HomeKarnatakaಅರ್ಹ ಬಗರ್ ಹುಕುಂ ರೈತರಿಗೆ ಸಿಹಿ ಸುದ್ದಿ: 4.38 ಎಕರೆಗಿಂತ ಕಡಿಮೆ ಭೂಮಿ ಮಾತ್ರ ಸಕ್ರಮ

ಅರ್ಹ ಬಗರ್ ಹುಕುಂ ರೈತರಿಗೆ ಸಿಹಿ ಸುದ್ದಿ: 4.38 ಎಕರೆಗಿಂತ ಕಡಿಮೆ ಭೂಮಿ ಮಾತ್ರ ಸಕ್ರಮ

ಮೈಸೂರು: ರಾಜ್ಯದ 163 ತಾಲೂಕುಗಳಲ್ಲಿ ಬಗರ್ ಹುಕುಂ ಸಮಿತಿ ರಚಿಸಲಾಗಿದೆ. ಮುಂದಿನ ಎಂಟು ತಿಂಗಳ ಒಳಗೆ ಬಗರ್ ಹುಕುಂ ಸಾಗುವಳಿದಾರರ ಅರ್ಜಿ ವಿಲೇವಾರಿ ಮಾಡಲು ಸರ್ಕಾರ ಕ್ರಮ ಕೈಗೊಂಡಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.

ಮೈಸೂರಿನಲ್ಲಿ ಮಾತನಾಡಿದ ಅವರು, 163 ತಾಲೂಕುಗಳಲ್ಲಿ ರಚಿಸಿದ ಬಗರ್ ಹುಕುಂ ಸಮಿತಿಗಳಿಗೆ 4.38 ಎಕರೆಗಿಂತ ಕಡಿಮೆ ಭೂಮಿ ಇರುವವರಿಗೆ ಮಾತ್ರ ಸಕ್ರಮ ಮಾಡಿಕೊಡಲು ಅವಕಾಶವಿದೆ. ಫಲಾನುಭವಿಗಳಿಗೆ ಮಾಲೀಕತ್ವದ ಹಕ್ಕನ್ನು ಡಿಜಿಟಲೀಕರಣ ಮಾಡಿಕೊಡಲಾಗುತ್ತದೆ. ಅರ್ಹ ಬಗರ್ ಹುಕುಂ ಸಾಗುವಳಿದಾರರ ಅರ್ಜಿಗಳನ್ನು ಮಾತ್ರ ವಿಲೇವಾರಿ ಮಾಡಲಾಗುವುದು ಎಂದು ಹೇಳಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular