HomeLatest Newsಬಕ್ರೀದ್ ಹಿನ್ನೆಲೆ ; ರಾಜ್ಯಾದ್ಯಂತ ಅನಧಿಕೃತ ಗೋವು ಮತ್ತು ಒಂಟೆಗಳ ಸಾಗಾಣಿಕೆ ಹಾಗೂ ವಧೆ ನಿಷೇಧ

ಬಕ್ರೀದ್ ಹಿನ್ನೆಲೆ ; ರಾಜ್ಯಾದ್ಯಂತ ಅನಧಿಕೃತ ಗೋವು ಮತ್ತು ಒಂಟೆಗಳ ಸಾಗಾಣಿಕೆ ಹಾಗೂ ವಧೆ ನಿಷೇಧ

ಸರ್ವೋಚ್ಛ ನ್ಯಾಯಾಲಯದ ಆದೇಶದನ್ವಯ ದೇಶಾದ್ಯಂತ ಅನಧಿಕೃತ ಗೋವು ಮತ್ತು ಒಂಟೆಗಳ ಸಾಗಾಣಿಕೆ ಹಾಗೂ ವಧೆಯನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ. ಬಕ್ರೀದ್ ಹಬ್ಬದ ಆಚರಣೆಯ ಹಿನ್ನೆಲೆಯಲ್ಲಿ, ಬಳ್ಳಾರಿ ಜಿಲ್ಲೆಯ ವ್ಯಾಪ್ತಿಯಲ್ಲಿ ಇಂತಹ ಅಕ್ರಮ ಚಟುವಟಿಕೆಗಳನ್ನು ತಡೆಗಟ್ಟಲು ಜಿಲ್ಲಾಡಳಿತವು ಕಟ್ಟುನಿಟ್ಟಿನ ಕ್ರಮ ಕೈಗೊಂಡಿದೆ.

ಇತ್ತೀಚೆಗೆ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ನಡೆದ ಜಿಲ್ಲಾ ಮಟ್ಟದ ಸಂಬಂಧಪಟ್ಟ ಎಲ್ಲಾ ಇಲಾಖಾ ಅಧಿಕಾರಿಗಳ ಸಭೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಜಿಲ್ಲಾದ್ಯಂತ ಇರುವ ಎಲ್ಲಾ ಚೆಕ್‌ಪೋಸ್ಟ್ಗಳಲ್ಲಿ ಪಶುಸಂಗೋಪನಾ ಇಲಾಖೆ, ಪೊಲೀಸ್ ಇಲಾಖೆ ಹಾಗೂ ಪ್ರಾದೇಶಿಕ ಸಾರಿಗೆ ಇಲಾಖೆಯ ಅಧಿಕಾರಿಗಳು ಜಂಟಿಯಾಗಿ ಕಾರ್ಯನಿರ್ವಹಿಸಲಿದ್ದು, ಕಟ್ಟುನಿಟ್ಟಿನ ನಿಗಾ ವಹಿಸಲಿದ್ದಾರೆ.

ಸಾರ್ವಜನಿಕರಲ್ಲಿ ಮನವಿ ಮತ್ತು ಸಹಾಯವಾಣಿ

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಜಿಲ್ಲೆಯಲ್ಲಿ ಎಲ್ಲಿಯಾದರೂ ಅಕ್ರಮವಾಗಿ ಗೋವು ಅಥವಾ ಒಂಟೆಗಳ ಸಾಗಾಣಿಕೆ ಮತ್ತು ವಧೆ ಮಾಡುವುದು ಕಂಡುಬAದಲ್ಲಿ, ಸಾರ್ವಜನಿಕರು ತಕ್ಷಣವೇ ಪಶುಸಂಗೋಪನಾ ಇಲಾಖೆ- 08392-275146, ಪೊಲೀಸ್ ಇಲಾಖೆ (ತುರ್ತು ಸಂಖ್ಯೆ) 112 ಗೆ ಸಂಪರ್ಕಿಸಿ ಮಾಹಿತಿ ನೀಡಬಹುದಾಗಿದೆ.ಬಕ್ರೀದ್ ಹಬ್ಬದ ಸಂದರ್ಭದಲ್ಲಿ ಕಾನೂನು ಸುವ್ಯವಸ್ಥೆ ಮತ್ತು ನಿಯಮಗಳ ಪಾಲನೆಗಾಗಿ ಎಲ್ಲಾ ಸಮುದಾಯದ ಧಾರ್ಮಿಕ ಮುಖಂಡರು ಜಿಲ್ಲಾಡಳಿತದೊಂದಿಗೆ ಸಂಪೂರ್ಣವಾಗಿ ಸಹಕರಿಸಬೇಕು ಎಂದು ಮಹಾನಗರ ಪಾಲಿಕೆಯ ಆಯುಕ್ತರು ಪ್ರಕಟಣೆಯಲ್ಲಿ ವಿನಂತಿಸಿದ್ದಾರೆ.

* ಮಳೆಗಾಲದಲ್ಲಿ ಸೊಳ್ಳೆ ನಿಯಂತ್ರಿಸಿ, ರೋಗ ಮುಕ್ತರಾಗಿರಿ : ಸಾರ್ವಜನಿಕರಿಗೆ ಡಿಹೆಚ್‌ಓ ಡಾ.ಯಲ್ಲಾ ರಮೇಶಬಾಬು ಕರೆ

ಬಳ್ಳಾರಿ :   ಮಳೆಗಾಲದ ಆರಂಭದ ಹಿನ್ನೆಲೆಯಲ್ಲಿ ಸಾರ್ವಜನಿಕರು ತಮ್ಮ ಮನೆಯ ಸುತ್ತಮುತ್ತ ನೀರು ನಿಲ್ಲದಂತೆ ಎಚ್ಚರಿಕೆ ವಹಿಸಬೇಕು. ನೀರಿನ ಸಂಗ್ರಹಕಗಳನ್ನು ವಾರಕ್ಕೊಮ್ಮೆ ಸ್ವಚ್ಛಗೊಳಿಸುವ ಮೂಲಕ ಹಾಗೂ ಚರಂಡಿಗಳಲ್ಲಿ ಕಸಕಡ್ಡಿಗಳು ತುಂಬಿಕೊಳ್ಳದಂತೆ ನೀರು ಸರಾಗವಾಗಿ ಹರಿಯಲು ಬಿಡುವುದರಿಂದ ಸೊಳ್ಳೆಗಳಿಂದ ಹರಡುವ ಸಾಂಕ್ರಾಮಿಕ ರೋಗಗಳನ್ನು ತಡೆಗಟ್ಟಬಹುದು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಯಲ್ಲಾ ರಮೇಶಬಾಬು ಅವರು ವಿನಂತಿಸಿದ್ದಾರೆ.

*ಸೊಳ್ಳೆಗಳ ಉತ್ಪತ್ತಿ ತಾಣಗಳ ನಾಶಕ್ಕೆ ಕರೆ

ಮನೆಯ ಸುತ್ತಮುತ್ತ ಹಾಗೂ ಮೇಲ್ಭಾಗದಲ್ಲಿ, ಹೂವಿನ ಕುಂಡಗಳು, ಟಿನ್, ಪ್ಲಾಸ್ಟಿಕ್ ಕಪ್‌ಗಳಲ್ಲಿ ಮಳೆ ನೀರು ನಿಲ್ಲದಂತೆ ನೋಡಿಕೊಳ್ಳಬೇಕು. ಇಲ್ಲದಿದ್ದರೆ ಇವು ಸೊಳ್ಳೆಗಳ ಉತ್ಪತ್ತಿ ಕೇಂದ್ರಗಳಾಗುತ್ತವೆ. ನೀರು ಸಂಗ್ರಹಿಸುವ ಡ್ರಮ್, ಬ್ಯಾರೆಲ್, ಸಿಮೆಂಟ್ ತೊಟ್ಟಿ, ಮಡಿಕೆ ಮುಂತಾದವುಗಳನ್ನು ನೀರು ತುಂಬುವ ಮುನ್ನ ಚೆನ್ನಾಗಿ ತಿಕ್ಕಿ ತೊಳೆದು, ಸರಿಯಾಗಿ ಮುಚ್ಚಳ ಮುಚ್ಚಬೇಕು ಎಂದು ಹೇಳಿದ್ದಾರೆ.

*ಸಿಡಿಲು-ಮಿಂಚಿನ ಸಂದರ್ಭದಲ್ಲಿ ಸುರಕ್ಷತೆ ಮುಖ್ಯ:*

ಮಾನ್ಸೂನ್ ಮಳೆಯ ಆರಂಭದಲ್ಲಿ ಗುಡುಗು, ಮಿಂಚು ಸಹಿತ ಮಳೆ ಬರುವ ಸಾಧ್ಯತೆ ಹೆಚ್ಚಿರುತ್ತದೆ. ಈ ವೇಳೆ ಬಯಲು ಪ್ರದೇಶದಲ್ಲಿದ್ದರೆ ತಕ್ಷಣವೇ ತಗ್ಗು ಪ್ರದೇಶಕ್ಕೆ ಹೋಗಿ ಕುಳಿತುಕೊಳ್ಳಬೇಕು. ಒಂದು ವೇಳೆ ಆಶ್ರಯ ಪಡೆಯಲು ಯಾವುದೇ ತಗ್ಗು ಪ್ರದೇಶವಿಲ್ಲದೆ ಬಯಲಿನಲ್ಲೇ ಇರಬೇಕಾಗಿ ಬಂದರೆ, ತಲೆಯನ್ನು ಮೊಣಕಾಲುಗಳ ನಡುವೆ ಹುದುಗಿಸಿಕೊಂಡು ಕುಳಿತುಕೊಳ್ಳಬೇಕು. ಇದು ಮಿಂಚಿನಿಂದ ಮೆದುಳು ಮತ್ತು ಹೃದಯಕ್ಕೆ ಆಗುವ ಹಾನಿಯನ್ನು ತಪ್ಪಿಸುತ್ತದೆ. ಮರಗಳಿರುವ ಪ್ರದೇಶದಲ್ಲಿದ್ದರೆ ತಕ್ಷಣವೇ ಅಲ್ಲಿಂದ ಹೊರಬರುವುದು ಸುರಕ್ಷಿತ ಎಂದು ಅವರು ತಿಳಿಸಿದ್ದಾರೆ.

*ಕಲುಷಿತ ನೀರು ಮತ್ತು ವಾಂತಿ-ಭೇದಿ ನಿಯಂತ್ರಣಕ್ಕೆ ಕ್ರಮ:

ಮಳೆಯಿಂದಾಗಿ ನೀರಿನ ಮೂಲಗಳಿಗೆ ಹೊಸ ನೀರು ಬಂದು ಸೇರುವುದರಿಂದ, ಶುದ್ಧೀಕರಿಸದ ನೀರನ್ನು ಕುಡಿದರೆ ವಾಂತಿ-ಭೇದಿ ಉಂಟಾಗುವ ಸಾಧ್ಯತೆ ಇರುತ್ತದೆ. ಹಾಗಾಗಿ ಸಾರ್ವಜನಿಕರು ಕ್ಲೋರಿನೇಷನ್ ಕೈಗೊಂಡು ಶುದ್ಧೀಕರಿಸಿದ ಕುಡಿಯುವ ನೀರು ಅಥವಾ ಶುದ್ಧೀಕರಣ ಘಟಕದ ನೀರನ್ನೇ ಬಳಸಬೇಕು. ಸಾಧ್ಯವಿದ್ದಲ್ಲಿ ನೀರನ್ನು ಚೆನ್ನಾಗಿ ಕುದಿಸಿ ಆರಿಸಿ, ಸೋಸಿ ಕುಡಿಯಬೇಕು. ಬಿಸಿಯಾದ ಆಹಾರ ಪದಾರ್ಥಗಳನ್ನೇ ಸೇವಿಸಬೇಕು. ಊಟಕ್ಕೆ ಮುಂಚೆ ಮತ್ತು ಶೌಚಾಲಯದ ಬಳಕೆಯ ನಂತರ ಕೈಗಳನ್ನು ಸಾಬೂನಿನಿಂದ ಸ್ವಚ್ಛವಾಗಿ ತೊಳೆದುಕೊಳ್ಳಬೇಕು ಹಾಗೂ ಕಡ್ಡಾಯವಾಗಿ ಶೌಚಾಲಯವನ್ನೇ ಬಳಸಬೇಕು.

  • *ಆತಂಕ ಬೇಡ, ಆಸ್ಪತ್ರೆಗಳಲ್ಲಿ ಔಷಧಿ ದಾಸ್ತಾನು ಇದೆ:*
  • ಮೇ, ಜೂನ್, ಜುಲೈ ಮತ್ತು ಆಗಸ್ಟ್ ತಿಂಗಳುಗಳಲ್ಲಿ ವಾತಾವರಣ ಬದಲಾಗುವುದರಿಂದ ಸಾರ್ವಜನಿಕರು ಆರೋಗ್ಯದ ಕಡೆಗೆ ಹೆಚ್ಚಿನ ಗಮನ ಹರಿಸಬೇಕು. ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಅಗತ್ಯ ಔಷಧಿಗಳನ್ನು ಈಗಾಗಲೇ ದಾಸ್ತಾನು ಮಾಡಲಾಗಿದ್ದು, ಸಾರ್ವಜನಿಕರು ಯಾವುದೇ ಆತಂಕಕ್ಕೆ ಒಳಗಾಗದೆ, ಅನಾರೋಗ್ಯ ಕಂಡುಬAದಲ್ಲಿ ತಕ್ಷಣ ಹತ್ತಿರದ ಸರ್ಕಾರಿ ಆಸ್ಪತ್ರೆಗೆ ಭೇಟಿ ನೀಡಿ ಚಿಕಿತ್ಸೆ ಪಡೆಯಬೇಕು ಎಂದು ಡಿಹೆಚ್‌ಓ ಡಾ.ಯಲ್ಲಾ ರಮೇಶಬಾಬು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular