ಬಳ್ಳಾರಿ: ಬಳ್ಳಾರಿಯಲ್ಲಿ ಬ್ಯಾನರ್ ಅಳವಡಿಕೆ ವಿಚಾರವಾಗಿ ನಡೆದ ಗಲಾಟೆ, ಘರ್ಷಣೆಯ ವೇಳೆ ಫೈರಿಂಗ್ ನಡೆದಿದ್ದು, ಕಾಂಗ್ರೆಸ್ ಕಾರ್ಯಕರ್ತ ರಾಜಶೇಖರ್ ಎಂಬುವವರು ಮೃತಪಟ್ತಿರುವ ಘಟನೆ ನಡೆದಿದೆ. ಬಳ್ಳಾರಿಯಲ್ಲಿ ಪ್ರಕ್ಷುಬಧ ವಾತಾವರಣ ನಿರ್ಮಾಣವಾಗಿದ್ದು, ಪೊಲೀಸ್ ಕಟ್ಟೆಚ್ಚರ ವಹಿಸಲಾಗಿದೆ.
ಬಳ್ಳಾರಿಯಲ್ಲಿ ನಡೆದ ಘರ್ಷಣೆ ವಿಚಾರವಾಗಿ ಮಾಹಿತಿ ನೀಡಿರುವ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ್, ಫೈರಿಂಗ್ ವೇಳೆ ಕಾಂಗ್ರೆಸ್ ಕಾರ್ಯಕರ್ತನ ದೇಹ ಹೊಕ್ಕಿರುವುದು ಪೊಲೀಸ್ ಬುಲೆಟ್ ಅಲ್ಲ ಎಂದು ತಿಳಿಸಿದ್ದಾರೆ.
ಮೃತ ಕಾಂಗ್ರೆಸ್ ಕಾರ್ಯಕರ್ತ ರಾಜಶೇಖರ್ ದೇಹ ಹೊಕ್ಕಿರುವುದು ಪೊಲೀಸ್ ಬುಲೆಟ್ ಅಲ್ಲ. ಖಾಸಗಿ ವ್ಯಕ್ತಿಯ ರಿವಾಲ್ವರ್ ಬುಲೆಟ್ ಎಂದು ತಿಳಿಸಿದ್ದಾರೆ. ತಡರಾತ್ರಿ ನಡೆದ ಗಲಾಟೆ ವೇಳೆ ಕಾಂಗ್ರೆಸ್ ಕಾರ್ಯಕರ್ತ ರಾಜಶೇಖರ್ ಮೃತಪಟ್ಟಿದ್ದಾರೆ. ಪೊಲೀಸರು ಫೈರ್ ಮಾಡಿದಾಗ ತಗುಲಿರುವ ಬುಲೆಟ್ ನಿಂದ ಅವರು ಸಾವನ್ನಪ್ಪಿಲ್ಲ. ಅವರ ದೇಹ ಹೊಕ್ಕಿರುವುದು ಖಾಸಗಿ ರಿವಾಲ್ವರ್ ಬುಲೆಟ್ ಎಂದು ಸ್ಪಷ್ಟಪಡಿಸಿದರು.
ಖಾಸಗಿ ವ್ಯಕ್ತಿ ಫೈರ್ ಮಾಡಿರುವ ಬಗ್ಗೆ ಪರಿಶೀಲನೆ ನಡೆಸಲಾಗುತ್ತಿದೆ. ಘಟನೆಗೆ ಸಂಅಬ್ಂಧಿಸಿದಂತೆ ಶಾಸಕ ಭರತ್ ರೆಡ್ಡಿ ಬೆಂಬಲಿಗರು ಈಗಾಗಲೇ ನಾಲ್ಕು ಕೇಸ್ ದಾಖಲಿಸಿದ್ದಾರೆ. ಎಲ್ಲವನ್ನೂ ಕುಲಂಕುಷವಾಗಿ ತನಿಖೆ ನಡೆಸಲಾಗುವುದು ಎಂದರು.

