ಲಕ್ಷ್ಮಣ ಸವದಿ ಮುಂದಿನ ಸಿಎಂ ಆಗಲೆಂದು ಆಶೀರ್ವಾದ

ಮಾಜಿ ಉಪಮುಖ್ಯಮಂತ್ರಿ, ಮಾಜಿ ಸಾರಿಗೆ ಸಚಿವ ಲಕ್ಷ್ಮಣ ಸವದಿಯವರಿಗೆ ಮುಖ್ಯಮಂತ್ರಿಯಾಗುವ ಅದೃಷ್ಟವಿದೆಯಾ ? ಹೀಗೊಂದು ಚರ್ಚೆ ನಡೆಯುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡ್ತಿದೆ. ಕರ್ನಾಟಕದಲ್ಲಿ ಕೆಲವೇ ತಿಂಗಳಲ್ಲಿ ವಿಧಾನಸಭೆ ನಡೆಯಲಿದ್ದು ಲಕ್ಷ್ಮಣ ಸವದಿ ಮುಂದಿನ ಮುಖ್ಯಮಂತ್ರಿಯಾಗಲೆಂದು ಆಧ್ಯಾತ್ಮ ಗುರುಗಳೊಬ್ಬರು ಆಶೀರ್ವದಿಸಿದ್ದಾರೆ.

ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಆಧ್ಯಾತ್ಮಿಕ ಗುರು ಬಾಲಾಚಾರ್ಯ ಸ್ವಾಮೀಜಿ ಪಾಲ್ಗೊಂಡಿದ್ದ ಧಾರ್ಮಿಕ ಕಾರ್ಯಕ್ರಮದ ವೇಳೆ ಈ ವಿಡಿಯೋವನ್ನು ಚಿತ್ರೀಕರಿಸಲಾಗಿದೆ. ಬಿಎಸ್ ಯಡಿಯೂರಪ್ಪ ಸರ್ಕಾರದಲ್ಲಿ ಸಾರಿಗೆ ಸಚಿವರಾಗಿದ್ದ ಲಕ್ಷ್ಮಣ ಸವದಿ, ಪಾದಗಳನ್ನು ಮುಟ್ಟಿ ಆಶೀರ್ವಾದ ಪಡೆಯುತ್ತಿದ್ದಂತೆ, ಸ್ವಾಮೀಜಿ ಅವರು “ಮುಂದಿನ ಸಿಎಂ” ಆಗಲು ಯಶಸ್ಸು ಸಿಗಲಿ ಎಂದು ಸವದಿಗೆ ಆಶೀರ್ವದಿಸಿದರು.

ಬೆಳಗಾವಿಯ ಅಥಣಿ ಕ್ಷೇತ್ರ ಸವದಿಯವರ ತವರು ನೆಲವಾಗಿದೆ. ಅವರು 2018ರ ಚುನಾವಣೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಮಹೇಶ ಕುಮಟಳ್ಳಿ ವಿರುದ್ಧ ಭಾರೀ ಅಂತರದಿಂದ ಪರಾಭವಗೊಂಡಿದ್ದರು. ಅಂತಿಮವಾಗಿ ಅದೇ ಕ್ಷೇತ್ರದಿಂದ ಅವರು ಉಪಚುನಾವಣೆಯಲ್ಲಿ ಗೆದ್ದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read