HomeKarnatakaBIG NEWS: ಬಾಣಂತಿಯರ ಸಾವು ಪ್ರಕರಣ: ಸಮಿತಿ ವರದಿ ಬಂದ ಬಳಿಕ ತಪ್ಪಿತಸ್ಥರ ವಿರುದ್ಧ ಕ್ರಮ:...

BIG NEWS: ಬಾಣಂತಿಯರ ಸಾವು ಪ್ರಕರಣ: ಸಮಿತಿ ವರದಿ ಬಂದ ಬಳಿಕ ತಪ್ಪಿತಸ್ಥರ ವಿರುದ್ಧ ಕ್ರಮ: ಸಿಎಂ ಸಿದ್ದರಾಮಯ್ಯ

ಚಾಮರಾಜನಗರ: ಬಳ್ಳಾರಿ ಬಿಮ್ಸ್ ಆಸ್ಪತ್ರೆಯಲ್ಲಿ ಬಾಣಂತಿಯರ ಸರಣಿ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಚಾಮರಾಜನಗರದ ನರಿಪುರ ಗ್ರಾಮದ ಹೆಲಿಪ್ಯಾಡ್ ನಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಇಂದು ಆರೋಗ್ಯ ಸಚಿವರು ಹಾಗೂ ಇಲಾಖೆ ಅಧಿಕಾರಿಗಳು ಬಳ್ಳಾರಿ ಆಸ್ಪತ್ರೆಗೆ ಭೇಟಿ ನೀಡಿ ಬಾಣಂತಿಯರ ಸಾವಿನ ಕುರಿತು ಪರಿಶೀಲನೆ ನಡೆಸಲಿದ್ದಾರೆ ಎಂದರು.

ಬಳ್ಳಾರಿಯಲ್ಲಿ ನಾಲ್ವರು ಬಾಣಂತಿಯರು ಮರಣ ಹೊಂದಿದಾಗ ಸಭೆ ಕರೆಯಲಾಗಿತ್ತು. ಐದನೇ ಬಾಣಂತಿ ಮೃತಪಟ್ಟಿರುವ ಬಗ್ಗೆ ನಿನ್ನೆ ನಡೆದ ಸಚಿವ ಸಂಪುಟ ಸಭೆಯಲ್ಲಿಯೂ ಚರ್ಚೆ ನಡೆದಿದೆ. ಕಳಪೆ ಗುಣಮಟ್ಟದ ಔಷಧ ಸರಬರಾಜು ಮಾಡುತ್ತಿರುವ ಕಂಪನಿಯನ್ನು ಕಪ್ಪುಪಟ್ಟಿಗೆ ಸೇರಿಸಲಾಗಿದೆ ಹಾಗೂ ಔಷಧ ನಿಯಂತ್ರಕರನ್ನು ಅಮಾನತು ಮಾಡಲಾಗಿದೆ ಎಂದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಅಭಿವೃದ್ಧಿ ಆಯುಕ್ತರ ಅಧ್ಯಕ್ಷತೆಯಲ್ಲಿ ಸಮಿತಿಯನ್ನು ರಚಿಸಿ ವರದಿ ಸಲ್ಲಿಸಲು ಸೂಚಿಸಲಾಗಿದೆ. ವರದಿ ಬಂದ ನಂತರ ತಪ್ಪಿತಸ್ಥರ ಮೇಲೆ ಕ್ರಮ ಕೈಗೊಳ್ಳಲಾಗುವುದು. ಈಗಾಗಲೇ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ತಿಳಿಸಿದರು.

For Latest News Updates, Join Our Whatsapp Community🚩
RELATED ARTICLES

Most Popular