HomeKarnatakaಬೈಲೂರು ಅರಣ್ಯದಲ್ಲಿ ಬೆಂಕಿ ಅವಘಡ; 2 ತಿಂಗಳಲ್ಲಿ 3 ಬಾರಿ ನಡೆದ ಘಟನೆ

ಬೈಲೂರು ಅರಣ್ಯದಲ್ಲಿ ಬೆಂಕಿ ಅವಘಡ; 2 ತಿಂಗಳಲ್ಲಿ 3 ಬಾರಿ ನಡೆದ ಘಟನೆ

ಚಾಮರಾಜನಗರ: ಬೈಲೂರು ಅರಣ್ಯ ಪ್ರದೇಶದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಅಪಾರ ಪ್ರಮಾಣದ ಅರಣ್ಯ ಸಂಪತ್ತು ಬೆಂಕಿಗಾಹುತಿಯಾಗಿರುವ ಘಟನೆ ಚಾಮರಾಜನಗರದಲ್ಲಿ ನಡೆದಿದೆ.

ಬೈಲೂರು ವಲಯ ಅರಣ್ಯ ಪ್ರದೇಶದ ಸುಮಾರು 25 ಎಕರೆ ಅರಣ್ಯ ಪ್ರದೇಶ ಹೊತ್ತಿ ಉರಿದಿದೆ. 60ಕ್ಕೂ ಹೆಚ್ಚು ಅರಣ್ಯ ಇಲಾಖೆ ಸಿಬ್ಬಂದಿಗಳು ಬೆಂಕಿ ನಂದಿಸುವ ಕಾರ್ಯದಲ್ಲಿ ನಿರತರಾಗಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ತಿಂಗಳ ಹಿಂದಷ್ಟೇ ಜಿಲ್ಲೆಯ ಪುಣಜೂರು ಅರಣ್ಯ ಪ್ರದೇಶದಲ್ಲಿ ಬೆಂಕಿ ಹೊತ್ತಿಕೊಂಡಿತ್ತು. 50ಕ್ಕೂ ಹೆಚ್ಚು ಎಕರೆ ಪ್ರದೇಶ ಅಗ್ನಿಗಾಹುತಿಯಾಗಿತ್ತು. ಇದೀಗ ಬೈಲೂರು ಅರಣ್ಯ ಪ್ರದೇಶದಲ್ಲಿ ಬೆಂಕಿ ಅವಘದ ಸಂಭವಿಸಿದೆ. ಎರಡು ತಿಂಗಳ ಅವಧಿಯಲ್ಲಿ ಮೂರು ಬಾರಿ ಅರಣ್ಯ ಪ್ರದೇಶದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಹಲವಾರು ಅನುಮಾನಕ್ಕೆ ಕಾರಣವಾಗಿದೆ

For Latest News Updates, Join Our Whatsapp Community🚩
RELATED ARTICLES

Most Popular