HomeLatest NewsBREAKING: ಬಾಳೆಬರೆ ಘಾಟ್ ನಲ್ಲಿ ಮಣ್ಣು ಕುಸಿತ: ಭಾರಿ ವಾಹನಗಳ ಸಂಚಾರಕ್ಕೆ ನಿಷೇಧ

BREAKING: ಬಾಳೆಬರೆ ಘಾಟ್ ನಲ್ಲಿ ಮಣ್ಣು ಕುಸಿತ: ಭಾರಿ ವಾಹನಗಳ ಸಂಚಾರಕ್ಕೆ ನಿಷೇಧ

ಶಿವಮೊಗ್ಗ: ಧಾರಾಕಾರ ಮಳೆಯಿಂದಾಗಿ ಬಾಳೆಬರೆ ಘಾಟ್ ನಲ್ಲಿ ಮಣ್ಣು ಕುಸಿದು ಅವಾಂತರ ಸೃಷ್ಟಿಯಾಗಿದ್ದು, ಭಾರಿ ವಾಹನಗಳ ಸಂಚಾರವನ್ನು ನಿಷೇಧಿಸಲಾಗಿದೆ.

ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಬಾಳೆಬರೆ ಘಾಟ್ ನಲ್ಲಿ ಮಣ್ಣು ಕುಸಿತಗೊಂಡಿದೆ. ಈ ಹಿನ್ನೆಲೆಯಲ್ಲಿ ಮುಂಜಾಗೃತಾ ಕ್ರಮವಾಗಿ ಭಾರಿ ವಾಹನಗಳ ಸಂಚಾರವನ್ನು ಬಂದ್ ಮಾಡಿ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಆದೇಶ ಹೊರಡಿಸಿದ್ದಾರೆ.

ಭಾರಿ ವಾಹನಗಳು ಪರ್ಯಾಯ ಮಾರ್ಗದಲ್ಲಿ ಸಂಚರಿಸುವಂತೆ ಜಿಲ್ಲಾಧಿಕಾರಿಗಳು ಸೂಚನೆ ನೀಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular