HomeKarnatakaBIG NEWS: ಪಡಿತರ ಅಕ್ಕಿ ಸಾಗಾಣೆದಾರರಿಂದ 3 ಲಕ್ಷ ವಸೂಲಿ; ಬಳ್ಳಾರಿ ಎಸ್ ಪಿ ಸುಮನ್...

BIG NEWS: ಪಡಿತರ ಅಕ್ಕಿ ಸಾಗಾಣೆದಾರರಿಂದ 3 ಲಕ್ಷ ವಸೂಲಿ; ಬಳ್ಳಾರಿ ಎಸ್ ಪಿ ಸುಮನ್ ಪೆನ್ನೇಕರ್ ಗನ್ ಮ್ಯಾನ್ ಅರೆಸ್ಟ್

ಬಳ್ಳಾರಿ: ಅಕ್ರಮ ಪಡಿತರ ಅಕ್ಕಿ ಸಾಗಾಣೆದಾರರಿಂದ 3 ಲಕ್ಷ ರೂಪಾಯಿ ವಸೂಲಿ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಳ್ಳಾರಿ ಎಸ್ಪಿ ಸುಮನ್ ಡಿ. ಪನ್ನೇಕರ್ ಅವರ ಗನ್ ಮ್ಯಾನ್ ನನ್ನು ಬಂಧಿಸಲಾಗಿದೆ.

ಗನ್ ಮ್ಯಾನ್ ದೇವರಾಜ್ ಹಾಗೂ ಆತನ ಸಹಚರ ಇಬ್ಬರನ್ನು ಮೋಕಾ ಠಾಣೆ ಪೊಲಿಸರು ಬಂಧಿಸಿದ್ದಾರೆ. ಅಕ್ರಮ ಪಡಿತರ ಅಕ್ಕಿ ಸಾಗಾಣೆ ಮಾಡುತ್ತಿದ್ದ ಶರಭಯ್ಯ ಎಂಬುವವರಿಂದ ಹಣ ವಸೂಲಿ ಮಾಡಿದ ಆರೋಪದಡಿ ಇಬ್ಬರನೂ ಬಂಧಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಆಂಧ್ರಪ್ರದೇಶದತ್ತ ಪಡಿತರ ಅಕ್ಕಿ ತುಂಬಿಕೊಂಡು ತೆರಳುತ್ತಿದ್ದ ಎರಡು ಲಾರಿಗಳನ್ನು ಅಡ್ಡಗಟ್ಟಿದ್ದ ಆರೋಪಿಗಳು, ತಾವು ಎಸ್ಪಿ ಸ್ಕ್ವಾಡ್ ಅಧಿಕಾರಿಗಳು ಎಂದು ಹೇಳಿ 5 ಲಕ್ಷ ರೂ. ಹಣಕ್ಕೆ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ. ಬಳಿಕ 3 ಲಕ್ಷ ರೂ. ವಸೂಲಿ ಮಾಡಿದ್ದಾಗಿ ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಹಣ ನೀಡದಿದ್ದರೆ ಲಾರಿಗಳನ್ನು ಸೀಜ್ ಮಾಡಿ ಜೈಲಿಗೆ ಕಳುಹಿಸುವುದಾಗಿ ಜೀವ ಬೆದರಿಕೆ ಹಾಕಿದ್ದಾರೆಯೆಂದು ಶರಭಯ್ಯ ಮೋಕಾ ಪೊಲೀಸ್ ಠಾಣೆಗೆ ದೂರು ನೀಡಿದ್ದರು.

ದೂರಿನ ಆಧಾರದ ಮೇಲೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದಾಗ, ಗನ್ ಮ್ಯಾನ್ ದೇವರಾಜ್ ಎಸ್ಪಿ ಸ್ಕ್ವಾಡ್ ಹೆಸರಿನಲ್ಲಿ ಹಣ ವಸೂಲಿ ಮಾಡಿರುವುದು ಖಚಿತವಾಗಿದೆ. ಈ ಹಿನ್ನೆಲೆ ಎಸ್ಪಿ ಸುಮನ್ ಡಿ. ಪನ್ನೇಕರ್ ಅವರೇ ಕ್ರಮ ಕೈಗೊಂಡು ದೇವರಾಜ್ ಬಂಧನಕ್ಕೆ ಸೂಚನೆ ನೀಡಿದ್ದಾರೆ. ಸದ್ಯ ಮೋಕಾ ಪೊಲೀಸ್ ಠಾಣೆಯಲ್ಲಿ ಆರೋಪಿಗಳ ವಿಚಾರಣೆ ನಡೆಯುತ್ತಿದೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular