BIG BREAKING: ಜೈಲಲ್ಲಿ ರಾಜಾತಿಥ್ಯ ಪಡೆದ ನಟ ದರ್ಶನ್ ಗೆ ಬಿಗ್ ಶಾಕ್: ಬಳ್ಳಾರಿ ಜೈಲಿಗೆ ಶಿಫ್ಟ್

ಬೆಂಗಳೂರು: ಬಳ್ಳಾರಿ ಜೈಲಿಗೆ ನಟ ದರ್ಶನ್ ಅವರನ್ನು ಶಿಫ್ಟ್ ಮಾಡಲಾಗುವುದು. ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ನಟ ದರ್ಶನ್ ಗೆ ರಾಜಾತಿಥ್ಯ ನೀಡಿದ ವಿಚಾರಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಅವರನ್ನು ಬಳ್ಳಾರಿ ಜೈಲಿಗೆ ಸ್ಥಳಾಂತರಿಸಲು ಒಪ್ಪಿಗೆ ನೀಡಲಾಗಿದೆ.

24ನೇ ಎಸಿಎಂಎಂ ನ್ಯಾಯಾಲಯದಿಂದ ದರ್ಶನ್ ಸ್ಥಳಾಂತರಕ್ಕೆ ಆದೇಶ ನೀಡಲಾಗಿದೆ.

ನಟ ದರ್ಶನ್ ಗೆ ಜೈಲಿನಲ್ಲಿ ರಾಜಾತಿಥ್ಯ ನೀಡಿದ ಪ್ರಕರಣ ಬಯಲಿಗೆ ಬರುತ್ತಿದ್ದಂತೆ ಜೈಲಿನ 7 ಸಿಬ್ಬಂದಿಯನ್ನು ಅಮಾನತು ಮಾಡಲಾಗಿದೆ. ದರ್ಶನ್ ಅವರನ್ನು ಬಳ್ಳಾರಿ ಜೈಲಿಗೆ ಸ್ಥಳಾಂತರ ಮಾಡಲು ನ್ಯಾಯಾಲಯದಿಂದ ಅನುಮತಿ ದೊರೆತಿದೆ.

ಉಳಿದ ಆರೋಪಿಗಳನ್ನು ಬೇರೆ ಜೈಲಿಗೆ ಸ್ಥಳಾಂತರಿಸಲು ಕೂಡ ಕೋರ್ಟ್ ಅನುಮತಿ ನೀಡಿದೆ. ಪವನ್, ರಾಘವೇಂದ್ರ, ನಂದೀಶ್ ಅವರನ್ನು ಮೈಸೂರು ಜೈಲಿಗೆ ಸ್ಥಳಾಂತರ ಮಾಡಲಾಗುವುದು.

ಜಗದೀಶ್, ಲಕ್ಷ್ಮಣ್ ಶಿವಮೊಗ್ಗ ಜೈಲಿಗೆ, ಧನರಾಜ್ ಧಾರವಾಡ ಸೆಂಟ್ರಲ್ ಜೈಲಿಗೆ, ವಿನಯ್ ವಿಜಯಪುರ ಜೈಲಿಗೆ, ನಾಗರಾಜ ಕಲಬುರಗಿ ಸೆಂಟ್ರಲ್ ಜೈಲಿಗೆ ಶಿಫ್ಟ್ ಮಾಡಲಾಗುವುದು. ಪ್ರದೋಶ್ ನನ್ನು ಬೆಳಗಾವಿ ಜೈಲಿಗೆ ಸ್ಥಳಾಂತರ ಮಾಡಲಾಗುವುದು.

ಪವಿತ್ರ ಗೌಡ, ಅನು ಕುಮಾರ್, ದೀಪಕ್ ಪರಪ್ಪನ ಅಗ್ರಹಾರ ಜೈಲಿನಲ್ಲಿ ಇದ್ದಾರೆ. ರವಿ, ಕಾರ್ತಿಕ್, ನಿಖಿಲ್, ಕೇಶವಮೂರ್ತಿ ಅವರನ್ನು ಈಗಾಗಲೇ ತುಮಕೂರು ಜೈಲಿನಲ್ಲಿ ಇರಿಸಲಾಗಿದೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read