HomeLatest NewsBIG NEWS: ಬಾಗಲಕೋಟೆಯ ಬುದ್ಧಿಮಾಂದ್ಯ ಮಕ್ಕಳ ವಸತಿ ಶಾಲೆ ಮುಚ್ಚಿಸಲು ಕ್ರಮ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

BIG NEWS: ಬಾಗಲಕೋಟೆಯ ಬುದ್ಧಿಮಾಂದ್ಯ ಮಕ್ಕಳ ವಸತಿ ಶಾಲೆ ಮುಚ್ಚಿಸಲು ಕ್ರಮ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಬೆಳಗಾವಿ: ಬಾಗಲಕೋಟೆಯಲ್ಲಿ ಬುದ್ಧಿಮಾಂದ್ಯ ಮಕ್ಕಳ ವಸತಿ ಶಾಲೆಯಿಲ್ಲಿ ಶಿಕ್ಷಕ ದಂಪತಿಯಿಂದ ಮಕ್ಕಳಿಗೆ ಚಿತ್ರಹಿಂಸೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್, ಇದೊಂದು ಅಮಾನವೀಯ ಘಟನೆ. ಬುದ್ಧಿಮಾಂದ ಮಕ್ಕಳ ಮೇಲಿನ ಹಲ್ಲೆಯನ್ನು ಸಹಿಸಲು ಸಾಧ್ಯವಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್, ಇದೊಂದು ಅಮಾನವೀಯ ಘಟನೆ, ಸರಿಯಾಗಿರುವ ಮಕ್ಕಳಿಗೆ ಹೊಡೆದರೇ ಅಪರಾಧ ಅಂತಾ ಹೇಳಿ ಶಿಕ್ಷೆ ಕೊಡುತ್ತೇವೆ. ಅಂತಹದರಲ್ಲಿ ಬುದ್ದಿಮಾಂದ್ಯ ಮಕ್ಕಳಿಗೆ ಹಿಂಸೆ ಕೊಡುವುದನ್ನು ಸಹಿಸಲು ಸಾಧ್ಯವಿಲ್ಲ ಎಂದರು.

ಸರ್ಕಾರದಿಂದ ಅನುಮತಿ ಪಡೆಯದೇ ಶಾಲೆಯನ್ನು ಅನಧಿಕೃತವಾಗಿ ತೆರೆಯಲಾಗಿದೆ. ಘಟನೆ ನಡೆದ ತಕ್ಷಣವೇ ಮಕ್ಕಳ ರಕ್ಷಣಾ ಅಧಿಕಾರಿಗಳನ್ನು ಸ್ಥಳಕ್ಕೆ ಕಳುಹಿಸಿಕೊಡಲಾಗಿದೆ. ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗಳ ಜೊತೆ ಮಾತನಾಡಿದ್ದು, ತಕ್ಷಣವೇ ವಸತಿ ಶಾಲೆ ಮುಚ್ಚಿಸಲು ಕ್ರಮ ಕೈಗೊಳ್ಳುತ್ತೇವೆ ಎಂದು ತಿಳಿಸಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular