ಮಂಗಳೂರು: ಟಿಪ್ಪರ್ ಲಾರಿಯಲ್ಲಿ ಶಾಲಾ ವಿದ್ಯಾರ್ಥಿಗಳನ್ನು ಪ್ರವಾಸಕ್ಕೆ ಕರೆದುಕೊಂಡು ಹೋಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಲೆಯ ಮುಖ್ಯ ಶಿಕ್ಷಕರನ್ನು ಅಮಾನತುಗೊಳಿಸಿ ಆದೇಶ ಹೊರಡಿಸಲಾಗಿದೆ.
ಕಿರಣ್ ಸಸ್ಪೆಂಡ್ ಆಗಿರುವ ಬಳೆಂಜ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಬಳೆಂಜ ಸರ್ಕಾರಿ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳನ್ನು ಟಿಪ್ಪರ್ ಲಾರಿಯಲ್ಲಿ ಪ್ರವಾಸಕ್ಕೆ ಕರೆದೊಯ್ಯಲಾಗಿತ್ತು.
ಶಿಕ್ಷಕರ ಬೇಜವಾಬ್ದಾರಿಗೆ ತೀವ್ರ ಆಕ್ರೋಶ ವ್ಯಕ್ತವಾಗಿತ್ತು. ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ಡಿಡಿಪಿಐ ಶಶಿಧರ್, ಬಳೆಂಜ ಶಾಲೆಯ ಮುಖ್ಯ ಶಿಕ್ಷಕರನ್ನು ಅಮನತುಗೊಳಿಸಿ ಆದೇಶ ಹೊರಡಿಸಿದ್ದಾರೆ.

