ಬಳ್ಳಾರಿ: ಪ್ರೀತಿಸಿ ಮದುವೆಯಾಗಿದ್ದ ನವವಿವಾಹಿತನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬಳ್ಳಾರಿ ನಗರದ ಬಟ್ಟಿ ಏರಿಯಾದಲ್ಲಿ ನಡೆದಿದೆ.
ನಬಿ ರಸೂಲ್ ಕೊಲೆಯಾಗಿರುವ ನವವಿವಾಹಿತ. ವಿಚ್ಛೇದನ ಪಡೆದ ಮಹಿಳೆಯನ್ನು ಪ್ರೀತಿಸಿ ವಿವಾಹವಾಗಿದ್ದ. ನಿನ್ನೆ ರಿಸೆಪ್ಷನ್ ಆಯೋಜಿಸಲಾಗಿತ್ತು. ಯಾರೋ ಕರೆದಿದ್ದಾರೆ ಎಂದು ಹೇಳಿ ರಾತ್ರಿ 11 ಗಂಟೆಗೆ ಮನೆಯಿಂದ ಹೊರ ಹೋದವನು ವಾಪಸ್ ಆಗಿಲ್ಲ.
ಮನೆಯಿಂದ ಹೊರ ಹೋದವನು ಈಗ ಶವವಾಗಿ ಪತ್ತೆಯಾಗಿದ್ದಾನೆ. ಘಟನಾ ಸ್ಥಳಕ್ಕೆ ಸುಮನ್ ಡಿ.ಪನ್ನೇಕರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ವಿಛ್ಛೇದಿನ ಮಹಿಳೆಯನ್ನು ವಿವಾಹವಾಗಿದ್ದಕ್ಕೆ ಕೊಲೆಯಾಗಿರುವ ಶಂಕೆ ವ್ಯಕ್ತವಾಗಿದೆ. ಕೌಲ್ ಬಜಾರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.

