HomeKarnatakaBREAKING: ಬಾಗಲಕೋಟೆಯಲ್ಲಿ ಮಸೀದಿ ಮೌಲಾನಾ ಮೇಲೆ ಯುವಕರ ಹಲ್ಲೆ: ಪೊಲೀಸ್ ಠಾಣೆ ಎದುರು ಪ್ರತಿಭಟನೆ

BREAKING: ಬಾಗಲಕೋಟೆಯಲ್ಲಿ ಮಸೀದಿ ಮೌಲಾನಾ ಮೇಲೆ ಯುವಕರ ಹಲ್ಲೆ: ಪೊಲೀಸ್ ಠಾಣೆ ಎದುರು ಪ್ರತಿಭಟನೆ

ಬಾಗಲಕೋಟೆ: ಬಾಗಲಕೋಟೆಯಲ್ಲಿ ಮಸೀದಿ ಮೌಲಾನಾ ಮೇಲೆ ಯುವಕರು ಹಲ್ಲೆ ನಡೆಸಿದ್ದಾರೆ. ನವನಗರ ಸೆಕ್ಟರ್ 4 ರಲ್ಲಿ ಟೀ ಕುಡಿಯುತ್ತಿದ್ದ ಸಂದರ್ಭದಲ್ಲಿ ಹಲ್ಲೆ ನಡೆಸಲಾಗಿದೆ.

ಆರೋಪಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ನವನಗರ ಠಾಣೆ ಎದುರು ಮುಸ್ಲಿಂ ಸಮುದಾಯದವರು ಜಮಾವಣೆಗೊಂಡಿದ್ದಾರೆ. ಹಲ್ಲೆಕೋರರ ಮೇಲೆ ಕೂಡಲೇ ಕೇಸು ದಾಖಲೆಸಿ ಬಂಧಿಸುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸಿದ್ದಾರೆ. ಪರಿಸ್ಥಿತಿ ಉದ್ವಿಗ್ನಗೊಳ್ಳುತ್ತಿದ್ದಂತೆ ಪೊಲೀಸರು ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿ ಮುಸ್ಲಿಂ ಸಮುದಾಯದವರ ಮನವೊಲಿಸಿದ್ದಾರೆ.

ಗಣೇಶ್, ಕಾರ್ತಿಕ್, ಶಿವು, ಆದಿತ್ಯ ಸೇರಿ ಹಲವರ ವಿರುದ್ಧ ಹಲ್ಲೆ ನಡೆಸಿದ ಆರೋಪ ಕೇಳಿ ಬಂದಿದೆ. ಕಾರ್ತಿಕ್ ಮತ್ತು ಪ್ರೀತಮ್ ಅವರನ್ನು ವಶಕ್ಕೆ ಪಡೆಯಲಾಗಿದ್ದು, ಪ್ರಮುಖ ಆರೋಪಿ ನಾಗರಾಜನಿಗಾಗಿ ಶೋಧ ಮುಂದುವರೆದಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular