HomeLatest Newsಅನುಭವದ ಆಧಾರದ ಮೇಲೆ ಬ್ಯಾಲೇಟ್ ಪೇಪರ್ ಮೂಲಕ ಚುನಾವಣೆಗೆ ತೀರ್ಮಾನ: ಸಿಎಂ ಸಿದ್ದರಾಮಯ್ಯ

ಅನುಭವದ ಆಧಾರದ ಮೇಲೆ ಬ್ಯಾಲೇಟ್ ಪೇಪರ್ ಮೂಲಕ ಚುನಾವಣೆಗೆ ತೀರ್ಮಾನ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಮುಂಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಬ್ಯಾಲೆಟ್ ಪೇಪರ್ ಬಳಸಲು ಸರ್ಕಾರ ನಿರ್ಧರಿಸಿರುವ ವಿಚಾರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ. ಇವಿಎಂ ಬದಲಿಗೆ ಬ್ಯಾಲೆಟ್ ಮೂಲಕ ಚುನಾವಣೆ ಮಾಡಬೇಕೆನ್ನುವುದು ನಮ್ಮ ಉದ್ದೇಶವಾಗಿದ್ದು, ನಮ್ಮ ಅನುಭವದ ಮೇಲೆ ನಾವು ಈ ತೀರ್ಮಾನ ಮಾಡಿದ್ದೇವೆ ಎಂದರು.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಅನೇಕ ದೇಶಗಳು ಇವಿಎಂ ಬಳಸಿ ಪುನಃ ಬ್ಯಾಲೆಟ್ ಪೇಪರ್ ಮೂಲಕ ಚುನಾವಣೆ ಮಾಡುತ್ತಿದ್ದಾರೆ. ನಮ್ಮಲಿಯೂ ಬ್ಯಾಲೆಟ್ ಪೇಪರ್ ಮೂಲಕ ಚುನಾವಣೆಗೆ ಸರ್ಕಾರ ನಿರ್ಧರಿಸಿದೆ ಎಂದರು.

ಇನ್ನು ಧರ್ಮಸ್ಥಳ ಪ್ರಕರಣವನ್ನು ಎನ್.ಐ. ಎ ಗೆ ವಹಿಸಬೇಕೆಂದು ಸ್ವಾಮೀಜಿಗಳು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ದೂರು ನೀಡಿದ್ದಾರೆ ಎಂಬ ವಿಚಾರವಾಗಿ, ರಾಜ್ಯ ಸರ್ಕಾರ ಎಸ್.ಐ.ಟಿ ರಚನೆ ಮಾಡಿದ್ದು ತನಿಖೆ ನಡೆಯುತ್ತಿದೆ. ಎಸ್ ಐಟಿಯವರು ಪೊಲೀಸಿನವರೇ. ಅವರು ಸಮರ್ಪಕವಾಗಿ ತನಿಖೆ ನಡೆಸುತ್ತಿಲ್ಲವೇ? ಎಂದು ಪ್ರಶ್ನಿಸಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular