HomeKarnatakaರೈಲ್ವೆ ಇಲಾಖೆಗೆ ಬಳ್ಳಾರಿ, ವಿಜಯನಗರ ಮತ್ತು ಕೊಪ್ಪಳ ಜಿಲ್ಲಾ ಜನರ ಬೇಡಿಕೆಗಳು

ರೈಲ್ವೆ ಇಲಾಖೆಗೆ ಬಳ್ಳಾರಿ, ವಿಜಯನಗರ ಮತ್ತು ಕೊಪ್ಪಳ ಜಿಲ್ಲಾ ಜನರ ಬೇಡಿಕೆಗಳು

ವಿಜಯನಗರ ರೈಲ್ವೆ ಬಳಕೆದಾರರ ಸಂಘ ಹೊಸಪೇಟೆ (ರಿ) ವಿ.ಸೋಮಣ್ಣ ಕೇಂದ್ರ ರೈಲ್ವೇ ಖಾತೆ ಹಾಗೂ ಜಲಶಕ್ತಿ ಖಾತೆ ರಾಜ್ಯ ಸಚಿವರಿಗೆ ಪತ್ರವೊಂದನ್ನು ಬರೆದಿದೆ. ಬಳ್ಳಾರಿ, ವಿಜಯನಗರ ಮತ್ತು ಕೊಪ್ಪಳ ಜಿಲ್ಲೆಗಳ ರೈಲು ಯೋಜನೆಗಳ ಕುರಿತು ಬೇಡಿಕೆಯನ್ನು ಇಟ್ಟಿದೆ.

ಈ ಪತ್ರ ವಿಜಯನಗರ, ಬಳ್ಳಾರಿ, ಕೊಪ್ಪಳ ಜಿಲ್ಲೆಗಳ ರೈಲ್ವೇ ಪ್ರಯಾಣಿಕರ ಬೇಡಿಕೆಗಳ ಬಗ್ಗೆ ಎಂಬ ವಿಷಯವನ್ನು ಒಳಗೊಂಡಿದೆ. ನೈರುತ್ಯ ರೈಲ್ವೇ ವಲಯಕ್ಕೆ ಹೆಚ್ಚು ಆದಾಯ ನೀಡುತ್ತಿರುವ ಮೂರು ಜಿಲ್ಲೆಗಳ ಜನರಿಗೆ ಅಗತ್ಯವಾಗಿರುವ ರೈಲ್ವೇ ಸೌಲಭ್ಯಗಳ ಬೇಡಿಕೆಗಳನ್ನು ಈಡೇರಿಸಬೇಕೆಂದು ತಮ್ಮಲ್ಲಿ ವಿನಂತಿಸಿಕೊಳ್ಳುತ್ತೇವೆ ಎಂದು ಪತ್ರದಲ್ಲಿ ತಿಳಿಸಿದ್ದಾರೆ.

ಬೇಡಿಕೆಗಳು

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

* (ವಿಜಯಪುರ-ಗದಗ) ಹೊಸಪೇಟೆ-ಬಳ್ಳಾರಿ-ಬೆಂಗಳೂರು ವಂದೇ ಭಾರತ್ ರೈಲು ಆರಂಭಿಸುವ ಬಗ್ಗೆ. ಉತ್ತರ ಕರ್ನಾಟಕದ ಪ್ರಮುಖ ಪ್ರವಾಸಿತಾಣಗಳ ಜಿಲ್ಲೆಗಳಾದ ವಿಜಯಪುರ, ಬಾಗಲಕೋಟೆ, ಗದಗ, ಹೊಸಪೇಟೆ ಮತ್ತು ಬಳ್ಳಾರಿ ಮಾರ್ಗವಾಗಿ ವಂದೇ ಭಾರತ್ ರೈಲು ಆರಂಭಿಸಿದರೆ ಈ ಜಿಲ್ಲೆಗಳ ಜನರು ತ್ವರಿತವಾಗಿ ಬೆಂಗಳೂರಿಗೆ ಹೋಗಿ ಬರಲು ಅನುಕೂಲವಾಗುತ್ತದೆ. ಜೊತೆಗೆ ರಾಜ್ಯದ ಪ್ರವಾಸಿ ತಾಣಗಳ ನಡುವೆ ನೇರ ಸಂಪರ್ಕ ಉಂಟಾಗಿ ಪ್ರವಾಸೋದ್ಯಮ ಮತ್ತು ಆರ್ಥಿಕ ಬೆಳವಣಿಗೆಗೆ ಅನುಕೂಲವಾಗುತ್ತದೆ.

* ಬೆಳಗಾವಿ-ಹೊಸಪೇಟೆ-ರಾಯಚೂರು (ಮಂತ್ರಾಲಯ) ನೂತನ ರೈಲು ಆರಂಭಿಸುವ ಬಗ್ಗೆ. ಕಳೆದ 6-ವರ್ಷಗಳಿಂದ ಸಂಚರಿಸುತ್ತಿದ್ದ, ಬೆಳಗಾವಿ-ಹೈದರಾಬಾದ್-ಮಣಗೂರು ಗಾಡಿ ಸಂಖ್ಯೆ:17335-17336 ರದ್ದಾಗಿರುವುದರಿಂದ ಧಾರ್ಮಿಕ ಕೇಂದ್ರ ಮಂತ್ರಾಲಯಕ್ಕೆ ನೇರ ಸಂಪರ್ಕ ಇಲ್ಲದಂತಾಗಿದೆ. ಆದುದರಿಂದ ಉತ್ತರ ಕರ್ನಾಟಕ ಜಿಲ್ಲೆಗಳಾದ ಬೆಳಗಾವಿ-ಹುಬ್ಬಳ್ಳಿ-ಧಾರವಾಡ-ಗದಗ-ಕೊಪ್ಪಳ-ವಿಜಯನಗರ ಮತ್ತು ಬಳ್ಳಾರಿ ಜಿಲ್ಲೆಗಳಿಂದ ಮಂತ್ರಾಲಯ ಮತ್ತು ರಾಯಚೂರು ಕಡೆಗೆ ಹೋಗುವ ಪ್ರಯಾಣಿಕರ ಅನುಕೂಲಕ್ಕಾಗಿ ಬೆಳಗಾವಿ ಅಥವಾ ಹುಬ್ಬಳ್ಳಿಯಿಂದ ರಾಯಚೂರಿಗೆ ನೂತನ ರೈಲು ಆರಂಭಿಸುವ ಅಗತ್ಯವಿದೆ.

* ಎಲ್.ಸಿ.ಗೇಟ್ ಸಂಖ್ಯೆ 4ರಲ್ಲಿ ಅಂಡರ್‌ ಪಾಸ್ ನಿರ್ಮಾಣದ ಬಗ್ಗೆ. ಹೊಸಪೇಟೆ ನಗರ ಮತ್ತು ಚಿತ್ತವಾಡಿ ನಡುವೆ ಹಾದು ಹೋಗುತ್ತಿರುವ ರೈಲ್ವೇ ಮಾರ್ಗಕ್ಕೆ ಎಲ್.ಸಿ-ಗೇಟ್ ನಂ : 4ರಲ್ಲಿ ಅಂಡರ್ ಪಾಸ್ ನಿರ್ಮಿಸುವ ಅಗತ್ಯವಿದೆ.

* ಎಲ್.ಸಿ.ಗೇಟ್-10ರಲ್ಲಿ ಮೇಲ್ ಸೇತುವೆ ನಿರ್ಮಿಸುವ ಬಗ್ಗೆ. ರಾಷ್ಟ್ರೀಯ ಹೆದ್ದಾರಿಗೆ ಸಂಪರ್ಕ ಕಲ್ಪಿಸುವ ವಿಜಯನಗರ ಜಿಲ್ಲಾಧಿಕಾರಿಗಳ ಕಛೇರಿ ಪಕ್ಕದಲ್ಲಿ ಹಾದು ಹೋಗುತ್ತಿರುವ ರೈಲ್ವೇ ಮಾರ್ಗದ ಎಲ್.ಸಿ.ಗೇಟ್ ನಂ.10ಕ್ಕೆ ಮೇಲು ಸೇತುವೆ ನಿರ್ಮಿಸುವ ಅಗತ್ಯವಿದೆ. ಇದರಿಂದ ಉತ್ತರ ಕರ್ನಾಟಕ ಜಿಲ್ಲೆಗಳಿಂದ ಮಾರ್ಗವಾಗಿ ಆಗಮಿಸುವ ಪ್ರಯಾಣಿಕರು ಬಸ್ ವಿಳಂಬವಿಲ್ಲದೇ ಸಂಚರಿಸಲು ಅನುಕೂಲವಾಗುತ್ತದೆ.

* ಪಾಪಿನಾಯಕನಹಳ್ಳಿ ರೈಲ್ವೇ ನಿಲ್ದಾಣ ಅಭಿವೃದ್ಧಿ. ಹೊಸಪೇಟೆ ತಾಲೂಕಿನ ಪಾಪಿನಾಯಕನಹಳ್ಳಿ ರೈಲು ನಿಲ್ದಾಣವು ವಿಶ್ವಪಾರಂಪರಿಕ ತಾಣವಾದ ಹಂಪಿ, ಜಿಂದಾಲ್ ವಿಮಾನ ನಿಲ್ದಾಣ ಮತ್ತು ದರೋಜಿ ಕರಡಿ ಧಾಮಕ್ಕೆ ಸನಿಹದಲ್ಲಿದೆ. ಆದುದ್ದರಿಂದ ಈ ನಿಲ್ದಾಣವನ್ನು ಅಭಿವೃದ್ಧಿಗೊಳಿಸಿ ರೈಲುಗಳ ನಿಲುಗಡೆಗೆ ಅವಕಾಶ ಕಲ್ಪಿಸಿದರೆ ಒಣಭೂಮಿ ಮತ್ತು ಬಯಲು ಪ್ರದೇಶವಾದ ಪ್ರವಾಸೋದ್ಯಮ ಹಾಗೂ ಆರ್ಥಿಕ ಬೆಳವಣಿಗೆಗೆ ಅನುಕೂಲವಾಗುತ್ತದೆ.

* ಹೊಸಪೇಟೆ ರೈಲು ನಿಲ್ದಾಣದಲ್ಲಿ ಪಿಟ್ ಲೈನ್ ಮತ್ತು 3 ಹೊಸ ಪ್ಲಾಟ್ ಫಾರಂಗಳ ನಿರ್ಮಿಸುವ ಬಗ್ಗೆ. ಬೌಗೋಳಿಕವಾಗಿ ರಾಜ್ಯದ ಕೇಂದ್ರ ಸ್ಥಳದಲ್ಲಿರುವ ಕಲ್ಯಾಣ ಕರ್ನಾಟಕದ ಹೆಬ್ಬಾಗಿಲು ಆಗಿರುವ ಹೊಸಪೇಟೆ ನಗರ ಬೆಳವಣಿಗೆಯನ್ನು ಗಮನದಲ್ಲಿಟ್ಟುಕೊಂಡು ಇಲ್ಲಿನ ರೈಲು ನಿಲ್ದಾಣವನ್ನು ನಿಲ್ದಾಣವನ್ನು ಮೇಲ್ದರ್ಜೆಗೇರಿಸುವ ಅಗತ್ಯವಿದೆ. ದೇಶವಿದೇಶಗಳಿಂದ ರೈಲುಮಾರ್ಗದ ಆಗಮಿಸುತ್ತಿರುವ ಪ್ರವಾಸಿಗರಿಗೆ ಅನುಕೂಲ ಕಲ್ಪಿಸಲು ಪ್ರಯಾಣಿಕರ ರೈಲುಗಾಡಿಗಳ ವಿಳಂಬ ರಹಿತ ಸಂಚಾರಕ್ಕೆ ಅನುಕೂಲವಾಗುವಂತೆ ರೈಲು ನಿಲ್ದಾಣದಲ್ಲಿ 3 ಹೊಸ ಪ್ಲಾಟ್ ಫಾರಂಗಳನ್ನು ನಿರ್ಮಿಸಬೇಕು ಹಾಗೂ ರೈಲುಗಳನ್ನು ನಿರ್ವಹಣೆ ಮಾಡಲು ಪಿಟ್‌ಲೈನ್ ನಿರ್ಮಿಸುವ ಅಗತ್ಯವಿದೆ.

* ಗಾಡಿ ಸಂಖ್ಯೆ : 16547/16548 ಯಶವಂತಪುರ-ಬಿಜಾಪುರ-ಯಶವಂತಪುರ ಎಕ್ಸ್‌ಪ್ರೆಸ್ ರೈಲನ್ನು ಟಿ.ಬಿ.ಡ್ಯಾಂ ಮತ್ತು ಮುನಿರಾಬಾದ್ (ಹುಲಿಗಿ) ನಿಲ್ದಾಣದಲ್ಲಿ ರೈಲು ನಿಲುಗಡೆಗೊಳಿಸಬೇಕು.

* ಪ್ರವಾಸಿ ವಸತಿ ಸಂಕೀರ್ಣ ನಿರ್ಮಾಣದ ಬಗ್ಗೆ. ಮಧ್ಯಮ ವರ್ಗದ ಪ್ರವಾಸಿಗರ ಅನುಕೂಲಕ್ಕಾಗಿ ಹೊಸಪೇಟೆ ರೈಲ್ವೇ ನಿಲ್ದಾಣಕ್ಕೆ ಹೊಂದಿಕೊಂಡಂತೆ ಪ್ರವಾಸಿವಸತಿ ಸಂಕೀರ್ಣ ನಿರ್ಮಿಸಬೇಕು ಎಂದು ಬೇಡಿಕೆ ಇಡಲಾಗಿದೆ.

For Latest News Updates, Join Our Whatsapp Community🚩
Abinandan
Abinandan
ನಿವೇದಿತಾ ಬಿ.ಎ.. ಬಿ.ಎಡ್ ಪದವೀಧರರು. ಡಿಜಿಟಲ್ ಪತ್ರಿಕೋದ್ಯಮದಲ್ಲಿ ಕಳೆದ 4 ವರ್ಷಗಳಿಂದ ಸಕ್ರಿಯರಾಗಿದ್ದಾರೆ. Revenufacts ವೆಬ್‌ಸೈಟ್‌ನಲ್ಲಿ 3 ವರ್ಷ ಹಾಗೂ ಕರುನಾಡು ಸುದ್ದಿ ಮಾಧ್ಯಮದಲ್ಲಿ 1 ವರ್ಷ ಕಾರ್ಯನಿರ್ವಹಿಸಿದ ಅನುಭವ ಹೊಂದಿದ್ದಾರೆ. ಆರೋಗ್ಯ, ವಾಣಿಜ್ಯ, ಲೈಫ್‌ಸ್ಟೈಲ್ ವಿಭಾಗದಲ್ಲಿ ವಿಶೇಷ ಪರಿಣತಿ ಹೊಂದಿದ್ದಾರೆ. Nivedita is a skilled digital content creator with a strong academic background in B.A. and B.Ed. 4 years of experience in digital journalism.
RELATED ARTICLES

Most Popular