ಬಳ್ಳಾರಿ: ಪಿಎಸ್ಐ ಕೆ.ಕಾಳಿಂಗ ಅವರ ಪತ್ನಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬಳ್ಳಾರಿಯಲ್ಲಿ ನಡೆದಿದೆ.
ಬಳ್ಳಾರಿಯ ಮೋಕಾ ಠಾಣೆ ಪಿಎಸ್ಐ ಕೆ.ಕಾಳಿಂಗ ಅವರ ಪತ್ನಿ ಚೈತ್ರಾ ಆತ್ಮಹತ್ಯೆಗೆ ಶರಣಾಗಿರುವ ಮಹಿಳೆ. ಇಂದು ಬೆಳಿಗ್ಗೆ ಪತಿ ಹಾಗೂ ಮಕ್ಕಳನ್ನು ಸ್ವಾತಂತ್ರ್ಯ ದಿನಾಚರಣೆಗೆ ಕಳುಹಿಸಿದ ಬಳಿಕ ಮನೆಯಲ್ಲಿ ನೇಣಿಗೆ ಕೊರಳೊಡ್ಡಿದ್ದಾರೆ.
ಚೈತ್ರಾ ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಘಟನಾ ಸ್ಥಳಕ್ಕೆ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ.