HomeKarnatakaಮದ್ಯ ಪ್ರಿಯರೇ ಗಮನಿಸಿ: ಹೋಳಿ ಹಿನ್ನೆಲೆ ಮದ್ಯ ಮಾರಾಟ ನಿಷೇಧ

ಮದ್ಯ ಪ್ರಿಯರೇ ಗಮನಿಸಿ: ಹೋಳಿ ಹಿನ್ನೆಲೆ ಮದ್ಯ ಮಾರಾಟ ನಿಷೇಧ

ಬಳ್ಳಾರಿ: ಜಿಲ್ಲೆಯಲ್ಲಿ ಮಾರ್ಚ್ 14 ರಂದು ಹೋಳಿ ಹಬ್ಬ ಮತ್ತು ಕುರುಗೋಡು ಶ್ರೀ ದೊಡ್ಡ ಬಸವೇಶ್ವರ ರಥೋತ್ಸವ ಹಾಗೂ ಜಾತ್ರೆ ನಿಮಿತ್ತ ಮಾ.14 ರಂದು ಬೆಳಿಗ್ಗೆ 6 ಗಂಟೆಯಿಂದ ಮಾ.15 ರಂದು ಬೆಳಿಗ್ಗೆ 6 ಗಂಟೆಯವರೆಗೆ ಬಳ್ಳಾರಿ ಜಿಲ್ಲೆಯಾದ್ಯಂತ ಮದ್ಯ ಮಾರಾಟ, ಮದ್ಯ ಸಾಗಾಣಿಕೆ ಮತ್ತು ಮದ್ಯ ಅಂಗಡಿ, ಬಾರ್, ರೆಸ್ಟೋರೆಂಟ್‌ಗಳನ್ನು ತೆರೆಯದಂತೆ ಸಂಪೂರ್ಣವಾಗಿ ನಿಷೇಧಿಸಿ ಜಿಲ್ಲಾ ದಂಡಾಧಿಕಾರಿ ಆದ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ಆದೇಶಿಸಿದ್ದಾರೆ.

ಕರ್ನಾಟಕ ಅಬಕಾರಿ ಕಾಯ್ದೆ 1965ರ ಕಲಂ 21 ರನ್ವಯ ಪ್ರದತ್ತವಾದ ಅಧಿಕಾರ ಚಲಾಯಿಸಿ ಆದೇಶ ಹೊರಡಿಸಿದ ಅವರು, ಈ ಆದೇಶವು ಡಿಸ್ಟಲರೀಸ್ ರಾಜ್ಯದ ವಿವಿಧ ಕೆಎಸ್‌ಪಿಬಿಸಿಎಲ್ ಡಿಪೊಗಳಿಗೆ ದಾಸ್ತಾನು ವಿಲೇವಾರಿ ಮಾಡಲು ಅನ್ವಯಿಸುವುದಿಲ್ಲ ಎಂದು ಆದೇಶದಲ್ಲಿ ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular