HomeLatest Newsಬಳ್ಳಾರಿ-ಗುಂತಕಲ್‌ ರೈಲು ಮಾರ್ಗಕ್ಕೆ ಕೇಂದ್ರ ಅಸ್ತು

ಬಳ್ಳಾರಿ-ಗುಂತಕಲ್‌ ರೈಲು ಮಾರ್ಗಕ್ಕೆ ಕೇಂದ್ರ ಅಸ್ತು

ನವದೆಹಲಿ: ಕರ್ನಾಟಕ ಮತ್ತು ಆಂಧ್ರಪ್ರದೇಶ ನಡುವೆ ₹‎1,264 ಕೋಟಿ ವೆಚ್ಚದಲ್ಲಿ ಬಳ್ಳಾರಿ-ಗುಂತಕಲ್‌ ರೈಲು ಮಾರ್ಗ ನಿರ್ಮಾಣಕ್ಕೆ ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ ಎಂದು ಕೇಂದ್ರ ಗ್ರಾಹಕ ವ್ಯವಹಾರ ಸಚಿವ ಪ್ರಲ್ಹಾದ ಜೋಶಿ ತಿಳಿಸಿದ್ದಾರೆ.

ಈ ಮಹತ್ವಾಕಾಂಕ್ಷಿ ಯೋಜನೆಯಿಂದ ಸುಮಾರು 99 ಗ್ರಾಮಗಳಿಗೆ ಸಂಪರ್ಕ ಕಲ್ಪಿಸಿದಂತಾಗುತ್ತಿದ್ದು, 7 ಲಕ್ಷ ಜನರಿಗೆ ಪ್ರಯೋಜನವಾಗಲಿದೆ ಎಂದಿದ್ದಾರೆ.

ಕರ್ನಾಟಕ ಮತ್ತು ಆಂಧ್ರಪ್ರದೇಶ ನಡುವೆ ಬಳ್ಳಾರಿ-ಗುಂತಕಲ್‌ ರೈಲು ಮಾರ್ಗ ನಿರ್ಮಾಣದಿಂದ ರೈಲು ಜಾಲ 46 ಕಿ.ಮೀ. ವಿಸ್ತರಣೆಯಾಗಲಿದ್ದು, ಸರಕು ಸಾಗಣೆ ಸಾಮರ್ಥ್ಯವೂ ಹೆಚ್ಚಲಿದೆ. ಇದರಿಂದ ಪ್ರಾದೇಶಿಕ ಸಂಪರ್ಕ ಮತ್ತಷ್ಟು ಬಲಗೊಳ್ಳುವ ಜತೆಗೆ ಸ್ಥಳೀಯವಾಗಿ ಆರ್ಥಿಕ ಬೆಳವಣಿಗೆಗೆ ಸಾಕಾರವಾಗಲಿದೆ ಎಂದಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

‎ಪ್ರಧಾನಿ ನರೇಂದ್ರ ಮೋದಿ ಅವರ ದೂರದೃಷ್ಟಿ ನಾಯಕತ್ವದಲ್ಲಿ ಕೇಂದ್ರ ಸರ್ಕಾರ ಕರ್ನಾಟಕದ ಪಾಲಿಗೆ ಹೆಚ್ಚು ಹೆಚ್ಚು ರೈಲ್ವೆ ಯೋಜನೆಗಳ ಕೊಡುಗೆ ನೀಡುತ್ತಲೇ ಬಂದಿದೆ. ಇದಕ್ಕಾಗಿ ಪ್ರಧಾನಿ ಅವರಿಗೆ ಮತ್ತು ರೈಲ್ವೆ ಸಚಿವ ಅಶ್ವಿನಿ ವೈಷ್ಣವ, ವಿ.ಸೋಮಣ್ಣ ಅವರಿಗೆ ಅಭಿನಂದನೆ ಸಲ್ಲಿಸುವೆ ಎಂದಿದ್ದಾರೆ ಸಚಿವ ಪ್ರಲ್ಹಾದ ಜೋಶಿ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular