HomeKarnatakaBREAKING: ಬಳ್ಳಾರಿ ಘರ್ಷಣೆ ಪ್ರಕರಣ: ಶಾಸಕ ಭರತ್ ರೆಡ್ಡಿಯ ಆಪ್ತ ಸತೀಶ್ ರೆಡ್ದಿಯ ಗನ್ ಮ್ಯಾನ್...

BREAKING: ಬಳ್ಳಾರಿ ಘರ್ಷಣೆ ಪ್ರಕರಣ: ಶಾಸಕ ಭರತ್ ರೆಡ್ಡಿಯ ಆಪ್ತ ಸತೀಶ್ ರೆಡ್ದಿಯ ಗನ್ ಮ್ಯಾನ್ ಗಳು ನಾಪತ್ತೆ

ಬಳ್ಳಾರಿ: ಬಳ್ಳಾರಿಯಲ್ಲಿ ಬ್ಯಾನರ್ ಕಟ್ಟುವ ವಿಚಹರವಾಗಿ ಗಲಾಟೆ, ಘರ್ಷಣೆಗಳು ನಡೆದು ಫೈರಿಂಗ್ ನಲ್ಲಿ ಕಾಂಗ್ರೆಸ್ ಕಾರ್ಯಕರ್ತನೋರ್ವ ಸಾವನ್ನಪ್ಪಿರುವ ಘಟನೆ ಬೆನ್ನಲ್ಲೇ ಬಳ್ಳಾರಿಯಲ್ಲಿ ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾಗಿದೆ. ಫೈರಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ.

ಬಳ್ಳಾರಿ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ಕು ಪ್ರತ್ಯೇಕ ಪ್ರಕರಣಗಳು ದಾಖಲಾಗಿವೆ. 5 ಬಂದೂಕುಗಳನ್ನು ವಶಕ್ಕೆ ಪಡೆಯಲಾಗಿದೆ. ರಾಜಕೀಯ ಮುಖಂಡರ ಗನ್ ಮ್ಯಾನ್ ಗಳನ್ನು ವಿಚಾರಣೆ ನಡೆಸಲಾಗುತ್ತಿದೆ. ಈ ನಡುವೆ ಶಾಸಕ ಭರತ್ ರೆಡ್ಡಿ ಆಪ್ತ ಸತೀಶ್ ರೆಡ್ಡಿಯ ಖಾಸಗಿ ಗನ್ ಮ್ಯಾನ್ ಗಳು ನಾಪತ್ತೆಯಾಗಿದ್ದಾರೆ ಎಂದು ತಿಳಿದುಬಂದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬ್ಯಾನರ್ ಕಟ್ಟುವ ವಿಚಾರವಾಗಿ ನಡೆದ ಗಲಾಟೆ ವೇಳೆ ಸತೀಶ್ ರೆಡ್ಡಿಯ ಗನ್ ಮ್ಯಾನ್ ಫೈರಿಂಗ್ ಮಾಡಿರುವುದು ಬೆಳಕಿಗೆ ಬಂದಿದೆ. ಈ ಕುರಿತ ವಿಡಿಯೋಗಳುವೈರಲ್ ಆಗಿವೆ. ಇದರ ಬೆನ್ನಲ್ಲೇ ಸತೀಶ್ ರೆಡ್ಡಿ ಗನ್ ಮ್ಯಾನ್ ಗಳು ನಾಪತ್ತೆಯಾಗಿದ್ದಾರೆ. ಗನ್ ಮ್ಯಾನ್ ಗಳ ಪತ್ತೆ ಕಾರ್ಯವೂ ಬರದಿಂದ ಸಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular