HomeKarnatakaBREAKING: ಯುಗಾದಿ ದಿನವೇ ಘೋರ ದುರಂತ: ಈಜಲು ಹೋಗಿದ್ದ ಮೂವರು ನೀರು ಪಾಲು

BREAKING: ಯುಗಾದಿ ದಿನವೇ ಘೋರ ದುರಂತ: ಈಜಲು ಹೋಗಿದ್ದ ಮೂವರು ನೀರು ಪಾಲು

ಬಾಗಲಕೋಟೆ: ಕೃಷ್ಣಾ ನದಿಯಲ್ಲಿ ಈಜಲು ತೆರಳಿದ್ದ ಮೂವರು ನೀರು ಪಾಲಾದ ಘಟನೆ ಬಾಗಲಕೋಟೆ ತಾಲೂಕಿನ ಸೀತಿಮನಿ ಗ್ರಾಮದ ಸಮೀಪ ನಡೆದಿದೆ.

ಸೋಮಶೇಖರ ದೇವರಮನೆ(15), ಪರನಗೌಡ ಬಿಳಗಿ(17) ಹಾಗೂ ಮಲ್ಲಪ್ಪ ಬಗಲಿ(16) ನೀರು ಪಾಲಾದವರು ಎಂದು ಹೇಳಲಾಗಿದೆ.

ಮೂವರ ಪೈಕಿ ಬಾಲಕ ಸೋಮಶೇಖರ ಮೃತದೇಹ ಪತ್ತೆಯಾಗಿದೆ. ಉಳಿದ ಇಬ್ಬರಿಗಾಗಿ ಅಗ್ನಿಶಾಮಕ ದಳ ಸಿಬ್ಬಂದಿ ಹುಡುಕಾಟ ನಡೆಸಿದ್ದಾರೆ. ಮೂವರು ಬಾಲಕರು ಬಾಗಲಕೋಟೆ ತಾಲೂಕಿನ ಇಲ್ಯಾಳ ನಿವಾಸಿಗಳಾಗಿದ್ದಾರೆ. ಬಾಗಲಕೋಟೆ ಗ್ರಾಮೀಣ ಠಾಣೆ ಪೋಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular