ಬಳ್ಳಾರಿ: ಕೃಷಿ ಇಲಾಖೆಯ ಮೇಲಾಧಿಕಾರಿಗಳ ಕಿರುಕುಳಕ್ಕೆ ಮನನೊಂದ ಗುತ್ತಿಗೆ ನೌಕರ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬಳ್ಳಾರಿಯಲ್ಲಿ ನಡೆದಿದೆ.
ಸಂಡೂರು ಕೃಷಿ ಇಲಾಖೆ ವಿಭಾಗದಲ್ಲಿ ಗುತ್ತಿಗೆ ಆಧಾರದಲ್ಲಿ ಕಾರ್ಯನಿರ್ವಹಿಸುತ್ತಿದ್ದ ನೌಕರ ರಾಜು ಆತ್ಮಹತ್ಯೆ ಮಾಡಿಕೊಂಡವರು. ಗೌರಿಪುರ ಗ್ರಾಮದ ನಿವಾಸಿಯಾಗಿದ್ದ ರಾಜು ಕೃಷಿ ಇಲಾಖೆಯಲ್ಲಿ ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿದ್ದರು.
ಇಲಾಖೆಯ ಅಧಿಕಾರಿಗಳ ವರ್ತನೆಯಿಂದ ತೀವ್ರವಾಗಿ ಮನನೊಂದಿದ್ದ ರಾಜು ಮೂರು ಪುಟಗಳ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿದ್ದಾರೆ. ಅಧಿಕಾರಿಯೊಬ್ಬರು ನಿರಂತರವಾಗಿ ಕಿರುಕುಳ ನೀಡುತ್ತಿರುವ ಬಗ್ಗೆ ಡೆತ್ ನೋಟ್ ನಲ್ಲಿ ರಾಜು ಉಲ್ಲೇಖಿಸಿದ್ದಾರೆ ಎನ್ನಲಾಗಿದೆ.
ತನ್ನ ಸಾವಿಗೆ ಯಾವೆಲ್ಲ ಅಧಿಕರಿಗಳು ಕಾರಣ ಎಂಬುದನ್ನು ಬರೆದಿಟ್ಟಿರುವ ರಾಜು ನೇಣಿಗೆ ಕೊರಳೊಡ್ಡಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಆತ್ಮಹತ್ಯೆ ತಡೆ ಸಹಾಯವಾಣಿ: ಎಲ್ಲಾ ಸಮಸ್ಯೆಗಳಿಗೂ ಸಾವು ಪರಿಹಾರವಲ್ಲ. ಆತ್ಮಹತ್ಯೆ ತಡೆ ಸಹಾಯವಾಣಿ ಸಂಖ್ಯೆ (022)27546669

