HomeKarnatakaಶಾಸಕರಲ್ಲದವರಿಗೂ ಬಗರ್ ಹುಕುಂ ಅಧ್ಯಕ್ಷ ಸ್ಥಾನ: ವಿಧಾನಸಭೆಯಲ್ಲಿ ಮಹತ್ವದ ಕರ್ನಾಟಕ ಭೂ ಕಂದಾಯ ಮಸೂದೆ ಅಂಗೀಕಾರ

ಶಾಸಕರಲ್ಲದವರಿಗೂ ಬಗರ್ ಹುಕುಂ ಅಧ್ಯಕ್ಷ ಸ್ಥಾನ: ವಿಧಾನಸಭೆಯಲ್ಲಿ ಮಹತ್ವದ ಕರ್ನಾಟಕ ಭೂ ಕಂದಾಯ ಮಸೂದೆ ಅಂಗೀಕಾರ

ಬೆಂಗಳೂರು: ಕರ್ನಾಟಕ ಭೂ ಕಂದಾಯ(ತಿದ್ದುಪಡಿ) ಮಸೂದೆ 2024ಕ್ಕೆ ವಿಧಾನಸಭೆಯಲ್ಲಿ ಅಂಗೀಕಾರ ನೀಡಲಾಗಿದೆ.

ಶಾಸಕ ಸ್ಥಾನ ಖಾಲಿ ಇರುವುದು, ಸಮಯದ ಅಭಾವ ಮೊದಲಾದ ಕಾರಣಗಳಿಂದ ಶಾಸಕರು ನಿರಾಕರಿಸಿದಲ್ಲಿ ಆ ಕ್ಷೇತ್ರದ ಯಾವುದೇ ವ್ಯಕ್ತಿಯನ್ನು ಬಗರ್ ಹುಕುಂ ಅಧ್ಯಕ್ಷ ಸ್ಥಾನಕ್ಕೆ ನೇಮಕ ಮಾಡಲು ಈ ತಿದ್ದುಪಡಿಯು ರಾಜ್ಯ ಸರ್ಕಾರಕ್ಕೆ ಅಧಿಕಾರ ನೀಡುತ್ತದೆ.

ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ಮಸೂದೆ ಮಂಡಿಸಿ, ಯಾವುದೇ ಶಾಸಕರು ಬಗರ್ ಹುಕುಂ ಸಮಿತಿಯಲ್ಲಿ ಇರಲು ನಿರಾಕರಿಸಿ ಲಿಖಿತ ರೂಪದಲ್ಲಿ ತಿಳಿಸಿದರೆ ಇಲ್ಲವೇ ಶಾಸಕ ಸ್ಥಾನ ಖಾಲಿ ಇದ್ದರೆ ಆ ಕ್ಷೇತ್ರದ ಯಾವುದೇ ವ್ಯಕ್ತಿಯನ್ನು ಬಗರ್ ಹುಕುಂ ಸಮಿತಿಗೆ ಅಧ್ಯಕ್ಷರಾಗಿ ನೇಮಕ ಮಾಡಬಹುದು ಎಂದು ಮಾಹಿತಿ ನೀಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಯಾವುದೇ ವಿಧಾನಸಭಾ ಕ್ಷೇತ್ರದಲ್ಲಿ ಒಂದಕ್ಕಿಂತ ಹೆಚ್ಚು ಸಮಿತಿಗಳನ್ನು ನೇಮಕ ಮಾಡುವ ಅಧಿಕಾರವನ್ನು ಜಿಲ್ಲಾಧಿಕಾರಿಯಿಂದ ರಾಜ್ಯ ಸರ್ಕಾರಕ್ಕೆ ನೀಡಲಾಗಿದೆ. ಒಂದಕ್ಕಿಂತ ಹೆಚ್ಚು ತಾಲೂಕುಗಳನ್ನು ಹೊಂದಿದ ವಿಧಾನಸಭಾ ಕ್ಷೇತ್ರಗಳಲ್ಲಿ ಹೆಚ್ಚು ಜನಸಂಖ್ಯೆ ಹೊಂದಿರುವ ತಾಲೂಕು ತಹಶೀಲ್ದಾರರನ್ನು ಸಮಿತಿಯ ಸದಸ್ಯರನ್ನಾಗಿ ನೇಮಕ ಮಾಡಲಾಗುವುದು ಎಂದು ಹೇಳಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular