HomeKarnatakaಮೂರೂವರೆ ಲಕ್ಷ ರೂ.ಲಂಚ ಪಡೆಯುತ್ತಿದ್ದಾಗ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದ ಬೂಡಾ ಸರ್ವೇಯರ್

ಮೂರೂವರೆ ಲಕ್ಷ ರೂ.ಲಂಚ ಪಡೆಯುತ್ತಿದ್ದಾಗ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದ ಬೂಡಾ ಸರ್ವೇಯರ್

ಬಳ್ಳಾರಿ : 3.50 ಲಕ್ಷ ಲಂಚ ಪಡೆಯುತ್ತಿದ್ದ ವೇಳೆ ಬಳ್ಳಾರಿ ನಗರಾಭಿವೃದ್ಧಿ ಪ್ರಾಧಿಕಾರದ (ಬೂಡಾ) ಸರ್ವೇಯರ್ ಲೊಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್ದಿರುವ ಘಟನೆ ನಡೆದಿದೆ

ಶಾಂತಮೂರ್ತಿ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್ದಿರುವ ಬೂಡಾ ಸರ್ವೇಯರ್. ಲೇಔಟ್ ಪ್ಲಾನ್ ಡೆವಲಪ್‌ಮೆಂಟ್‌ಗೆ ಅನುಮೋದನೆ ನೀಡಲು ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಈ ಬಗ್ಗೆ ಲೋಕಾಯುಕ್ತದಲ್ಲಿ ದೂರು ದಾಖಲಾಗಿತ್ತು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಈರೇಶ್ ಎಂಬುವರಿಂದ ಸಲ್ಲಿಕೆಯಾಗಿದ್ದ ದೂರಿನ ಮೇರೆಗೆ ಲೋಕಾಯುಕ್ತ ಪೊಲೀಸರು ಕಾರ್ಯಾಚರಣೆ ನಡೆಸಿದ್ದರು. ಶಾಂತಮೂರ್ತಿ ಪರವಾಗಿ ಮೊಹಮ್ಮದ್ ಸಾಜೀದ್ ಎಂಬ ವ್ಯಕ್ತಿ ಈರೇಶ್ ಅವರಿಂದ 3.50 ಲಕ್ಷ ರೂಪಾಯಿ ಹಣ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಇಬ್ಬರನ್ನೂ ರೆಡ್‌ಹ್ಯಾಂಡ್ ಆಗಿ ಬಂಧಿಸಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ವಶಕ್ಕೆ ಪಡೆದಿರುವ ಲೋಕಾಯುಕ್ತ ಪೊಲೀಸರು ಹೆಚ್ಚಿನ ತನಿಖೆ ಮುಂದುವರೆಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular