ಉದ್ಘಾಟನೆಗೊಂಡ ಕೆಲವೇ ತಿಂಗಳಲ್ಲಿ ಕುಸಿದು ಬಿದ್ದ 56 ಕೋಟಿ ರೂ. ವೆಚ್ಚದ ತಡೆಗೋಡೆ

ಶಿವಮೊಗ್ಗ: ತೀರ್ಥಹಳ್ಳಿ ತಾಲೂಕಿನಲ್ಲಿ ಭಾರಿ ಮಳೆಯಿಂದಾಗಿ ಕುರುವಳ್ಳಿ – ಬಾಳೇಬೈಲಿನ ರಾಷ್ಟ್ರೀಯ ಹೆದ್ದಾರಿ 169ಎ ಮಾರ್ಗದಲ್ಲಿ ನಿರ್ಮಿಸಿರುವ ತುಂಗಾ ಸೇತುವೆ ಬೈಪಾಸ್ ರಸ್ತೆಯ ತಡೆಗೋಡೆಗಳು ಕುಸಿದು ಬಿದ್ದಿವೆ.

56 ಕೋಟಿ ರೂ. ವೆಚ್ಚದಲ್ಲಿ ಹೊಸ ತುಂಗಾ ಸೇತುವೆ ಹಾಗೂ ಬೈಪಾಸ್ ರಸ್ತೆ ನಿರ್ಮಿಸಲಾಗಿತ್ತು. ಉದ್ಘಾಟನೆಗೊಂಡ ಕೆಲವೇ ತಿಂಗಳ ಒಳಗಾಗಿ ತಡೆಗೋಡೆ ಬಿದ್ದಿದೆ. ಗುಡ್ಡ ಮಣ್ಣು ಕುಸಿಯುತ್ತಿದ್ದು,  ಈಗಾಗಲೇ ವಾಹನ ಸಂಚಾರ ನಿರ್ಬಂಧಿಸಲಾಗಿದೆ.

ಸ್ಥಳದಲ್ಲಿ ಡಿವೈಎಸ್ಪಿ ಗಜಾನನ ವಾಮನ ಸುತಾರ, ಸಬ್ ಇನ್ಸ್ಪೆಕ್ಟರ್ ಶಿವನಗೌಡ ಇತರ ಪೊಲೀಸರು ಸ್ಥಳದಲ್ಲೇ ಮೊಕ್ಕಾಂ ಹೂಡಿದ್ದಾರೆ. ಸಾರ್ವಜನಿಕರಿಗೆ ಹಾಗೂ ವಾಹನ ಸವಾರರಿಗೆ ಯಾವುದೇ ತೊಂದರೆಯಾಗದಂತೆ ಬ್ಯಾರಿಕೇಡ್ ಹಾಕಿ ಮುನ್ನೇಚರಿಕೆ ಕ್ರಮ ಕೈಗೊಂಡಿದ್ದಾರೆ. ಸೋಮವಾರ ಸಂಜೆ ವೇಳೆ ಶಿಥಿಲಗೊಂಡಿದ್ದ ತಡೆಗೋಡೆಗಳು ಮಂಗಳವಾರ ಸಂಜೆ ವೇಳೆಗೆ ಕುಸಿದು ಬಿದ್ದಿವೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read