ಬಳ್ಳಾರಿ: ಬಳ್ಳಾರಿಯಲ್ಲಿ ಬ್ಯಾನರ್ ಕಟ್ಟುವ ವಿಚಾರವಾಗಿ ನಡೆದ ಗಲಾಟೆ-ಫೈರಿಂಗ್ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದೆ. ಬಳ್ಳಾರಿ ಗಲಾಟೆಗೆ ಪೊಲೀಸ್ ಅಧಿಕಾರಿಗಳೇ ನೇರ ಕಾರಣ ಎಂದು ಶಾಸಕ ಜನಾರ್ಧನ ರೆಡ್ಡಿ ಆರೋಪಿಸಿದ್ದಾರೆ.
ಗಲಾಟೆಗೆ ಪೊಲೀಸ್ ಅಧಿಕಾರಿಗಳೇ ಕಾರಣ ಎಂದು ಜನಾರ್ಧನ ರೆಡ್ಡಿ ಬಳ್ಳಾರಿ ಬ್ರೂಸ್ ಪೇಟೆ ಠಾಣೆಯಲ್ಲಿ ದೂರು ನೀಡಿದ್ದಾರೆ. ಬಳ್ಳಾರಿ ಎ ಎಸ್ ಪಿ ರವಿಕುಮಾರ್, ಡಿಎಸ್ ಪಿ ಚಂದ್ರಕಾಂತ್ ನಂದಾರೆಡ್ದಿ ಹಾಗೂ ಶಾಸಕ ಭರತ್ ರೆಡ್ಡಿ ವಿರುದ್ಧ ದೂರು ನೀಡಿದ್ದಾರೆ. ದೂರು ನೀಡಿದರೂ ಕೂಡ ಪೊಲೀಸರು ಎಫ್ ಐ ಆರ್ ದಾಖಲಿಸುತ್ತಿಲ್ಲ ಎಂದು ಜನಾರ್ಧನ ರೆಡ್ಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ನಾನು ದೂರು ನೀಡಿದರೆ ದೂರಿನ ಪ್ರತಿ ಹಿಂದೆ ಹಿಂಬರಹ ಕೊಡುತ್ತಿದ್ದಾರೆ. ಈಗಾಗಲೇ ನೀಡಿರುವ ದೂರಿನ ಜೊತೆ ಇದನ್ನೂ ಪರಿಗಣಿಸಲಾಗುವುದು ಎಂದು ಹಿಂಬರಹ ಕೊಟ್ಟಿದ್ದಾರೆ. ನಾನು ಕೊಟ್ಟ ದೂರು ಬೇರೆ. ಹಿಂಬರಹ ಕೊಟ್ಟಿದ್ದೇ ಬೇರೆ. ನನ್ನ ದೂರಿನ ಬಗ್ಗೆ ಅಧಿಕಾರಿಗಳ ವಿರುದ್ಧ ಪ್ರಕರಣ ದಾಖಲಿಸುತ್ತಿಲ್ಲ ಎಂದು ಕಿಡಿಕಾರಿದ್ದಾರೆ.

