HomeKarnatakaಈಶ್ವರಪ್ಪ ಹೇಳಿಕೆಗೆ ಬೈರತಿ ಬಸವರಾಜ್ ಕೆಂಡಾಮಂಡಲ

ಈಶ್ವರಪ್ಪ ಹೇಳಿಕೆಗೆ ಬೈರತಿ ಬಸವರಾಜ್ ಕೆಂಡಾಮಂಡಲ

ಬಾಗಲಕೋಟೆ: ಕಾಂಗ್ರೆಸ್ ನವರನ್ನು ಸೇರಿಸಿಕೊಂಡು ಹೀಗೆಲ್ಲಾ ಆಯ್ತು ಎಂದು ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪ ನೀಡಿದ ಹೇಳಿಕೆಗೆ ಮಾಜಿ ಸಚಿವ ಬೈರತಿ ಬಸವರಾಜ್ ಕೆಂಡಾಮಂಡಲರಾಗಿದ್ದಾರೆ.

ಯಾವುದೇ ಕಾರಣಕ್ಕೂ ಈ ರೀತಿ ಹೇಳಿಕೆಯನ್ನು ಸಹಿಸುವುದಿಲ್ಲ ಎಂದು ಕೆ.ಎಸ್. ಈಶ್ವರಪ್ಪ ಹೇಳಿಕೆಗೆ ಬೈರತಿ ಬಸವರಾಜ್ ಪ್ರತಿಕ್ರಿಯೆ ನೀಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಈಶ್ವರಪ್ಪ ಹೇಳಿಕೆ ಬಗ್ಗೆ ಪಕ್ಷದ ವೇದಿಕೆಯಲ್ಲಿ ಚರ್ಚೆ ಮಾಡುತ್ತೇವೆ. ಅವರು ಯಾವ ಅರ್ಥದಲ್ಲಿ ಹೀಗೆ ಹೇಳಿದ್ದಾರೋ ಗೊತ್ತಿಲ್ಲ. ಕಾಂಗ್ರೆಸ್ ನವರನ್ನು ಸೇರಿಸಿಕೊಂಡು ಹೀಗೆಲ್ಲಾ ಆಯಿತು ಎಂಬ ಈಶ್ವರಪ್ಪ ಹೇಳಿಕೆ ಬಗ್ಗೆ ನಾವೆಲ್ಲ ಚರ್ಚೆ ಮಾಡಿ ಪ್ರತಿಕ್ರಿಯೆ ನೀಡುತ್ತೇವೆ ಎಂದರು.

ಬಿಜೆಪಿ ಕಾಲದ ಹಗರಣಗಳ ತನಿಖೆ ವಿಚಾರಕ್ಕೆ ಸಂಬಂಧಿಸಿದಂತೆ ಯಾವ ಆ್ಯಂಗಲ್ ನಲ್ಲಿ ಬೇಕಾದರೂ ತನಿಖೆ ಮಾಡಿಕೊಳ್ಳಲಿ. ರಾಜ್ಯ ಸರ್ಕಾರದ ತನಿಖೆಗೆ ಸಂಪೂರ್ಣ ಸಹಕಾರ ನೀಡುತ್ತೇವೆ ಎಂದು ಬಾಗಲಕೋಟೆಯಲ್ಲಿ ಮಾಜಿ ಸಚಿವ ಬೈರತಿ ಬಸವರಾಜ್ ಹೇಳಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular