HomeLatest NewsBIG NEWS: ಬಜರಂಗದಳದ 'ಶೌರ್ಯ ಯಾತ್ರೆ' ವೇಳೆ ಕಲ್ಲು ತೂರಾಟ: ಬುಲ್ಡೋಜರ್ ನೊಂದಿಗೆ ಬಂದ ಕಾರ್ಯಕರ್ತರು

BIG NEWS: ಬಜರಂಗದಳದ ‘ಶೌರ್ಯ ಯಾತ್ರೆ’ ವೇಳೆ ಕಲ್ಲು ತೂರಾಟ: ಬುಲ್ಡೋಜರ್ ನೊಂದಿಗೆ ಬಂದ ಕಾರ್ಯಕರ್ತರು

ಹರಿದ್ವಾರ: ಬಜರಂಗದಳದ ಶೌರ್ಯ ಯಾತ್ರೆ ವೇಳೆ ಕಲ್ಲು ತೂರಾಟ ನಡೆದ ಘಟನೆ ಉತ್ತರಾಖಂಡದ ಹರಿದ್ವಾರದ ಜ್ವಲಾಪುರದಲ್ಲಿ ನಡೆದಿದೆ.

ಬಜರಂಗದಳದಿಂದ ಶ್ರೌರ್ಯ ಯಾತ್ರೆ ಆಯೋಜಿಸಲಾಗಿತ್ತು. ಮೆರವಣಿಗೆಯಲ್ಲಿ ವಿವಿಧ ಭಾಗಗಳಿಂದ ಬಂದಿದ್ದ ಬಜರಂಗದಳ ಕಾರ್ಯಕರ್ತರು ಪಾಲ್ಗೊಂಡಿದ್ದರು. ಜ್ವಲಾಪುರದ ರಾಮಚೌಕದ ಬಳಿ ಮೆರವಣಿಗೆ ತಲುಪಿತ್ತಿದ್ದಂತೆ ಮೆರವಣಿಗೆ ಮೇಲೆ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ್ದಾರೆ.

ತಕ್ಷಣ ಪೊಲೀಸರು ಸ್ಥಳದಲ್ಲಿ ಬೀಡುಬಿಟ್ಟು ಪರಿಸ್ಥಿತಿ ಕೈಮೀರದಂತೆ ನಿಯಂತ್ರಿಸಿದ್ದಾರೆ. ಈ ವೇಳೆ ಬಜರಂಗದಳದ ಕೆಲ ಕಾರ್ಯಕರ್ತರು ಬುಲ್ಡೋಜರ್ ಸಮೇತ ಸ್ಥಳಕ್ಕಾಗಮಿಸಿದ್ದಾರೆ. ಕಲ್ಲು ತೂರಾಟ ನಡೆಸಿದ ಕಿಡಿಗೇದಿಗಳ ವಿರುದ್ಧ ಕ್ರಮ ಕೈಗೊಳ್ಲುವುದಾಗಿ ಪೊಲೀಸರು ಬಜರಂಗದಳ ಕಾರ್ಯಕರ್ತರಿಗೆ ಭರವಸೆ ನೀಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸ್ಥಳದಲ್ಲಿ ಹೆಚ್ಚಿನ ಪೊಲೀಸರನ್ನು ನಿಯೋಜಿಸಿ ಪರಿಸ್ಥಿತಿಯನ್ನು ತಿಳಿಗೊಳಿಸಲಾಗಿದೆ. ಧಾರ್ಮಿಕ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆದಿರುವುದು ಆಡಳಿತ ವೈಫಲ್ಯದ ಪ್ರತೀಕ ಎಂದು ಬಜರಂಗದಳ ರಾಜ್ಯಾಧ್ಯಕ್ಷ ಅನುಜ್ ವಾಲಿಯಾ ಕಿಡಿಕಾರಿದ್ದಾರೆ.

ಕಲ್ಲು ತೂರಾಟ ನಡೆದ ಬಗ್ಗೆ ಅಪರಿಚಿತ ವ್ಯಕ್ತಿಗಳ ವಿರುದ್ಧ ದೂರು ದಾಖಲಾಗಿದೆ. ವಿಡಿಯೋ ದೃಶ್ಯ ಆಧರಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ಹರಿದಾರ ನಗರ ಪೊಲೀಸ್ ವರಿಷ್ಠಾಧಿಕಾರಿ ಅಭಯ್ ಪ್ರತಾಪ್ ತಿಳಿಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular