HomeLatest NewsBIG NEWS: ಬಳ್ಳಾರಿ ಘರ್ಷಣೆ, ಫೈರಿಂಗ್ ಕೇಸ್: ನಾಲ್ಕು ಪ್ರತ್ಯೇಕ ಪ್ರಕರಣ ದಾಖಲು; ಐದು ಬಂದೂಕು...

BIG NEWS: ಬಳ್ಳಾರಿ ಘರ್ಷಣೆ, ಫೈರಿಂಗ್ ಕೇಸ್: ನಾಲ್ಕು ಪ್ರತ್ಯೇಕ ಪ್ರಕರಣ ದಾಖಲು; ಐದು ಬಂದೂಕು ವಶಕ್ಕೆ

ಬಳ್ಳಾರಿ: ಬಳ್ಳಾರಿಯಲ್ಲಿ ಬ್ಯಾನರ್ ಕಟ್ಟುವ ವಿಚಾರವಾಗಿ ಶಾಸಕ ಜನಾರ್ಧನ ರೆಡ್ದಿ ಅವರ ಅವ್ವಂಬಾವಿಯಲ್ಲಿರುವ ನಿವಾಸದ ಬಳಿ ನಡೆದ ಗಲಾಟೆ, ಘರ್ಷಣೆ, ಫೈರಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ಕು ಪ್ರತ್ಯೇಕ ಪ್ರಕರಣಗಳು ದಾಖಲಾಗಿವೆ.

ಈ ಬಗ್ಗೆ ಹೆಚ್ಚುವರಿ ಪೊಲೀಸ್ ಮಾಹಾನಿರ್ದೇಶಕ ಹಿತೇಂದ್ರ ಆರ್. ಮಾಹಿತಿ ನೀಡಿದ್ದಾರೆ. ಬಳ್ಳಾರಿ ಘರ್ಷಣೆಗೆ ಸಂಬಂಧಿಸಿದಂತೆ ಪ್ರತ್ಯೇಕ ದೂರು ಆಧರಿಸಿ ಮೂರು ಪ್ರಕರಣ ಹಾಗೂ ಒಂದು ಸ್ವಯಂ ಪ್ರೇರಿತ ಪ್ರಕರಣ ದಾಖಲಾಗಿದೆ. ಯುವಕ ಸಾವು, ಮಹರ್ಷಿ ವಾಲ್ಮೀಕಿಗೆ ಅಪಮಾನ, ಹಲ್ಲೆಗೆ ಸಂಬಂಧಿಸಿದಂತೆ ದೂರು ದಾಖಲಾಗಿದೆ ಎಂದು ತಿಳಿಸಿದರು.

ಬಳ್ಳಾರಿಯಲ್ಲಿ ರಾಜಕೀಯ ಮುಖಂಡರ ಖಾಸಗಿ ಅಂಗರಕ್ಷಕರ ಐದು ಬಂದೂಕುಗಳನ್ನು ವಶಕ್ಕೆ ಪಡೆಯಲಾಗಿದೆ. ಜನಾರ್ಧನ ರೆಡ್ಡಿ ಅವರ ಬಳಿ ಬಂದೂಕು ಇಲ್ಲ ಎಂದು ಸ್ಥಳೀಯ ಪೊಲೀಸರು ತಿಳಿಸಿದ್ದಾರೆ. ಆದರೂ ತಪಾಸಣೆ ನಡೆಸುವಂತೆ ಸೂಚಿಸಲಾಗಿದೆ. ನಮ್ಮ ಸ್ಥಳೀಯ ಸಿಬ್ಬಂದಿಗಳು ಯಾರೂ ಬಂದೂಕು ಪ್ರಯೋಗಿಸಿಲ್ಲ. ಮೃತ ರಾಜಶೇಖರ ಅವರ ದೇಹದಲ್ಲಿ ಸಿಕ್ಕ ಗುಂಡು ಹಾಗೂ ವಶಕ್ಕೆ ಪಡೆದಿರುವ ಬಂದೂಕುಗಳನ್ನು ಹೋಲಿಕೆ ಮಾಡಿ ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ. ಯಾರೇ ತಪ್ಪು ಮಾಡಿದರೂ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular