ಶಿವಮೊಗ್ಗ: ಧಾರಾಕಾರ ಮಳೆಯಿಂದಾಗಿ ಬಾಳೆಬರೆ ಘಾಟ್ ನಲ್ಲಿ ಮಣ್ಣು ಕುಸಿದು ಅವಾಂತರ ಸೃಷ್ಟಿಯಾಗಿದ್ದು, ಭಾರಿ ವಾಹನಗಳ ಸಂಚಾರವನ್ನು ನಿಷೇಧಿಸಲಾಗಿದೆ.
ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಬಾಳೆಬರೆ ಘಾಟ್ ನಲ್ಲಿ ಮಣ್ಣು ಕುಸಿತಗೊಂಡಿದೆ. ಈ ಹಿನ್ನೆಲೆಯಲ್ಲಿ ಮುಂಜಾಗೃತಾ ಕ್ರಮವಾಗಿ ಭಾರಿ ವಾಹನಗಳ ಸಂಚಾರವನ್ನು ಬಂದ್ ಮಾಡಿ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಆದೇಶ ಹೊರಡಿಸಿದ್ದಾರೆ.
ಭಾರಿ ವಾಹನಗಳು ಪರ್ಯಾಯ ಮಾರ್ಗದಲ್ಲಿ ಸಂಚರಿಸುವಂತೆ ಜಿಲ್ಲಾಧಿಕಾರಿಗಳು ಸೂಚನೆ ನೀಡಿದ್ದಾರೆ.