HomeUncategorizedಇರಾನ್-ಇಸ್ರೇಲ್ ಯುದ್ಧದ ಎಫೆಕ್ಟ್: ಬಳ್ಳಾರಿ ಜೀನ್ಸ್ ಉದ್ಯಮಕ್ಕೆ ಭಾರಿ ಹೊಡೆತ: ಕಲರ್ ಕೆಮಿಕಲ್ ಆಮದು ಸ್ಥಗಿತ:...

ಇರಾನ್-ಇಸ್ರೇಲ್ ಯುದ್ಧದ ಎಫೆಕ್ಟ್: ಬಳ್ಳಾರಿ ಜೀನ್ಸ್ ಉದ್ಯಮಕ್ಕೆ ಭಾರಿ ಹೊಡೆತ: ಕಲರ್ ಕೆಮಿಕಲ್ ಆಮದು ಸ್ಥಗಿತ: ಉತ್ಪಾದನೆ ಕುಸಿತ

ಬಳ್ಳಾರಿ: ಇರಾನ್-ಇಸ್ರೇಲ್ ನಡುವಿನ ಯುದ್ಧದಿಂದಾಗಿ ಭಾರತದಲ್ಲಿ ಹಲವು ಕ್ಷೇತ್ರಗಳ ಮೇಲೆ ದುಷ್ಪರಿಣಾಮ ಬೀರುತ್ತಿದೆ. ಇದೀಗ ಬಳ್ಳಾರಿ ಬಳ್ಳಾರಿ ಜೀನ್ಸ್ ಉದ್ಯಮಕ್ಕೂ ಭಾರಿ ಹೊಡೆತ ಬಿದ್ದಿದೆ.

ಜೀನ್ಸ್ ಗೆ ಕೊಲ್ಲಿ ರಾಷ್ಟ್ರಗಳಿಂದ ರಾಸಾಯನಿಕ ಪೂರೈಕೆ ಸ್ಥಗಿತಗೊಂಡಿದ್ದು, ಉತ್ಪಾದನೆ ಕುಸಿದಿದೆ. ರಫ್ತು ಸ್ಥಗಿತಗೊಂಡ ಪರಿಣಾಮ ಕೋಟ್ಯಂತರ ರೂಪಾಯಿ ನಷ್ಟವಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಯುದ್ಧದಿಂದಾಗಿ ಬಳ್ಳಾರಿಯ ಹೆಮ್ಮೆಯ ಜೀನ್ಸ್ ಉದ್ಯಮ ಸಂಕಷ್ಟಕ್ಕೀಡಾಗಿದೆ. ಜೀನ್ಸ್ ಪ್ಯಾಂಟ್‌ಗಳಿಗೆ ಬಣ್ಣ ನೀಡಲು ಬಳಸುವ ರಾಸಾಯನಿಕಗಳು ಹೆಚ್ಚಾಗಿ ಗಲ್ಫ್ ರಾಷ್ಟ್ರಗಳಿಂದ ಹಡಗುಗಳ ಮೂಲಕ ಸರಬರಾಜಾಗುತ್ತಿದ್ದವು. ಆದರೆ ಯುದ್ಧದ ಹಿನ್ನೆಲೆಯಲ್ಲಿ ಹಡಗುಗಳ ಸಂಚಾರ ಸ್ಥಗಿತಗೊಂಡಿದ್ದು, ಕೆಮಿಕಲ್ ಪೂರೈಕೆ ಸಂಪೂರ್ಣ ನಿಂತುಹೋಗಿದೆ. ಜೀನ್ಸ್ ಲೇಪನಕ್ಕೆ ಮುಖ್ಯವಾಗಿ ಬೇಕಾದ ಹೈಡ್ರೋಜನ್ ಪೆರಾಕ್ಸೈಡ್, ಸೋಡಿಯಂ ಹೈಪೋಕ್ಲೋರೈಟ್ಸ್ ಹಾಗೂ ಪೊಟ್ಯಾಸಿಯಮ್ ಪರ್ಮಾಂಗನೇಟ್ ರಾಸಾಯನಿಕಗಳ ಕೊರತೆ ಉಂಟಾಗಿದೆ.

ಇದರಿಂದಾಗಿ ಜೀನ್ಸ್ ಉತ್ಪಾದನೆ ಕುಸಿತವಾಗಿದ್ದು, ರಫ್ತು ನಿಂತುಹೋಗಿದೆ. ಕಾರ್ಮಿಕರು ಕೂಡ ಸಂಕಷ್ಟಕ್ಕೆ ಸಿಲುಕಿದ್ದಾರೆ. ಹಿಂದೆ ಕೆಜಿಗೆ ಕೇವಲ 40 ರೂಪಾಯಿಗೆ ಸಿಗುತ್ತಿದ್ದ ಕೆಮಿಕಲ್ ದರ ಈಗ 150 ರೂಪಾಯಿ ಗಡಿ ದಾಟಿದೆ. ಸ್ಥಳೀಯವಾಗಿ ಸ್ಟಾಕ್ ಇರುವ ಕೆಮಿಕಲ್‌ಗಳನ್ನು ಮಾರಾಟಗಾರರು ದುಪ್ಪಟ್ಟು ಬೆಲೆಗೆ ಮಾರಾಟ ಮಾಡುತ್ತಿರುವುದು ಉದ್ಯಮಿಗಳನ್ನು ಸಂಕಷ್ಟಕ್ಕೆ ದೂಡಿದೆ.

ಯುಗಾದಿ ಮತ್ತು ರಂಜಾನ್ ಹಬ್ಬದ ಸಂದರ್ಭದಲ್ಲಿ ಬಳ್ಳಾರಿ ಜೀನ್ಸ್ ಬಟ್ಟೆಗಳಿಗೆ ವಿದೇಶಗಳಲ್ಲಿ ಭಾರಿ ಬೇಡಿಕೆ ಇರುತ್ತದೆ. ಈ ಬಾರಿ ಸುಮಾರು 20 ಲಕ್ಷ ಜೀನ್ಸ್ ಪ್ಯಾಂಟ್‌ಗಳು ದುಬೈ ಸೇರಿದಂತೆ ಕೊಲ್ಲಿ ರಾಷ್ಟ್ರಗಳಿಗೆ ರಫ್ತಾಗಬೇಕಿತ್ತು. ಆದರೆ ಬಣ್ಣದ ಕೊರತೆಯಿಂದಾಗಿ ಉತ್ಪಾದನೆಯು ಶೇ 50ರಷ್ಟು ಕುಸಿತ ಕಂಡಿದೆ. ಇದರಿಂದಾಗಿ ಕೋಟ್ಯಂತರ ರೂಪಾಯಿ ನಷ್ಟವಾಗಿದೆ.

ಬಳ್ಳಾರಿಯ ಜೀನ್ಸ್ ಉದ್ಯಮವು ಈಗಾಗಲೇ ಕಾರ್ಮಿಕರ ಕೊರತೆಯಿಂದ ಹೈರಾಣಾಗಿತ್ತು. ಈಗ ಇರಾನ್-ಇಸ್ರೇಲ್ ಯುದ್ಧದಿಂದಾಗಿ ಕಚ್ಚಾ ವಸ್ತುಗಳ ಬೆಲೆ ಗಗನಕ್ಕೇರಿರುವುದು ಇನ್ನಷ್ಟು ಹೈರಾಣಾಗುವಂತೆ ಮಾಡಿದೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular