HomeKarnatakaಇಂದು ಭವಾನಿ ರೇವಣ್ಣ ಜಾಮೀನು ಅರ್ಜಿ ವಿಚಾರಣೆ

ಇಂದು ಭವಾನಿ ರೇವಣ್ಣ ಜಾಮೀನು ಅರ್ಜಿ ವಿಚಾರಣೆ

ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಅತ್ಯಾಚಾರ ಆರೋಪದ ಪ್ರಕರಣದಲ್ಲಿ ಸಂತ್ರಸ್ತೆಯೊಬ್ಬರನ್ನು ಅಪಹರಿಸಿ ಬೆದರಿಕೆ ಹಾಕಿದ ಪ್ರಕರಣದಲ್ಲಿ ಆರೋಪಿಯಾಗಿರುವ ಪ್ರಜ್ವಲ್ ಅವರ ತಾಯಿ ಭವಾನಿ ರೇವಣ್ಣನವರ ನಿರೀಕ್ಷಣಾ ಜಾಮೀನಿನ ಅರ್ಜಿ ವಿಚಾರಣೆ ಇಂದು ನಡೆಯಲಿದೆ.

ನಿರೀಕ್ಷಣಾ ಜಾಮೀನು ಕೋರಿ ಭವಾನಿ ರೇವಣ್ಣನವರು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದು, ಮಂಗಳವಾರದ ವಿಚಾರಣೆ ವೇಳೆ ಈ ಪ್ರಕರಣದ ತನಿಖೆ ನಡೆಸಿರುವ ಎಸ್ಐಟಿ ತಂಡ ಆಕ್ಷೇಪಣೆ ಸಲ್ಲಿಕೆಗೆ ಅವಕಾಶ ಕೇಳಿದ ಕಾರಣ ವಿಚಾರಣೆಯನ್ನು ಇಂದಿಗೆ ಮುಂದೂಡಲಾಗಿತ್ತು.

ಶಾಸಕರು – ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆ ನಡೆಸುವ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಸಂತೋಷ ಗಜಾನನ ಭಟ್ ಅವರು ಇಂದು ವಿಚಾರಣೆ ನಡೆಸಲಿದ್ದು, ಭವಾನಿ ರೇವಣ್ಣನವರ ಪರ ಹೈಕೋರ್ಟ್ ಹಿರಿಯ ವಕೀಲ ಸಂದೇಶ್ ಜೆ ಚೌಟ ವಾದ ಮಂಡಿಸಲಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular