HomeKarnatakaರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದ ಎಸ್ ಡಿಸಿ

ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದ ಎಸ್ ಡಿಸಿ

ಬೆಳಗಾವಿ: ಪಹಣಿ ಪತ್ರ ಮಾಡಿಕೊಡಲು ಲಂಚಕ್ಕೆ ಕೈಯೊಡ್ದಿದ್ದ ಎಸ್ ಡಿಸಿಯೊಬ್ಬರು ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲದಲ್ಲಿ ನಡೆದಿದೆ.

ಮಂಜುನಾಥ್ ಲೋಕಾಯುಕ್ತ ಬಲೆಗೆ ಬಿದ್ದ ಬೈಲಹೊಂಗಲ ಉಪವಿಭಾಗ ಕಚೇರಿಯ ಎಸ್ ಡಿಸಿ. ರಾಮದುರ್ಗ ತಾಲೂಕಿನ ರವಿ ಎಂಬುವವರಿಗೆ ಪಹಣಿ ಪತ್ರ ಮಾಡಿಕೊಡಲು ಲಂಚಕ್ಕೆ ಬೇಡಿಕೆ ಇಟ್ಟಿದ್ದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

60 ಸಾವಿರ ರೂಪಾಯಿ ಲಂಚ ಪಡೆಯುತ್ತಿದ್ದಾಗ ಖಚಿತ ಮಾಹಿತಿ ಮೇರೆಗೆ ಲೋಕಾಯುಕ್ತ ಎಸ್ ಪಿ ಹಣಮತರಾಯ ನೇತೃತ್ವದಲ್ಲಿ ದಾಳಿ ನಡೆಸಲಾಗಿದ್ದು, ಮಂಜುನಾಥ್ ಅವರನ್ನು ವಶಕ್ಕೆ ಪಡೆಯಲಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular