HomeKarnatakaಭೂಮಿ ಮಂಜೂರಾತಿ ನಿರೀಕ್ಷೆಯಲ್ಲಿರುವ ಬಗರ್ ಹುಕುಂ ಸಾಗುವಳಿದಾರರಿಗೆ ಗುಡ್ ನ್ಯೂಸ್: ಪೋಡಿ ಮಾಡಿಸಿ, ಪಹಣಿಯಲ್ಲಿ ಹೆಸರು...

ಭೂಮಿ ಮಂಜೂರಾತಿ ನಿರೀಕ್ಷೆಯಲ್ಲಿರುವ ಬಗರ್ ಹುಕುಂ ಸಾಗುವಳಿದಾರರಿಗೆ ಗುಡ್ ನ್ಯೂಸ್: ಪೋಡಿ ಮಾಡಿಸಿ, ಪಹಣಿಯಲ್ಲಿ ಹೆಸರು ನಮೂದಿಸಿ ಡಿಜಿಟಲ್ ಸಾಗುವಳಿ ಚೀಟಿ ವಿತರಣೆ

ಬೆಂಗಳೂರು: ಬಗರ್ ಹುಕುಂ ಅಡಿ ಭೂಮಿ ಮಂಜೂರಾತಿಗೆ ಸಲ್ಲಿಕೆಯಾಗಿರುವ ಅರ್ಜಿಗಳ ಪೈಕಿ ಇದುವರೆಗೆ ನಡೆಸಿದ ಪರಿಶೀಲನೆಯಲ್ಲಿ 1.26 ಲಕ್ಷ ಅರ್ಜಿಗಳು ಮಾತ್ರ ಅರ್ಹ ಎಂದು ಪರಿಗಣಿಸಲಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.

ಡಿಸೆಂಬರ್ 15ರೊಳಗೆ ರಾಜ್ಯದ ಎಲ್ಲಾ ಬಗರ್ ಹುಕುಂ ಸಮಿತಿಯ ಮುಂದೆ ಒಟ್ಟು 5 ಸಾವಿರ ಅರ್ಜಿಗಳನ್ನು ಮಂಡಿಸುವಂತೆ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಜನವರಿ ವೇಳೆಗೆ ಈ ಸಂಖ್ಯೆಯನ್ನು 15 ರಿಂದ 20 ಸಾವಿರಕ್ಕೆ ಏರಿಸಲಾಗುವುದು ಎಂದು ಹೇಳಿದ್ದಾರೆ.

ಬಗರ್ ಹುಕುಂ ಅಡಿಯಲ್ಲಿ ಅರ್ಹ ಫಲಾನುಭವಿಗಳಿಗೆ ಡಿಜಿಟಲ್ ಸಾಗುವಳಿ ಚೀಟಿ ನೀಡಲಾಗುತ್ತದೆ. ಸಾಗುವಳಿ ಚೀಟಿ ನೀಡುವ ಮೊದಲು ಜಮೀನಿಗೆ ಪೋಡಿ ಮಾಡಿಸಿ ಪಹಣಿಯಲ್ಲಿ ರೈತರ ಹೆಸರು ನಮೂದಿಸಿ ಜಮೀನು ನೊಂದಣಿ ಮಾಡಿಸಬೇಕು ಎಂದು ಅಧಿಕಾರಿಗಳಿಗೆ ತಿಳಿಸಲಾಗಿದೆ ಎಂದು ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ರಾಜ್ಯದಲ್ಲಿ ಸಲ್ಲಿಕೆಯಾಗಿರುವ ಬಗರ್ ಹುಕುಂ ಅರ್ಜಿಗಳಲ್ಲಿ 5ರಿಂದ 6 ಲಕ್ಷ ಅರ್ಜಿಗಳು ಅನರ್ಹ ಎಂದು ಪರಿಗಣಿಸಲಾಗಿದೆ. ಅರ್ಜಿ ಸಲ್ಲಿಸಿದ ದಿನದಂದು 18 ವರ್ಷ ತುಂಬದವರ ಹೆಸರಿನಲ್ಲಿ 26 ಸಾವಿರ ಅರ್ಜಿಗಳು ಸಲ್ಲಿಕೆಯಾಗಿದ್ದವು. ಅದೇ ರೀತಿ ಈಗಾಗಲೇ 5 ಎಕರೆ ಭೂಮಿ ಹೊಂದಿದ್ದರೂ 26922 ಅರ್ಜಿಗಳು ಬಗರ್ ಹುಕುಂ ಅಡಿ ಬಂದಿವೆ. ಅರಣ್ಯ ಪ್ರದೇಶ ಮಂಜೂರಾತಿಗೆ 1.68 ಲಕ್ಷ ಅರ್ಜಿಗಳು, ನಗರ ಪರಿಮಿತಿ ಒಳಗಿನ ಭೂಮಿ ಮಂಜೂರಾತಿಗೆ 68,561 ಅರ್ಜಿಗಳು ಸಲ್ಲಿಕೆಯಾಗಿದ್ದವು. ಕೃಷಿಕರಲ್ಲದ ಒಂದು ಲಕ್ಷಕ್ಕೂ ಹೆಚ್ಚು ಮಂದಿ ಸಲ್ಲಿಸಿದ ಅರ್ಜಿಗಳನ್ನು ಅನರ್ಹವೆಂದು ಪರಿಗಣಿಸಲಾಗಿದೆ ಎಂದು ಸಚಿವರು ಹೇಳಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular