ಬಳ್ಳಾರಿ: ಬಳ್ಳಾರಿಯಲ್ಲಿ ಬ್ಯಾನರ್ ಕಟ್ಟುವ ವಿಚಾರವಾಗಿ ಗಲಾಟೆ ನಡೆದು ಫೈರಿಂಗ್ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಚುರುಕುಗೊಳಿಸಿರುವ ಪೊಲೀಸರು ಇಬ್ಬರು ಗನ್ ಮ್ಯಾನ್ ಗಳನ್ನು ವಶಕ್ಕೆ ಪಡೆದಿದ್ದಾರೆ.
ಬಳ್ಳಾರಿಯಲ್ಲಿ ಶಾಸಕ ಜನಾರ್ಧನ ರೆಡ್ಡಿ ಮನೆಯ ಬಳಿ ಬ್ಯಾನರ್ ಕಟ್ಟುವ ವಿಚಾರವಾಗಿ ಗಲಾಟೆ ನಡೆದು ಘಟನೆಯಲ್ಲಿ ಫೈರಿಂಗ್ ನಡೆದಿತ್ತು. ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ರಾಜಶೇಖರ್ ಎಂಬಾತ ಸಾವನ್ನಪ್ಪಿದ್ದಾನೆ. ಹಲವರು ಗಾಯಗೊಂಡಿದ್ದಾರೆ. ಫೈರಿಂಗ್ ನಡೆಸಿರುವವರ ಬಗ್ಗೆ ತನಿಖೆ ನಡೆಸುತ್ತುತ್ತಿರುವ ಬ್ರೂಸ್ ಠಾಣೆ ಪೊಲೀಸರು ಇದೀಗ ಸತೀಶ್ ರೆಡ್ಡಿಯ ಇಬ್ಬರು ಗನ್ ಮ್ಯಾನ್ ಗಳನ್ನು ವಶಕ್ಕೆ ಪಡೆದಿದ್ದಾರೆ.
ಸತೀಶ್ ರೆಡ್ಡಿ ಕಾಂಗ್ರೆಸ್ ಶಾಸಕ ನಾರಾ ಭರತ್ ರೆಡ್ಡಿಯ ಆಪ್ತ. ಸತೀಶ್ ರೆಡ್ಡಿಯ ಖಾಸಗಿ ಗನ್ ಮ್ಯಾನ್ ಗಳೇ ಗಲಾಟೆ ವೇಳೆ ಗನ್ ಫೈರ್ ಮಾಡಿದ್ದರು ಎಂದು ತಿಳಿದುಬಂದಿದೆ. ಈ ಹಿನ್ನೆಲೆಯಲ್ಲಿ ಇಬ್ಬರು ಗನ್ ಮ್ಯಾನ್ ಗಳು ಸೇರಿ ಒಟ್ಟು 40 ಜನರನ್ನು ಪೊಲೀಸರು ವಶಕ್ಕೆ ಪಡೆದು ತನಿಖೆ ನಡೆಸಿದ್ದಾರೆ.

