HomeKarnatakaBREAKING : ಬಾಗೇಪಲ್ಲಿ ಶಾಸಕ ಎಸ್.ಎನ್ ಸುಬ್ಬಾರೆಡ್ಡಿ ಆಯ್ಕೆ ಅಸಿಂಧು : ಹೈಕೋರ್ಟ್  ಆದೇಶ

BREAKING : ಬಾಗೇಪಲ್ಲಿ ಶಾಸಕ ಎಸ್.ಎನ್ ಸುಬ್ಬಾರೆಡ್ಡಿ ಆಯ್ಕೆ ಅಸಿಂಧು : ಹೈಕೋರ್ಟ್  ಆದೇಶ

ಬೆಂಗಳೂರು : ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್‌ ಶಾಸಕ ಎಸ್.ಎನ್. ಸುಬ್ಬಾರೆಡ್ಡಿ ಅವರಿಗೆ ಹೈಕೋರ್ಟ್‌ನಲ್ಲಿ ಭಾರಿ ಹಿನ್ನಡೆಯಾಗಿದೆ. ಅವರ ಚುನಾವಣಾ ಆಯ್ಕೆಯನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯ, ಅವರ ಆಯ್ಕೆಯನ್ನು ಅಸಿಂಧು ಎಂದು ಘೋಷಿಸಿ ಆದೇಶ ಹೊರಡಿಸಿದೆ.

ಕಳೆದ ವಿಧಾನಸಭಾ ಚುನಾವಣೆಯಲ್ಲಿ ಎಸ್‌ಎನ್ ಸುಬ್ಬಾರೆಡ್ಡಿ ವಿರುದ್ಧ ಪರಾಜಿತರಾಗಿದ್ದ ಬಿಜೆಪಿ ಅಭ್ಯರ್ಥಿ ಸಿ. ಮುನಿರಾಜು ಅವರು ಸುಬ್ಬಾರೆಡ್ಡಿ ಅವರ ಆಯ್ಕೆಯನ್ನು ಪ್ರಶ್ನಿಸಿ ಹೈಕೋರ್ಟ್‌ನಲ್ಲಿ ಚುನಾವಣಾ ತಕರಾರು ಅರ್ಜಿ ಸಲ್ಲಿಸಿದ್ದರು. ಸುಬ್ಬಾರೆಡ್ಡಿ ಅವರು ಚುನಾವಣಾ ಅಫಿಡವಿಟ್‌ನಲ್ಲಿ ತಮ್ಮ ಆಸ್ತಿ ಮತ್ತು ಆದಾಯದ ಬಗ್ಗೆ ತಪ್ಪು ಮಾಹಿತಿ ನೀಡಿದ್ದಾರೆ ಹಾಗೂ ಕೆಲವು ಪ್ರಮುಖ ಅಂಶಗಳನ್ನು ಮುಚ್ಚಿಟ್ಟಿದ್ದಾರೆ ಎಂದು ಮುನಿರಾಜು ಆರೋಪಿಸಿದ್ದರು.

ನ್ಯಾ. ಎಂ.ಜಿ.ಎಸ್. ಕಮಲ್ ಅವರಿದ್ದ ಏಕಸದಸ್ಯ ಪೀಠವು ಈ ಅರ್ಜಿಯ ಸುದೀರ್ಘ ವಾದ-ವಿವಾದಗಳನ್ನು ಆಲಿಸಿ ಈ ಮಹತ್ವದ ತೀರ್ಪು ನೀಡಿದೆ.ಚುನಾವಣಾ ನಿಯಮಗಳ ಉಲ್ಲಂಘನೆಯಾಗಿರುವುದನ್ನು ಎತ್ತಿ ಹಿಡಿದಿರುವ ನ್ಯಾಯಾಲಯ, ಸುಬ್ಬಾರೆಡ್ಡಿ ಅವರ ಶಾಸಕ ಸ್ಥಾನದ ಆಯ್ಕೆಯನ್ನು ರದ್ದುಗೊಳಿಸಿದೆ.ಅಫಿಡವಿಟ್‌ನಲ್ಲಿನ ಮಾಹಿತಿ ಲೋಪವು ಗಂಭೀರ ಸ್ವರೂಪದ್ದೆಂದು ಪರಿಗಣಿಸಿ ಈ ಕ್ರಮ ಕೈಗೊಳ್ಳಲಾಗಿದೆ.ಈ ತೀರ್ಪಿನಿಂದಾಗಿ ಬಾಗೇಪಲ್ಲಿ ಕ್ಷೇತ್ರದಲ್ಲಿ ರಾಜಕೀಯ ಸಂಚಲನ ಉಂಟಾಗಿದ್ದು, ಶಾಸಕ ಸುಬ್ಬಾರೆಡ್ಡಿ ಅವರು ಈ ಆದೇಶವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸುವ ಸಾಧ್ಯತೆಯಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

2023ರ ವಿಧಾನಸಭಾ ಚುನಾವಣೆಯಲ್ಲಿ ಸುಬ್ಬಾರೆಡ್ಡಿ ಅವರ ಗೆಲುವನ್ನು ಪ್ರಶ್ನಿಸಿ ಬಿಜೆಪಿಯ ಸಿ. ಮುನಿರಾಜು ಅವರು ಹೈಕೋರ್ಟ್ನಲ್ಲಿ ಅರ್ಜಿ ಸಲ್ಲಿಸಿದ್ದರು. ವಿದೇಶಿ ವಿನಿಮಯ ನಿರ್ವಹಣಾ ಕಾಯ್ದೆ (FEMA) ಉಲ್ಲಂಘನೆ ಮತ್ತು ಮಲೇಷ್ಯಾ, ಹಾಂಗ್ ಕಾಂಗ್ ಹಾಗೂ ಜರ್ಮನಿ ಸೇರಿದಂತೆ ವಿವಿಧ ವಿದೇಶಗಳಲ್ಲಿ ಅಕ್ರಮವಾಗಿ ಆಸ್ತಿ ಹೊಂದಿದ್ದಾರೆ ಎನ್ನುವ ಆರೋಪದ ಮೇಲೆ ಈ ತನಿಖೆ ನಡೆಯುತ್ತಿದೆ. ಈ ದಾಳಿಗಳು ರಾಜಕೀಯ ಪ್ರೇರಿತ ಎಂದು ಕಾಂಗ್ರೆಸ್ ಬೆಂಬಲಿಗರು ವಾದಿಸಿದರೆ, ಶಾಸಕರು ಸೂಕ್ತ ದಾಖಲೆಗಳನ್ನು ನೀಡಬೇಕೆಂದು ಪ್ರತಿಪಕ್ಷಗಳು ಒತ್ತಾಯಿಸಿವೆ. ಸುಬ್ಬಾರೆಡ್ಡಿ ಅವರು “ನನ್ನ ಆಸ್ತಿ ವಿವರಗಳಲ್ಲಿ ಯಾವುದೇ ಅಕ್ರಮವಿಲ್ಲ” ಎಂದು ಸಮರ್ಥಿಸಿಕೊಂಡಿದ್ದಾರೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular