HomeLatest NewsBREAKING: ಬಳ್ಳಾರಿ ಘರ್ಷಣೆಯಲ್ಲಿ ಓರ್ವ ಸಾವು ಪ್ರಕರಣ: ಜಿಲ್ಲೆಯಾದ್ಯಂತ ಹೈ ಅಲರ್ಟ್, ಪೊಲೀಸರ ಬಿಗಿ ಬಂದೋಬಸ್ತ್

BREAKING: ಬಳ್ಳಾರಿ ಘರ್ಷಣೆಯಲ್ಲಿ ಓರ್ವ ಸಾವು ಪ್ರಕರಣ: ಜಿಲ್ಲೆಯಾದ್ಯಂತ ಹೈ ಅಲರ್ಟ್, ಪೊಲೀಸರ ಬಿಗಿ ಬಂದೋಬಸ್ತ್

ಬಳ್ಳಾರಿ: ಬಳ್ಳಾರಿಯಲ್ಲಿ ವಾಲ್ಮೀಕಿ ಪುತ್ಥಳಿ ಅನಾವರಣ ಹಿನ್ನೆಲೆಯಲ್ಲಿ ಶಾಸಕ ಜನಾರ್ಧನ ರೆಡ್ಡಿ ನಿವಾಸದ ಬಳಿ ಬ್ಯಾನರ್ ಕಟ್ಟುವ ವಿಚಾರವಾಗಿ ಎರಡು ಗುಂಪುಗಳ ನಡುವೆ ಆರಂಭವಾದ ಗಲಾಟೆ ವಿಕೋಪಕ್ಕೆ ತಿರುಗಿ ಘರ್ಷಣೆ, ಫೈರಿಂಗ್ ವೇಳೆ ಕಾಂಗ್ರೆಸ್ ಕಾರ್ಯಕರ್ತರೊಬ್ಬರು ಮೃತಪಟ್ಟಿದ್ದು, ಪರಿಸ್ಥಿತಿ ಉದ್ವಿಗ್ನಗೊಂಡಿದೆ.

ಘಟನೆ ಬೆನ್ನಲ್ಲೇ ಸಂಪೂರ್ಣ ಮಾಹಿತಿ ಪಡೆದ ಮುಖ್ಯಮಂತ್ರಿ ಸಿದ್ದರಾಮಯ್ಯ, ಬಳ್ಳಾರಿಯಲ್ಲಿ ಕಾನೂನು ಸುವವಸ್ಥೆ ಕಾಪಾಡುವಂತೆ ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದರು. ಇದರ ಬೆನ್ನಲ್ಲೇ ಜಿಲ್ಲೆಯಾದ್ಯಂತ ಕಟ್ಟೆಚ್ಚರ ವಹಿಸಲಾಗಿದ್ದು, ಬಳ್ಳಾರಿ ನಗರದಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬಳ್ಳಾರಿಯಲ್ಲಿ ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾಗಿರುವ ಹಿನ್ನೆಲೆಯಲ್ಲಿ ಕಟ್ಟೆಚ್ಚರಕ್ಕಾಗಿ ವಿಜಯನಗರ, ಚಿತ್ರದುರ್ಗ, ಕೊಪ್ಪಳ ಎಸ್ ಪಿಗಳನ್ನು, ಪೊಲೀಸ್ ಸಿಬ್ಬಂದಿಗಳನ್ನು ಬಳ್ಳಾರಿಗೆ ಕರೆಸಿಕೊಳ್ಳಲಾಗಿದೆ. ಹೀಗಾಗಿ ಬಳ್ಳಾರಿ ನಗರದಾದ್ಯಂತ ಪೊಲೀಸ್ ಸರ್ಪಗಾವಲು ಹಾಕಲಾಗಿದೆ.

ಘಟನೆ ಬಗ್ಗೆ ವಿವರಣೆ ನೀಡಲು ಶಾಸಕ ನಾರಾ ಭರತ್ ರೆಡ್ಡಿ ಹಾಗೂ ಶಾಸಕ ಜನಾರ್ಧನ ರೆಡ್ಡಿ, ಶ್ರೀರಾಮುಲು ಸುದ್ದಿಗೋಷ್ಠಿ ಕರೆದಿದ್ದಾರೆ. ಜಿಲ್ಲೆಯಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದ್ದು, ಎಲ್ಲೆಡೆ ನಿಗಾ ವಹಿಸಲಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular