ರಾಮನಗರ: ರಾಜ್ಯ ಸರ್ಕಾರದ ಜಿಬಿಐಟಿ ಯೋಜನೆ ಖಂಡಿಸಿ ರಾಮನಗರದಲ್ಲಿ ನಡೆಸುತ್ತಿರುವ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. ಮಾಗಡಿ ಶಾಸಕ ಹೆಚ್.ಸಿ. ಬಾಲಕೃಷ್ಣ ಅವರ ಕಾರಿಗೆ ಮುತ್ತಿಗೆ ಹಾಕಿರುವ ಪ್ರತಿಭಟನಾಕಾರರು ಕಾರು ಡ್ಯಾಮೇಜ್ ಮಾಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಪಕ್ಷದ ಕಾರ್ಯಕರ್ತನ ಗೃಹಪ್ರವೇಶ ಕಾರ್ಯಕ್ರಮಕ್ಕೆಂದು ರಾಮನಗರಕ್ಕೆ ಶಾಸಕ ಬಾಲಕೃಷ್ಣ ಆಗಮಿಸಿದ್ದರು. ಈ ವೇಳೆ ಕಾರನ್ನು ಅಡ್ಡಗಟ್ಟಿದ ಪ್ರತಿಭಟನಾಕಾರರು ಮುತ್ತಿಗೆ ಹಾಕಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾರಿನ ಮುಂಭಾಗ ಡ್ಯಾಮೇಜ್ ಆಗಿರುವ ಘಟನೆ ನಡೆದಿದೆ. ಸ್ಥಳದಲ್ಲಿದ್ದ ಪೊಲೀಸರು ಪ್ರತಿಭಟನಾಕಾರರನ್ನು ನಿಯಂತ್ರಿಸಿದ್ದಾರೆ.
