪೊಲೀಸರ ಹುಚ್ಚಾಟಕ್ಕೆ ನವನಗರ ಜನರು ಕೂಡ ಕಿಡಿಕಾರಿದ್ದಾರೆ.

ತಿರುಪತಿ ದೇವಸ್ಥಾನಕ್ಕೆ 230 ಕೋಟಿ ಮೌಲ್ಯದ ಕಲಬೆರಕೆ ತುಪ್ಪ ಪೂರೈಕೆ ಪ್ರಕರಣ: ಇಡಿ ಅಧಿಕಾರಿಗಳಿಂದ ಎಂ/ಎಸ್ ಸುಕೃತಿ ಫುಡ್ಸ್ ಕಂಪನಿ ಪ್ರಮೋಟರ್ ಅರೆಸ್ಟ್

ಹೈದರಾಬಾದ್‌: ದೇಶಾದ್ಯಂತ ಭಾರಿ ಸುದ್ದಿ ಮಾಡಿದ್ದ ತಿರುಮಲ ತಿರುಪತಿ ದೇವಸ್ಥಾನಕ್ಕೆ ಕಲಬೆರಕೆ ತುಪ್ಪ ಪೂರೈಕೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ಕಂಪನಿ ಪ್ರಮೋಟರ್‌ನನ್ನ ಬಂಧಿಸಿದ್ದಾರೆ.

ಎಂ/ಎಸ್ ಸುಕೃತಿ ಫುಡ್ಸ್ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯ ಪ್ರಮೋಟರ್‌ ಕೈಲಾಶ್‌ ಚಂದ್‌ ಮಂಗಲಾ ಬಂಧಿತ ಆರೋಪಿ. ‌ ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ 2002 ರ ಸೆಕ್ಷನ್‌ 19ರ ಅಡಿಯಲ್ಲಿ ಕೈಲಾಶ್ ಚ್ಂದ್ ಮಂಗಲಾ ನನ್ನು ಬಂಧಿಸಲಾಗಿದೆ. ಬಳಿಕ ವಿಶಾಖಪಟ್ಟಣಂ ನಲ್ಲಿರುವ ಪಿಎಂಎಲ್‌ಎ ವಿಶೇಷ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದ್ದು, ಕೋರ್ಟ್‌ ಕೈಲಾಶ್‌ನನ್ನ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.

ತಿರುಪತಿ ತಿರುಮಲ ದೇವಸ್ಥಾನಂ ಸಮಿತಿಗೆ ಬರೋಬ್ಬರಿ 230 ಕೋಟಿ ಮೌಲ್ಯದ ಕಲಬೆರಕೆ ತುಪ್ಪ ಪೂರೈಕೆ ಮಾಡಲಾಗಿತ್ತು. ಈ ಬಗ್ಗೆ ತಿರುಪತಿ ಪೂರ್ವ ಪೊಲೀಸ್‌ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿತ್ತು. ಈ ಎಫ್‌ಐಆರ್‌ ಆಧರಿಸಿ ಇಡಿ ಅಧಿಕಾರಿಗಳು ತನಿಖೆ ಆರಂಭಿಸಿದ್ದರು. ಟಿಟಿಡಿಗೆ ಕಲಬೆರಕೆ ತುಪ್ಪ ಪೂರೈಸಲು ಕ್ರಿಮಿನಲ್‌ ಸಂಚು, ವಂಚನೆ, ನಕಲಿ ದಾಖಲೆ ಸೃಷ್ಟಿ ಹಾಗೂ ಭ್ರಷ್ಟಾಚಾರ ನಡೆಸಲಾಗಿದೆ ಎಂಬ ಆರೋಪಗಳು ಎಫ್‌ಐಆರ್‌ ಉಲ್ಲೇಖವಾಗಿದ್ದವು.

ಇಡಿ ತನಿಖೆಯಲ್ಲಿ ರಿಫೈನ್ಡ್‌ ಪಾಮ್‌ ಆಯಿಲ್‌, ಪಾಮ್‌ ಕರ್ನಲ್‌ ಆಯಿಲ್‌, ಪಾಮೋಲಿನ್‌ ಸೇರಿದಂತೆ ಎಂಜಿ-90, ಮೊನೊಗ್ಲಿಸರೈಡ್ಸ್‌, Myvaset Soft 400 ಮತ್ತು ಅಸಿಟಿಕ್‌ ಆಸಿಡ್‌ ಎಸ್ಟರ್‌ ಮುಂತಾದ ಹಲವು ರಾಸಾಯನಿಕಗಳನ್ನ ಬಳಸಿ ಕಲಬೆರಕೆ ತುಪ್ಪ ತಯಾರಿಸಲಾಗುತ್ತಿತ್ತು. ನಂತರ ಈ ಉತ್ಪನ್ನವನ್ನ ‘Agmark Special Grade Cow Ghee’ ಎಂದು ಹೆಸರಿಸಿ ಟಿಟಿಡಿಗೆ ಪೂರೈಸಲಾಗುತ್ತಿತ್ತು ಎಂದು ತನಿಖೆಯಲ್ಲಿ ತಿಳಿದುಬಂದಿದೆ.

2019 ರಿಂದ 2024 ರ ಅವಧಿಯಲ್ಲಿ ಈ ವಂಚನೆ ನಡೆದಿದ್ದು, ಒಟ್ಟು 230 ಕೋಟಿ ಮೌಲ್ಯದಷ್ಟು ಕಲಬೆರಕೆ ತುಪ್ಪವನ್ನು ತಿರುಪತಿ ದೇವಸ್ಥಾನಕ್ಕೆ ಪೂರೈಕೆ ಮಾಡಲಾಗಿದೆ ಎಂದು ಇಡಿ ತಿಳಿಸಿದೆ. ಇದರಲ್ಲಿ ಸುಮಾರು 96 ಕೋಟಿ ಮೌಲ್ಯದ ಕಲಬೆರಕೆ ತುಪ್ಪವನ್ನ ಕೈಲಾಶ್‌ ಚಂದ್‌ ಮಂಗಲಾ ಖುದ್ದು ಉತ್ಪಾದಿಸಿದ್ದ ಎಂದೂ ಇಡಿ ತಿಳಿಸಿದೆ.

ಎಂ/ಎಸ್ ಸುಕೃತಿ ಫುಡ್ಸ್ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯ ಪ್ರಮೋಟರ್‌ ಆಗಿರುವ ಕೈಲಾಶ್‌ ಚಂದ್‌ ಮಂಗಲಾ ಈ ಪ್ರಕರಣದಲ್ಲಿ ಸಹ ಸಂಚುಕೋರನಾಗಿದ್ದಾನೆ. ಕಲಬೆರಕೆ ಪದಾರ್ಥಗಳ ಖರೀದಿಗೆ ಕೈಲಾಶ್‌ ನೆರವಾಗಿದ್ದು, ತಮ್ಮ ಕಾರ್ಖಾನೆಯಲ್ಲಿ ಕಲಬೆರಕೆ ತುಪ್ಪ ತಯಾರಿಸುತ್ತಿದ್ದ ಎಂದು ಇಡಿ ಹೇಳಿದೆ.

ಮೆಸರ್ಸ್ ಶ್ರೀ ವೈಷ್ಣವಿ ಡೈರಿ ಸ್ಪೆಷಾಲಿಟೀಸ್ ಪ್ರೈವೇಟ್ ಲಿಮಿಟೆಡ್, ಮೆಸರ್ಸ್ ಮಲ್ಗಂಗಾ ಮಿಲ್ಕ್ ಮತ್ತು ಅಗ್ರೋ ಪ್ರಾಡಕ್ಟ್ಸ್ ಪ್ರೈವೇಟ್ ಲಿಮಿಟೆಡ್ ಮತ್ತು ಮೆಸರ್ಸ್ ಎಆರ್ ಡೈರಿ ಫುಡ್ಸ್ ಪ್ರೈವೇಟ್ ಲಿಮಿಟೆಡ್ ಸೇರಿದಂತೆ ಹಲವು ಕಂಪನಿಗಳ ಮೂಲಕ ಕಲಬೆರಕೆ ತುಪ್ಪ ಪೂರೈಕೆ ಮಾಡಿದ್ದಾನೆ. ಕಲಬೆರಕೆ ತುಪ್ಪ ಮಾರಾಟಕ್ಕಾಗಿ ನಕಲಿ ದಾಖಲೆಗಳನ್ನೂ ಸೃಷ್ಟಿಸಿದ್ದ ಅನ್ನೋದು ತನಿಖೆಯಲ್ಲಿ ಬಹಿರಂಗವಾಗಿದೆ. ಈ ಹಿನ್ನೆಲೆಯಲ್ಲಿ ಕೈಲಾಶ್ ಚಂದ್ ಮಂಗಲಾನನ್ನು ಇಡಿ ಅಧಿಕಾರಿಗಳು ಬಂಧಿಸಿ ತನಿಖೆ ಮುಂದುವರೆಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular