ಬಳ್ಳಾರಿ: ಹೋಟೆಲ್ ನಲ್ಲಿ ಎರಡು ಸಿಲಿಂಡರ್ ಗಳು ಬಾಕನೋರ್ವ ಗಂಭೀರವಾಗಿ ಗಾಯಗೊಂಡಿರುವ ಘಟನೆ ಬಳ್ಳಾರಿ ಜಿಲ್ಲೆಯ ಸಿರಗುಪ್ಪ ತಾಲೂಕಿನ ತೆಕ್ಕಲಕೋಟೆಯಲ್ಲಿ ನಡೆದಿದೆ.
ಈರಣ್ಣ ಎಂಬುವವರಿಗೆ ಸೇರಿದ ಹೋಟೆಲ್ ನಲ್ಲಿ ತಡರಾತ್ರಿ ಈ ಘಟನೆ ನಡೆದಿದೆ. ಏಕಾಏಕಿ ಸಿಲಿಂಡರ್ ಸ್ಫೋಟಗೊಂಡು ಹೋಟೆಲ್ ಹೊತ್ತಿ ಉರಿದಿದೆ. ಹೋಟೆಲ್ ನಲ್ಲಿ ಮಲಗಿದ್ದ ೯ ಜನರ ಪೈಕೊ ಓರ್ವ ಬಾಲಕ ಗಂಭೀರವಾಗಿ ಗಾಯಗೊಂಡಿದ್ದಾನೆ.
ಗಾಯಾಳು ಬಾಲಕನನ್ನು ಶ್ರೀನಿವಾಸ್ (10) ಎಂದು ಗುರುತಿಸಲಾಗಿದೆ. ಬಾಲಕನನ್ನು ಚಿಕಿತ್ಸೆಗಾಗಿ ಬಳ್ಳಾರಿ ವಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಬೆಂಕಿಯ ಕೆನ್ನಾಲಿಗೆಗೆ ಹೋಟೆಲ್ ನಲ್ಲಿದ್ದ ವಸ್ತುಗಳೆಲ್ಲ ಸುಟ್ಟು ಕರಕಲಾಗಿದೆ.
ಘಟನೆ ಸಂಅಬ್ಂಧ ತೆಕ್ಕಲಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು, ಅಗ್ನಿಶಾಮಕ ಸಿಬ್ಬಂದಿ ದೌಡಾಯಿಸಿ ಬೆಂಕಿ ನಂದಿಸಿದ್ದಾರೆ.

