ಬೆಂಗಳೂರು : ಅಕ್ರಮ ಮರ ಕಡಿದ ಆರೋಪದಲ್ಲಿ ಬಂಧನಕ್ಕೊಳಗಾಗಿದ್ದ ಸಂಸದ ಪ್ರತಾಪ್ ಸಿಂಹ ಸಹೋದರ ವಿಕ್ರಂ ಸಿಂಹಗೆ ಜಾಮೀನು ಮಂಜೂರಾಗಿದೆ. ಈ ಹಿನ್ನೆಲೆ ಸಂಸದ ಪ್ರತಾಪ್ ಸಿಂಹ ನ್ಯಾಯಾಧೀಶರಿಗೆ ಧನ್ಯವಾದ ತಿಳಿಸಿದ್ದಾರೆ.
ತಲೆಮರೆಸಿಕೊಳ್ಳುವ ಯಾವ ಕೆಲಸವನ್ನೂ ನನ್ನ ತಮ್ಮ ಮಾಡಿಲ್ಲ ಹಾಗು ತಲೆಮರೆಸಿಕೊಳ್ಳುವವರು ತಮ್ಮದೇ ಕಾರಿನಲ್ಲಿ ಫೋನ್ ಆನ್ ಮಾಡಿಕೊಂಡು ಬೆಂಗಳೂರಿಗೆ ಹೋಗುವುದಿಲ್ಲ. ಗೌರವಾನ್ವಿತ ನ್ಯಾಯಾಧೀಶರಿಗೆ ಧನ್ಯವಾದಗಳು. ಹಾಗು ಕರೆ, ಸಾಮಾಜಿಕ ಜಾಲತಾಣಗಳಲ್ಲಿ ಮೆಸೇಜ್ ಮೂಲಕ ಬೆನ್ನಿಗೆ ನಿಂತ ನಿಮ್ಮೆಲ್ಲರಿಗೂ ಮತ್ತು ಮಾಧ್ಯಮ ಮಿತ್ರರಿಗೂ ಧನ್ಯವಾದಗಳು ಎಂದು ಸಂಸದ ಪ್ರತಾಪ್ ಸಿಂಹ ಟ್ವೀಟ್ ಮಾಡಿದ್ದಾರೆ.
https://twitter.com/mepratap/status/1741460939428470874?ref_src=twsrc%5Etfw%7Ctwcamp%5Etweetembed%7Ctwterm%5E1741460939428470874%7Ctwgr%5E7ef08923d050fc89f2c524d928b4e7401a56a167%7Ctwcon%5Es1_&ref_url=https%3A%2F%2Fpublictv.in%2Fmp-pratap-simha-thanks-to-judge-on-bail-to-his-brothers-case%2F