HomeKarnatakaBIG NEWS: ಹಾಸ್ಟೆಲ್ ವಿದ್ಯಾರ್ಥಿಯನ್ನು ಕೊಲೆಗೈದು ಪರಾರಿಯಾಗಿದ್ದ ಬಾಲಕ ವಶಕ್ಕೆ

BIG NEWS: ಹಾಸ್ಟೆಲ್ ವಿದ್ಯಾರ್ಥಿಯನ್ನು ಕೊಲೆಗೈದು ಪರಾರಿಯಾಗಿದ್ದ ಬಾಲಕ ವಶಕ್ಕೆ

ಬಳ್ಳಾರಿ: ಬಳ್ಳಾರಿ ಹಾಸ್ಟೇಲ್ ನಲ್ಲಿ ರಾಡ್ ನಿಂದ ಹಲ್ಲೆ ನಡೆಸಿ ವಿದ್ಯಾರ್ಥಿಯನ್ನು ಕೊಲೆಗೈದು ಪರಾರಿಯಾಗಿದ್ದ ಬಾಲಕನನ್ನು ಕೊನೆಗೂ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಎರಡು ದಿನಗಳ ಹಿಂದೆ ಹಾಸ್ಟೆಲ್ ನಲ್ಲಿ ಮಲಗಿದ್ದ 8 ವಿದ್ಯಾರ್ಥಿಗಳು ಹಗೂ ವಾರ್ಡನ್ ಮೇಲೆ ಹಲ್ಲೆ ನಡೆಸಿ ಬಾಲಕ ಪರಾರಿಯಗಿದ್ದ. ಘಟನೆಯಲ್ಲಿ ಗಂಭೀರವಾಗಿ ಹಲ್ಲೆಗೊಳಗಾಗಿದ್ದ ಓರ್ವ ವಿದ್ಯಾರ್ಥಿ ಸಾವನ್ನಪ್ಪಿದ್ದ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಆರೋಪಿ ಬಾಲಕನ ಪತ್ತೆಗಾಗಿ ಪೊಲೀಸರ ವಿಶೇಷ ತಂಡ ರಚಿಸಲಾಗಿತ್ತು. ಬಳ್ಳಾರಿ ಗ್ರಾಮೀಣ ಪೊಲೀಸರು ಬಾಲಕನ್ನು ಪತ್ತೆ ಮಾಡಿ ವಶಕ್ಕೆ ಪಡೆದಿದ್ದಾರೆ. ಬಾಲಕ ತನ್ನ ಊರು ಗೋನಾಳ ಗ್ರಾಮದ ಹೊರವಲಯದಲ್ಲಿರುವ ಲೇಔಟ್ ಒಂದರಲ್ಲಿ ಅಡಗಿ ಕುಳಿತಿದ್ದ. ಸದ್ಯ ಬಾಲಕನನ್ನು ವಶಕ್ಕೆ ಪಡೆಯಲಾಗಿದ್ದು, ವೈದ್ಯರ ಬಳಿ ಕೌನ್ಸಿಲಿಂಗ್ ಕೊಡಿಸಲಾಗುತ್ತಿದೆ.

ಬಳ್ಳಾರಿ ಬ್ರೂಸ್ ಪೇಟೆ ಠಾಣೆ ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular