ಬೆಂಗಳೂರು: ಮುಂಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ಬ್ಯಾಲೆಟ್ ಪೇಪರ್ ಬಳಕೆ ಮಾಡಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸಚಿವ ಸಂಪುಟ ಸಭೆಯಲ್ಲಿ ಈ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ. ಕ್ಯಾಬಿನೆಟ್ ಸಭೆ ಬಳಿಕ ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿದ ಕಾನೂನು ಸಚಿವ ಹೆಚ್.ಕೆ.ಪಾಟೀಲ್, ಮುಂಬರುವ ಎಲ್ಲಾ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಇವಿಎಂ ಬದಲು ಬ್ಯಾಲೆಟ್ ಪೇಪರ್ ಬಳಸಲು ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ. ಈ ಬಗ್ಗೆ ಚುನಾವಣಾ ಆಯೋಗಕ್ಕೂ ಶಿಫಾರಸು ಮಾಡಲಾಗುವುದು. ಈ ಹಿನ್ನೆಲೆಯಲ್ಲಿ ಮುಂಬರುವ ಚುನಾವಣೆಗಳಲ್ಲಿ ಬ್ಯಾಲೆಟ್ ಪೇಪರ್ ಬಳಕೆ ಮಾಡಲಾಗುವುದು ಎಂದರು.