HomeBusiness2027ಕ್ಕೆ ಡೀಸೆಲ್ ಚಾಲಿತ 4 ಚಕ್ರ ವಾಹನ ನಿಷೇಧ ಸಾಧ್ಯತೆ: ಪೆಟ್ರೋಲಿಯಂ ಸಚಿವಾಲಯಕ್ಕೆ ಉನ್ನತ ಮಟ್ಟದ...

2027ಕ್ಕೆ ಡೀಸೆಲ್ ಚಾಲಿತ 4 ಚಕ್ರ ವಾಹನ ನಿಷೇಧ ಸಾಧ್ಯತೆ: ಪೆಟ್ರೋಲಿಯಂ ಸಚಿವಾಲಯಕ್ಕೆ ಉನ್ನತ ಮಟ್ಟದ ಶಿಫಾರಸು

ನವದೆಹಲಿ: 2027 ರ ವೇಳೆಗೆ ಡೀಸೆಲ್ ಚಾಲಿತ ನಾಲ್ಕು ಚಕ್ರ ವಾಹನಗಳನ್ನು ನಿಷೇಧಿಸಲು ಸಮಿತಿಯು ಸರ್ಕಾರಕ್ಕೆ ಶಿಫಾರಸು ಮಾಡಿದೆ. 2027ಕ್ಕೆ ಡೀಸೆಲ್ ಕಾರ್, ಜೀಪ್ ನಿಷೇಧವಾಗುವ ಸಾಧ್ಯತೆ ಇದೆ. ಉನ್ನತ ಮಟ್ಟದ ಸಮಿತಿಯೊಂದು ಈ ಕುರಿತಾಗಿ ಪೆಟ್ರೋಲಿಯಂ ಸಚಿವರಿಗೆ ಶಿಫಾರಸು ಮಾಡಿದೆ.

10 ಲಕ್ಷ ಜನಸಂಖ್ಯೆ ಇರುವ ನಗರಗಳಲ್ಲಿ ಇದು ಜಾರಿಯಾಗುವ ಸಾಧ್ಯತೆ ಇದೆ. 2027ರ ವೇಳೆಗೆ 10 ಲಕ್ಷ ಜನಸಂಖ್ಯೆಗಿಂತ ಹೆಚ್ಚಿನ ಬೃಹತ್ ಮತ್ತು ಹೆಚ್ಚು ಮಾಲಿನ್ಯಕಾರಕ ನಗರಗಳಲ್ಲಿ ಡೀಸೆಲ್ ಚಾಲಿತ ನಾಲ್ಕು ಚಕ್ರವಾಹನ ಬಳಕೆ ನಿಷೇಧಿಸಿ ಎಲೆಕ್ಟ್ರಿಕ್ ಮತ್ತು ಅನಿಲ ಇಂಧನ ಆಧರಿತ ವಾಹನ ಬಳಕೆಗೆ ಅನುಮತಿ ನೀಡಬೇಕೆಂದು ಉನ್ನತ ಮಟ್ಟದ ಸಮಿತಿ ಶಿಫಾರಸು ಮಾಡಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇಂಧನ ಇಲಾಖೆ ಮಾಜಿ ಕಾರ್ಯದರ್ಶಿ ತರುಣ್ ಕಪೂರ್ ನೇತೃತ್ವದ ಇಂಧನ ಪರಿವರ್ತನೆ ಸಲಹಾ ಸಮಿತಿ ವತಿಯಿಂದ ಪೆಟ್ರೋಲಿಯಂ ಸಚಿವಾಲಯಕ್ಕೆ ಸಲ್ಲಿಸಲಾದ ವರದಿಯಲ್ಲಿ ಈ ಕುರಿತು ಶಿಫಾರಸು ಮಾಡಲಾಗಿದೆ. ಹಂತ ಹಂತವಾಗಿ ಡೀಸೆಲ್ ಮತ್ತು ಪೆಟ್ರೋಲ್ ಬಳಕೆಯನ್ನು ಹೇಗೆ ಕಡಿಮೆ ಮಾಡಬೇಕು ಎಂಬುದರ ಕುರಿತು ವರದಿಯಲ್ಲಿ ಹೇಳಲಾಗಿದ್ದು, 2027ರ ವೇಳೆಗೆ ಡೀಸೆಲ್ ಕಾರ್, ಜೀಪ್ ಬಳಕೆ ನಿಷೇಧಿಸಲು ತಿಳಿಸಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular